ಉಡುಪಿ.ಫೆ,7- ಜಿಲ್ಲಾಯ ಕುಂದಾಪುರದ ಸರಕಾರಿ ಪಿಯು ಕಾಲೇಜು ಬಳಿ ಮಾರಕಾಸ್ತ್ರಗಳನ್ನು ಹೊಂದಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ುಂದಾಪುರ ಸಮೀಪದ ಗಂಗೊಳ್ಳಿ ಗ್ರಾಮ ಅಬ್ದುಲ್ ಮಜೀದ್ (32) ಮತ್ತು ರಜಬ್ (41) ಎಂದು ಗುರುತಿಸಲಾಗಿದೆ. ಹಿಜಾಬ್ ಅನ್ನು ನಿಷೇಧಿಸುವ ಅಧಿಕಾರಿಗಳ ನಿರ್ಧಾರದ ವಿರುದ್ಧ ನಡೆದ ಪ್ರತಿಭಟನೆ ಪ್ರತಿಭಟನೆಯಲ್ಲಿ ಬಂಧಿತರನ್ನು ಭಾಗಿಯಾಗಿದ್ದರು ಎಂದು ಹೇಳಲಾಗಿದೆ.
ಐವರು ಮಾರಕಾಸ್ತ್ರಗಳನ್ನು ಹೊತ್ತೊಯ್ಯುತ್ತಿದ್ದರು ಮತ್ತು ಅವರಲ್ಲಿ ಮೂವರು ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ಜಿಲ್ಲಾ ಪೊಲೀಸರು ತಿಳಿಸಿದ್ದಾರೆ. ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
