ಇಬ್ಬರ ಬಂಧನ : 44 ಲಕ್ಷ ಮೌಲ್ಯದ ಗಾಂಜಾ ವಶ

Social Share

ಬೆಂಗಳೂರು, ಜ.25- ಐಷಾರಾಮಿ ಜೀವನಕ್ಕಾಗಿ ಹಣ ಗಳಿಸಲು ಮಾದಕ ವಸ್ತು ಸರಬರಾಜು ಮಾಡುತ್ತಿದ್ದ ಆಂಧ್ರ ಪ್ರದೇಶದ ಇಬ್ಬರನ್ನು ಬಸವನಗುಡಿ ಠಾಣೆ ಪೊಲೀಸರು ಬಂಧಿಸಿ 44 ಲಕ್ಷ ರೂ. ಮೌಲ್ಯದ ಗಾಂಜಾ ವಶಪಡಿಸಿಕೊಂಡಿದ್ದಾರೆ.ಪಲ್ಲನಾಗರಾಜ್(30) ಮತ್ತು ನೇಗುಲ ನೂಕರಾಜು(26) ಬಂಧಿತರು.

ಮಾದಕ ವಸ್ತುವನ್ನು ಹೊರರಾಜ್ಯದಿಂದ ತಂದು ಬಸವನಗುಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾರಾಟ ಮಾಡಲು ಯತ್ನಿಸುತ್ತಿದ್ದಾಗ ಪೊಲೀಸರು ಖಚಿತ ಮಾಹಿತಿ ಮೇರೆಗೆ ಸ್ಥಳಕ್ಕೆ ದಾವಿಸಿ ಇಬ್ಬರನ್ನು ಬಂಧಿಸಿ 116 ಕೆಜಿ ಗಾಂಜಾ ಮತ್ತು ಎರಡು ಮೊಬೈಲ್, ನಗದು ವಶಪಡಿಸಿಕೊಂಡಿದ್ದಾರೆ.

ಸಮಾಜ ಕಲ್ಯಾಣ ಇಲಾಖೆ ಹೆಸರಲ್ಲಿ ವಂಚನೆ ವಂಚಿಸುತ್ತಿದ್ದ ಮೂವರ ಬಂಧನ

ದಕ್ಷಿಣ ವಿಭಾಗದ ಉಪಪೊಲೀಸ್ ಆಯುಕ್ತ ಕೃಷ್ಣಕಾಂತ್, ಜಯನಗರ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತ ಶ್ರೀನಿವಾಸ್ ಅವರ ಮಾರ್ಗದರ್ಶನದಲ್ಲಿ ಇನ್ಸ್‍ಪೆಕ್ಟರ್ ಸುಬ್ರಮಣ್ಯ ಸ್ವಾಮಿ ನೇತೃತ್ವದ ತಂಡ ಈ ಕಾರ್ಯಾಚರಣೆ ಕೈಗೊಂಡಿತ್ತು.

Two, arrested, ganja, seized,

Articles You Might Like

Share This Article