Wednesday, March 12, 2025
Homeಜಿಲ್ಲಾ ಸುದ್ದಿಗಳು | District Newsಬೆಳಗಾವಿ | Belagaviಪಾಲಿಕೆಯ ಇಬ್ಬರು ಬಿಜೆಪಿ ಸದಸ್ಯರ ಸದಸ್ಯತ್ವ ಅನರ್ಹ

ಪಾಲಿಕೆಯ ಇಬ್ಬರು ಬಿಜೆಪಿ ಸದಸ್ಯರ ಸದಸ್ಯತ್ವ ಅನರ್ಹ

Two BJP members of the corporation are disqualified

ಬೆಳಗಾವಿ,ಫೆ.11- ಪತ್ನಿ ಹೆಸರಿನಲ್ಲಿ ಲೋಕೋಪಯೋಗಿ ಇಲಾಖೆ ನಿರ್ಮಿಸಿದ್ದ ಮಳಿಗೆ ಪಡೆದ ಆರೋಪಕ್ಕೆ ಸಂಬಂಧಿಸಿದಂತೆ ಬೆಳಗಾವಿ ಮಹಾನಗರ ಪಾಲಿಕೆಯ ಇಬ್ಬರು ಬಿಜೆಪಿಗೆ ಸದಸ್ಯರ ಸದಸ್ಯತ್ವ ರದ್ದುಗೊಳಿಸಲಾಗಿದೆ.

ಬಿಜೆಪಿ ಶಾಸಕ ಅಭಯ ಪಾಟೀಲ್ ಆಪ್ತರಾಗಿದ್ದ ಬೆಳಗಾವಿ ದಕ್ಷಿಣ ಮತಕ್ಷೇತ್ರದ ವಾರ್ಡ್ ಸಂಖ್ಯೆ 41ರ ಮಂಗೇಶ್ ಪವಾರ್ ಮತ್ತು ವಾರ್ಡ್ ಸಂಖ್ಯೆ 23ರ ಜಯಂತ್ ಜಾಧವ ಸದಸ್ಯತ್ವ ರದ್ದಾಗಿದೆ.

ತಿನಿಸುಕಟ್ಟೆಯಲ್ಲಿ ಲೋಕೋಪಯೋಗಿ ಇಲಾಖೆ ನಿರ್ಮಿಸಿರುವ ಮಳಿಗೆಯಲ್ಲಿ ತಮ ಪ್ರಭಾವ ಬೀರಿ ಪತ್ನಿಯರ ಹೆಸರಿನಲ್ಲಿ ಮಳಿಗೆ ಪಡೆದಿದ್ದಾರೆಂದು ಸುಜೀತ್ ಮುಳಗುಂದ ದೂರು ನೀಡಿದ್ದರು.

ಈ ನಡುವೆ ತಮ ಪತ್ನಿ ನೀತಾ ಹೆಸರಿನಲ್ಲಿ ಮಂಗೇಶ್ ಪವಾರ, ಸೋನಾಲಿ ಹೆಸರಿನಲ್ಲಿ ಜಯಂತ್ ಜಾಧವ ಮಳಿಗೆ ಪಡೆದಿದ್ದರು.ದೂರು ಆಧರಿಸಿ ವಿಚಾರಣೆ ನಡೆಸಿ ಬೆಳಗಾವಿ ಪ್ರಾದೇಶಿಕ ಆಯುಕ್ತ ಎಸ್.ಬಿ.ಶೆಟ್ಟಣ್ಣವರ ಅವರು ಬಿಜೆಪಿ ಸದಸ್ಯರ ಸದಸ್ಯತ್ವ ರದ್ದು ಪಡೆಸಿ ಆದೇಶ ಹೊರಡಿಸಲಾಗಿದೆ.

RELATED ARTICLES

Latest News