ಶ್ರೀನಗರ, ಜೂ.22 – ಮಹತ್ವದ ಬೆಳವಣಿಗೆಯಲ್ಲಿ ಪಹಲ್ಟಾಮ್ ದಾಳಿಯ ಆರೋಪಿಗಳಿಗೆ ಆಶ್ರಯ ನೀಡಿದ್ದ ಇಬ್ಬರನ್ನು ರಾಷ್ಟ್ರೀಯ ತನಿಖಾದಳ-ಎನ್‌ಐಎ ಬಂಧಿಸಿದೆ.
ಬಟ್ಟೋಟ್‌ನ ಪರ್ವೈಜ್ ಅಹ್ಮದ್ ಜೋಥರ್ ಮತ್ತು ಪಹಲ್ಯಾಮ್‌ನ ಹಿಲ್ ಪಾರ್ಕ್ ಬಶೀರ್ ಅಹ್ಮದ್ ಜೋಥರ್ ಎಂಬ ಇಬ್ಬರು ವ್ಯಕ್ತಿಗಳನ್ನು ಬಂಧಿಸಲಾಗಿದೆ. 1967 ರ ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆಯ ಸೆಕ್ಷನ್ 19 ರ ಅಡಿಯಲ್ಲಿ ಇಬ್ಬರನ್ನು ಬಂಧಿಸಿರುವುದಾಗಿ ಎನ್ ಐ ಎ ತಿಳಿಸಿದೆ.
ಬಂಧಿತ ಆರೋಪಿಗಳು 26 ಜನರನ್ನು ಬಲಿ ತೆಗೆದುಕೊಂಡ ಪಹಲ್ಯಾಮ್ ದಾಳಿಯಲ್ಲಿ ತೊಡಗಿಸಿಕೊಂಡಿದ್ದ ಮೂವರು ಶಸ್ತ್ರ ಸಜ್ಜಿತ ಭಯೋತ್ಪಾದಕರ ಗುರುತುಗಳನ್ನು ಬಹಿರಂಗಪಡಿಸಿದ್ದಾರೆ.
ದಾಳಿಕೋರರು ನಿಷೇಧಿತ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾ (ಎಲ್‌ಇಟಿ) ಗೆ ಸಂಬಂಧಿಸಿದ ಪಾಕಿಸ್ತಾನಿ ಪ್ರಜೆಗಳು ಎಂದು ಅವರು ದೃಢಪಡಿಸಿದ್ದಾರೆ.ಪರ್ವೈಜ್ ಮತ್ತು ಬಶೀರ್ ದಾಳಿಗೆ ಮೊದಲು ಹಿಲ್ ಪಾರ್ಕ್‌ನಲ್ಲಿರುವ ಕಾಲೋಚಿತ ಧೋಕ್ (ಗುಡಿಸಲು) ನಲ್ಲಿ ಮೂವರು ಶಸ್ತ್ರಸಜ್ಜಿತ ಭಯೋತ್ಪಾದಕರಿಗೆ ಗೊತ್ತಿದ್ದೇ ಆಶ್ರಯ ನೀಡಿದ್ದರು ಎಂದು ಎನ್‌ಐಎ ತಿಳಿಸಿದೆ.
ಈ ಇಬ್ಬರು ವ್ಯಕ್ತಿಗಳು ಭಯೋತ್ಪಾದಕರಿಗೆ ಆಹಾರ, ಆಶ್ರಯ ಮತ್ತು ವ್ಯವಸ್ಥಾಪನಾ ಬೆಂಬಲವನ್ನು ಒದಗಿಸಿದ್ದರು ಎಂಬ ಮಾಹಿತಿ ಇದೆ.ಆರೋಪಿಗಳು ಏಪ್ರಿಲ್ 22 ರಂದು ಪಹಲ್ಯಾಮ್ ನಲ್ಲಿ ಪ್ರವಾಸಿಗರನ್ನು ಧಾರ್ಮಿಕ ಗುರುತಿನ ಆಧಾರದ ಮೇಲೆ ಗುಂಡಿಟ್ಟು ಹತ್ಯೆ ಮಾಡಿದ್ದರು.ಇದು ಇದುವರೆಗಿನ ಅತ್ಯಂತ ಭೀಕರ ಭಯೋತ್ಪಾದಕ ದಾಳಿಗಳಲ್ಲಿ ಒಂದಾಗಿದೆ.
- ಬೆಂಗಳೂರಲ್ಲಿ ಇಂದು ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಇಬ್ಬರ ಸಾವು
- ಶಾಲೆಗಳಿಗೆ ಬಾಂಬ್ ಬೆದರಿಕೆಯನ್ನು ಗಂಭೀರವಾಗಿ ಪರಿಗಣಿಸಿದ್ದೇವೆ : ಗೃಹಸಚಿವ ಪರಮೇಶ್ವರ
- ನೈರುತ್ಯ ಮುಂಗಾರು ಚೇತರಿಕೆ, ರಾಜ್ಯದ ಹಲವೆಡೆ ಮಳೆ
- 20 ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ, ಬೆಚ್ಚಿ ಬಿದ್ದ ದೆಹಲಿ
- ಟಿಆರ್ಎಫ್ನ್ನು ಜಾಗತಿಕ ಭಯೋತ್ಪಾದಕ ಸಂಘಟನೆಗೆ ಎಂದು ಘೋಷಿಸಿದ ಅಮೆರಿಕ ; ಭಾರತ ಸ್ವಾಗತ