Friday, November 22, 2024
Homeಇದೀಗ ಬಂದ ಸುದ್ದಿಚರ್ಚೆಯಿಲ್ಲದೆ ವಿಧಾನಸಭೆಯಲ್ಲಿ 2 ವಿಧೇಯಕಗಳ ಅಂಗೀಕಾರ

ಚರ್ಚೆಯಿಲ್ಲದೆ ವಿಧಾನಸಭೆಯಲ್ಲಿ 2 ವಿಧೇಯಕಗಳ ಅಂಗೀಕಾರ

ಬೆಂಗಳೂರು ಫೆ.23- ಬಗರ್‍ಹುಕುಂ ಸಾಗುವಳಿ ಮಂಜೂರಾತಿ ಸಮಿತಿಗೆ ಶಾಸಕರಿಗೆ ಪರ್ಯಾಯವಾಗಿ ಸದಸ್ಯರ ನೇಮಕಾತಿಗೆ ಅನುಕೂಲವಾಗುವಂತೆ ತಿದ್ದುಪಡಿ ಮಾಡಲಾಗಿರುವ ಕರ್ನಾಟಕ ಭೂ ಕಂದಾಯ ವಿಧೇಯಕಕ್ಕೆ ಗದ್ದಲದ ನಡುವೆ ಅಂಗೀಕಾರ ದೊರೆಯಿತು.

ಕಂದಾಯ ಸಚಿವ ಕೃಷ್ಣಭೈರೇಗೌಡ ವಿಧಾನಸಭೆಯಲ್ಲಿ ಮಸೂದೆಯ ಪರ್ಯಾಲೋಚನೆಗೆ ಮನವಿ ಮಾಡಿದರು. ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಸಚಿವರು, ವಿಧಾನಸಭಾಧ್ಯಕ್ಷರು ಸೇರಿದಂತೆ ಹಿರಿಯ ಶಾಸಕರಿಗೆ ಕಾರ್ಯದೊತ್ತಡದಿಂದಾಗಿ ಅಥವಾ ಬೇರೆ ಬೇರೆ ಕಾರ್ಯಗಳಿಗೆ ತಮ್ಮ ಕ್ಷೇತ್ರದ ಬಗರ್ ಹುಕುಂ ಸಾಗುವಳಿ ಮಂಜೂರಾತಿ ಸಮಿತಿ ಸಭೆಯಲ್ಲಿ ಭಾಗವಹಿಸಲು ಕಷ್ಟಸಾಧ್ಯವಾಗುತ್ತದೆ. ಅಂತಹ ವೇಳೆ ಶಾಸಕರ ಲಿಖಿತ ಸಹಮತದ ಮೇರೆಗೆ ಸಮಿತಿಯ ಪರ್ಯಾಯ ಸದಸ್ಯರನ್ನು ನೇಮಿಸಲು ಈ ವಿಧೇಯಕದಲ್ಲಿ ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದರು.

ವೀಲಿಂಗ್ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ಅಪ್‍ಲೋಡ್ : ಸವಾರ ಪೊಲೀಸ್ ವಶಕ್ಕೆ

ಜೊತೆಗೆ ತಮ್ಮ ಕ್ಷೇತ್ರದಲ್ಲಿ ಲಭ್ಯ ಇರುವ ಸರ್ಕಾರಿ ಜಮೀನಿನ ಬಗ್ಗೆಯೂ ಮಾಹಿತಿ ಪಡೆದುಕೊಳ್ಳಲು ಶಾಸಕರಿಗೆ ಅವಕಾಶ ಕಲ್ಪಿಸಲಾಗಿದೆ ಎಂದರು. ವಿಧೇಯಕ ಮಂಡನೆ ವೇಳೆ ಬಿಜೆಪಿ-ಜೆಡಿಎಸ್ ಶಾಸಕರು ಪ್ರತಿಭಟನೆ ನಡೆಸುತ್ತಿದ್ದರು. ಹೀಗಾಗಿ ಯಾವುದೇ ಚರ್ಚೆ ಇಲ್ಲದೆ ವಿಧೇಯಕ ಮಂಡನೆಯಾಯಿತು. ಸಭಾಧ್ಯಕ್ಷ ಯು.ಟಿ.ಖಾದರ್ ಚರ್ಚೆಯಲ್ಲಿ ಭಾಗವಹಿಸುವಂತೆ ಹಲವು ಬಾರಿ ಮನವಿ ಮಾಡಿದರೂ ಪ್ರಯೋಜನವಾಗಲಿಲ್ಲ.

ಬಳಿಕ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್, ಕರ್ನಾಟಕ ವಿಧಾನಮಂಡಲ ಅನರ್ಹತಾ ನಿವಾರಣಾ ತಿದ್ದುಪಡಿ ವಿಧೇಯಕವನ್ನು ಪರ್ಯಾಲೋಚನೆಗೆ ಮನವಿ ಮಾಡಿದರು.
ವಿಧಾನಪರಿಷತ್ ಮತ್ತು ವಿಧಾನಸಭೆಯ ಸದಸ್ಯರು ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಯವರ ಸಲಹೆಗಾರರು, ಯಾವುದೇ ಆಯೋಗದ ಅಧ್ಯಕ್ಷರು, ಸದಸ್ಯರು, ರಾಜ್ಯ ಪರಿವರ್ತನಾ ಸಂಸ್ಥೆಯ ಉಪಾಧ್ಯಕ್ಷರ ಹುದ್ದೆಗೆ ನೇಮಕಗೊಂಡ ಸಂದರ್ಭದಲ್ಲಿ ಅನರ್ಹತೆಗೆ ಒಳಗಾಗುವ ಅವಕಾಶದಿಂದ ವಿನಾಯ್ತಿ ನೀಡಲಾಗಿದೆ ಎಂದು ವಿವರಿಸಿದರು. ಈ ವಿಧೇಯಕ ಕೂಡ ಯಾವುದೇ ಚರ್ಚೆ ಇಲ್ಲದೆ ಅಂಗೀಕಾರಗೊಂಡಿತು.

RELATED ARTICLES

Latest News