Friday, August 29, 2025
Homeಜಿಲ್ಲಾ ಸುದ್ದಿಗಳು | District Newsಮಂಡ್ಯ | Mandyaಕೆಎಸ್‌‍ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ಇಬ್ಬರು ಬೈಕ್‌ ಸವಾರರ ದುರ್ಮರಣ

ಕೆಎಸ್‌‍ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ಇಬ್ಬರು ಬೈಕ್‌ ಸವಾರರ ದುರ್ಮರಣ

Two bikers die after being hit by KSRTC bus

ಕೆ.ಆರ್‌.ಪೇಟೆ,ಆ.29- ಅತೀ ವೇಗ ಹಾಗೂ ಅಜಾಗರೂಕತೆಯಿಂದ ಬರುತ್ತಿದ್ದ ಕೆಎಸ್‌‍ಆರ್‌ಟಿಸಿ ಬಸ್ಸೊಂದು ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸವಾರರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕಿಕ್ಕೇರಿ ಪೊಲೀಸ್‌‍ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಉಮೇಶ್‌(24) ಮತ್ತು ದಿನೇಶ್‌(24) ಮೃತಪಟ್ಟ ಬೈಕ್‌ ಸವಾರರು.

ಮಂಡ್ಯ ಜಿಲ್ಲೆ ಕೆ.ಆರ್‌.ಪೇಟೆ ತಾಲ್ಲೂಕಿನ ಅಂಚೆಬೀರನಹಳ್ಳಿ ಬಳಿ ಇವರಿಬ್ಬರೂ ಬೈಕ್‌ನಲ್ಲಿ ಹೋಗುತ್ತಿದ್ದಾಗ ಅದೇ ಮಾರ್ಗವಾಗಿ ಬರುತ್ತಿದ್ದ ಕೆಎಸ್‌‍ಆರ್‌ಟಿಸಿ ಬಸ್‌‍ ಇವರ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿದ್ದಾರೆ.

ಸುದ್ದಿ ತಿಳಿದು ಕಿಕ್ಕೇರಿ ಠಾಣಾ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಇಬ್ಬರ ಮೃತದೇಹಗಳನ್ನು ಸರ್ಕಾರಿ ಆಸ್ಪತ್ರೆಗೆ ರವಾನಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.ಬಸ್‌‍ ಚಾಲಕನ ಅಜಾಗರೂಕತೆಯೇ ಅಪಘಾತಕ್ಕೆ ಕಾರಣ ಎಂದು ಪ್ರತ್ಯಕ್ಷದರ್ಶಿಗಳು ಹೇಳುತ್ತಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

RELATED ARTICLES

Latest News