ಅಥಣಿ, ಮೇ.27- ಮಳೆಯ ನಡುವೆ ಸಾಗುತ್ತಿದ್ದ ಎತ್ತಿನ ಗಾಡಿ ನೀರನ ಹಳ್ಳದಲ್ಲಿ ಮಗುಚಿ ಬಿದ್ದು ಇಬ್ಬರು ಬಾಲಕರು ಸಾವನ್ನಪ್ಪಿರುವ ಘಟನೆ ತಾಲೂಕಿನ ನಾಗನೂರ ಪಿಎ ಗ್ರಾಮದ ಬಳಿ ನಡೆದಿದೆ. ಗಣೇಶ್ ಕಾಂಬಳೆ (9), ದೀಪಕ್ ಕಾಂಬಳೆ (11) ಮೃತ ಬಾಲಕರು.
ಭಾರಿ ಮಳೆಯಿಂದಾಗಿ ಹಳ್ಳದಲ್ಲಿ ನೀರು ಹರಿಯುತ್ತಿತ್ತು. ಸೇತುವೆ ಇಲ್ಲದಿರುವುದರಿಂದ, ಸಂಬರಗಿ ಗ್ರಾಮದಿಂದ ನಾಗನೂರ ಪಿಎ ಗ್ರಾಮಕ್ಕೆ ಎತ್ತಿನ ಗಾಡಿಯಲ್ಲಿ ಬಾಲಕರು ತೆರಳಿದ್ದಾರೆ. ಸುತ್ತಲೂ ನೀರು ಇದ್ದಿದ್ದರಿಂದ ದಾರಿ ಕಂಡಿಲ್ಲ ಈ ನಡುವೆ ನೀರಿನ ರಭಸಕ್ಕೆ ಎತ್ತಿನ ಗಾಡಿ ಮಗುಚಿ ಬಿದ್ದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆಯಲ್ಲಿ ಒಮದು ಎತ್ತು ಕೂಡ ಸಾವನ್ನಪ್ಪಿದೆ. ಸ್ಥಳಕ್ಕೆ ಅಥಣಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ. ಮಹಿಳೆ ಸಾವು: ನಿರಂತರ ಮಳೆಯಿಂದ ಮನೆ ಗೋಡೆ ಕುಸಿದು ಮಹಿಳೆ ಮೃತಪಟ್ಟಿರುವ ಘಟನೆ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಕಿರವಾಡಿ ಗ್ರಾಮದಲ್ಲಿ ನಡೆದಿದೆ.
ಕಿರವಾಡಿ ಗ್ರಾಮದ ನಿವಾಸಿ ಶಾಂತಮ್ಮ ತಳವಾರ (52) ಮೃತ ದುರ್ದೈವಿ. ಕಂದಾಯ ಅಧಿಕಾರಿಗಳು, ಪೊಲೀಸರು ಭೇಟಿ ಸ್ಥಳಕ್ಕೆ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಾನಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.