ಮಂಡ್ಯ,ಸೆ.6- ಕಾವೇರಿ ನದಿಯಲ್ಲಿ ಈಜಲು ಹೋದ ಇಬ್ಬರು ಬಿಬಿಎಂ ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಶ್ರೀರಂಗಪಟ್ಟಣದ ಬಲಮುರಿಯಲ್ಲಿ ನಡೆದಿದೆ.
ಬೆಂಗಳೂರಿನ ಕೆ.ಆರ್.ಪುರಂ ನಿವಾಸಿಗಳಾದ ವೆಂಕಟೇಶ(21), ವಿಲಿಯಮ್‌ಸ್ಯಾಮ್(21) ಮೃತಪಟ್ಟ ವಿದ್ಯಾರ್ಥಿಗಳು.
ಈ ಇಬ್ಬರು ಬಿಬಿಎಂ ಅಂತಿಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದು, ಸ್ನೇಹಿತರೊಂದಿಗೆ ಶ್ರೀರಂಗ ಪಟ್ಟಣಕ್ಕೆ ಪ್ರವಾಸಕ್ಕೆ ಬಂದಿದ್ದರು. ಎಡಮುರಿ ಬಳಿ ಈಜಲು ಹೋದಾಗ ಆಯತಪ್ಪಿ ಆಳವಾದ ನೀರಿಗೆ ಬಿದ್ದು, ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಕೂಡಲೇ ಸ್ನೇಹಿತರು ಕೆಆರ್‌ಎಸ್ ಪೊಲೀಸ್ ಠಾಣೆಗೆ ವಿಷಯ ತಿಳಿಸಿದ್ದು, ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿಗಳು ಹಾಗೂ ಪೊಲೀಸರು ಮೃತಪಟ್ಟ ವಿದ್ಯಾರ್ಥಿಗಳ ಶವವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆ ನಡೆಸಿ ಮೃತರ ವಾರಸುದಾರರಿಗೆ ಒಪ್ಪಿಸಿದ್ದಾರೆ. ಈ ಸಂಬಂಧ ಕೆ.ಆರ್.ಎಸ್. ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.