ಬೆಂಗಳೂರು,ಜ.23- ಸಿನಿಮಾ ನಿರ್ಮಾಪಕ ಉಮಾಪತಿ ಅವರ ಕೊಲೆಗೆ ಸಂಚು ರೂಪಿಸಿದ್ದ ಪ್ರಕರಣದಲ್ಲಿ ತಲೆಮರೆಸಿ ಕೊಂಡಿದ್ದ ಆರೋಪಿಗಳಿಬ್ಬರನ್ನು ಬಂಧಿಸುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ.
ದರ್ಶನ್ ಮತ್ತು ಸಂಜು ಬಂಧಿತ ಆರೋಪಿಗಳು,ಸುಂಕದ ಕಟ್ಟೆಯ ಚೈತ್ರಾ ಬಾರ್ ಬಳಿ ಆರೋಪಿಗಳಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸರು ಅವರನ್ನು ಬಂಧಿಸಿ, ಪ್ರಕರಣದ ತನಿಖೆಗಾಗಿ ಆರೋಪಿಗಳನ್ನು ಜಯನಗರ ಠಾಣೆ ಪೊಲೀಸರ ವಶಕ್ಕೆ ನೀಡಲಾಗಿದೆ.
ಕಳೆದ ಒಂದು ವರ್ಷದ ಹಿಂದೆ ಈ ಪ್ರಕರಣದ ಆರೋಪಿಗಳಾಗಿದ್ದ ಈ ಇಬ್ಬರು ತಲೆಮರೆಸಿಕೊಂಡಿದ್ದರು. ಸಿಸಿಬಿ ಸಂಘಟಿತ ಅಪರಾಧ ದಳ (ಪಶ್ಚಿಮ)ಅಧಿಕಾರಿಗಳು ಮತ್ತು ಸಿಬ್ಬಂದಿಗಳ ತಂಡ ರೊಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ಈ ತನಕ ಈ ಪ್ರಕರಣದಲ್ಲಿ 16 ಮಂದಿಯನ್ನು ಬಂದಿಸಲಾಗಿದೆ.
