ಬೆಂಗಳೂರು, ಜ.6– ಡೆಡ್ಲಿ ಕೊರೊನಾ ವೈರಸ್ ನಂತರ ಚೀನಾದಲ್ಲಿ ಕಾಣಿಸಿಕೊಂಡಿರುವ ಹೆಚ್ಎಂಪಿವಿ ವೈರಸ್ ಕಾಟ ಭಾರತಕ್ಕೂ ಕಾಲಿಟ್ಟಿದೆ. ಅದರಲ್ಲೂ ಬೆಂಗಳೂರಿನಲ್ಲಿ ಕಾಣಿಸಿಕೊಂಡಿರುವುದು ಆತಂಕಕ್ಕೆ ಕಾರಣವಾಗಿದೆ.ಹ್ಯೂಮನ್ ಮೆಟಾನ್ಯೂಮೋ ವೈರಸ್ (ಎಚ್ಎಂಪಿವಿ) ಸೋಂಕು ಒಂದು ವರ್ಷದೊಳಗಿನ ಎರಡು ಮಕ್ಕಳಲ್ಲಿ ಕಾಣಿಸಿಕೊಂಡಿದೆ.
ಯಾವುದೇ ಟ್ರಾವೆಲ್ ಹಿಸ್ಟರಿ ಇಲ್ಲದ ಮೂರು ತಿಂಗಳ ಮಗು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಡಿಸ್ಚಾರ್ಜ್ ಆದ ನಂತರ ಆ ಮಗುವಿನಲ್ಲಿ ಹೆಚ್ಎಂಪಿವಿ ಸೋಂಕು ಇರುವುದು ಗೊತ್ತಾಗಿದೆ. ಆದೇ ರೀತಿ ನಗರದ ಮತ್ತೊಂದು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಎಂಟು ತಿಂಗಳ ಮಗುವಿನಲ್ಲೂ ಎಚ್ಎಂಪಿವಿ ಪತ್ತೆಯಾಗಿದೆ.
ತೀವ್ರ ಜ್ವರದಿಂದ ಬಳಲುತ್ತಿದ್ದ ಎಂಟು ತಿಂಗಳ ಮಗುವನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಜ್ವರ ಕಡಿಮೆಯಾದ ಹಿನ್ನೆಲೆಯಲ್ಲಿ ಮಗುವಿನ ರಕ್ತ ಪರೀಕ್ಷೆ ನಡೆಸಿದಾಗ ಎಚ್ಎಂಪಿವಿ ಸೋಂಕು ತಗುಲಿರುವುದು ದೃಢಪಟ್ಟಿದೆ.ಮಗುವಿಗೆ ಜ್ವರ ಬಂದ ಹಿನ್ನೆಲೆಯಲ್ಲಿ ನಗರದ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಈ ವೇಳೆ ರಕ್ತ ಪರೀಕ್ಷೆ ಮಾಡಿಸಿದಾಗ ಹೆಚ್ಎಂವಿಪಿ ವೈರಸ್ ಇರುವುದು ದಢಪಟ್ಟಿದೆ.
ಚೀನಾದಲ್ಲಿ ಮರಣ ಮೃದಂಗ ಭಾರಿಸಿ ಇಡೀ ವಿಶ್ವವನ್ನೇ ಬೆಚ್ಚಿ ಬೀಳಿಸಿದ್ದ ಕೊರೊನಾ ವೈರಸ್ ದೇಶದಲ್ಲಿ ಮೊದಲು ಕಾಣಿಸಿಕೊಂಡಿದ್ದು ರಾಜ್ಯದಲ್ಲೇ ಎನ್ನುವುದು ವಿಶೇಷ. ಗುಲ್ಬರ್ಗಾದಲ್ಲಿ ಮೊದಲು ಕಾಣಿಸಿಕೊಂಡ ಕೊರೊನಾ ವೈರಸ್ ಇಡೀ ದೇಶದಲ್ಲೇ ಸಾವಿನ ಸರಮಾಲೆಯನ್ನೇ ಸೃಷ್ಟಿಸಿತ್ತು. ಇದೀಗ ಚೀನಾವನ್ನು ಕಾಡುತ್ತಿರುವ ಎಚ್ಎಂಪಿವಿ ಕೂಡ ದೇಶದಲ್ಲಿ ಇದೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಕಾಣಿಸಿಕೊಂಡು ಆತಂಕ ಸೃಷ್ಟಿಸಿದೆ.
ಮೂರು ತಿಂಗಳು ಹಾಗೂ ಎಂಟು ತಿಂಗಳ ಮಗುವಿನಲ್ಲಿ ಎಚ್ಎಂಪಿವಿ ಸೋಂಕು ಕಾಣಿಸಿಕೊಂಡಿರುವುದರಿಂದ ಎಚ್ಚೆತ್ತುಕೊಂಡಿರುವ ಆರೋಗ್ಯ ಇಲಾಖೆ ರಾಜ್ಯದ ಇತರ ಭಾಗಗಳಲ್ಲಿ ಯಾರಿಗಾದರೂ ಎಚ್ಎಂಪಿವಿ ಸೋಂಕು ತಗುಲಿದೆಯೇ ಎಂಬ ಬಗ್ಗೆ ಮಾಹಿತಿ ಕಲೆ ಹಾಕಲು ಮುಂದಾಗಿದೆ.
ಹೀಗಾಗಿ ಇಂದು ಆರೋಗ್ಯ ಇಲಾಖೆ ಮಹತ್ವದ ಸಭೆ ಕರೆದಿದೆ. ಸಭೆಯಲ್ಲಿ ಸೋಂಕು ಪತ್ತೆಯಾಗಿರುವ ಮಗುವಿನ ರಕ್ತದ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ. ಎರಡು ಮಕ್ಕಳ ರಕ್ತದ ಮಾದರಿಯನ್ನು ಎನ್ಯೂ ಪರೀಕ್ಷೆಗೆ ರವಾನಿಸಲಾಗಿದೆ. ವರದಿ ಇಂದು ಅಥವಾ ನಾಳೆ ಬರಲಿದ್ದು ನಂತರ ಮುಂದಿನ ಕ್ರಮ ಕೈಗೊಳ್ಳಲು ತೀರ್ಮಾನಿಸಲಾಗಿದೆ.
ಹಚ್ಎಂಪಿವಿ ಸೋಂಕು 11 ವರ್ಷದೊಳಗಿನ ಮಕ್ಕಳಲ್ಲೇ ಹೆಚ್ಚು ಕಾಣಿಸಿಕೊಳ್ಳುತ್ತಿರುವುದರಿಂದ ಪೋಷಕರು ತಮ ಚಿಕ್ಕ ಮಕ್ಕಳ ಆರೋಗ್ಯದ ಬಗ್ಗೆ ಎಚ್ಚರ ವಹಿಸಬೇಕು. ಜ್ವರ ಕಾಣಿಸಿಕೊಂಡ ಕೂಡಲೇ ಆಸ್ಪತ್ರೆಗೆ ಕರೆದೊಯ್ಯಬೇಕು ಎಂದು ಅಧಿಕಾರಿಗಳು ಮನವಿ ಮಾಡಿಕೊಂಡಿದ್ದಾರೆ.
ಮುನ್ನೆಚ್ಚರಿಕೆ ಕ್ರಮ..
ಬೆಂಗಳೂರು,ಜ.6- ಚೀನಾದಲ್ಲಿ ಅಬ್ಬರಿಸುತ್ತಿರುವ ಮಹಾಮಾರಿ ಎಚ್ಎಂಪಿವಿ ಸೋಂಕು 8 ತಿಂಗಳ ಮಗುವಿಗೆ ಕಾಣಿಸಿಕೊಂಡ ಬೆನ್ನಲ್ಲೇ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಎಂಟು ತಿಂಗಳ ಮಗುವಿನಲ್ಲಿ ಕಾಣಿಸಿಕೊಂಡಿರುವ ವೈರಸ್ ಎಚ್ಎಂಪಿ ಎಂಬುದೇ ದೃಢಪಟ್ಟಿಲ್ಲ. ಆದರೂ ಮುನ್ನೆಚ್ಚರಿಕಾ ಕ್ರಮವಾಗಿ ಮಾರ್ಗಸೂಚಿಗಳನ್ನು ಪಾಲನೆ ಮಾಡುವಂತೆ ಇಲಾಖೆ ಸಾರ್ವಜನಿಕರಿಗೆ ಮನವಿ ಮಾಡಿದೆ.
ಮಾರ್ಗಸೂಚಿಗಳು:
*ಜ್ವರ ಇದ್ದರೆ ಜನನಿಬಿಡ ಪ್ರದೇಶಕ್ಕೆ ಹೋಗದಂತೆ ಹಾಗೂ ಅನಗತ್ಯ ಓಡಾಟ ತಪ್ಪಿಸಿ
*ಆಗಾಗ್ಗ್ಯೆ ಕೈಗಳನ್ನೂ ಸಾಬೂನು ಹಾಗೂ ಸ್ಯಾನಿಟೈಸರ್ಗಳಿಂದ ಸ್ವಚ್ಛಗೊಳಿಸಿ
*ಜ್ವರ, ಕೆಮು, ನೆಗಡಿ ಇರುವವರು ಆದಷ್ಟು ಹೊರಗೆ ಓಡಾಡದೆ ಮನೆಯಲ್ಲೇ ಇದ್ದು, ಚಿಕಿತ್ಸೆ ಪಡೆಯಿರಿ.
*ಇಂತಹವರು ಬಳಿಸಿದ ಟವಲ್ ಮತ್ತು ಬಟ್ಟೆಗಳನ್ನು ಬೇರೆಯವರು ಬಳಸದಿರಿ.
*ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದನ್ನು ತಪ್ಪಿಸಿ ಸ್ವಯಂ ಔಷಧಗಳನ್ನು ಸೇವಿಸದೆ ನೆಗಡಿ, ಕೆಮು ಕಾಣಿಸಿಕೊಂಡರೆ ವೈದ್ಯರನ್ನು ಭೇಟಿ ಮಾಡಿ, ಚಿಕಿತ್ಸೆ ಪಡೆಯಿರಿ.
*ಮನೆ ಮತ್ತು ಸುತ್ತಲಿನ ಪ್ರದೇಶಗಳಲ್ಲಿ, ಕಚೇರಿಗಳಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಿ.
*ಪೌಷ್ಠಿಕಾಂಶವಿರುವ ಆಹಾರ ಸೇವಿಸಿ,
*ಮಕ್ಕಳು ಹಾಗೂ ಹಿರಿಯರ ಬಗ್ಗೆ ಹೆಚ್ಚಿನ ಜಾಗ್ರತೆ ವಹಿಸಿ.
ಎಚ್ಎಂಪಿವಿ ಅಂದರೇನು? :
ಹ್ಯೂಮನ್ ಮೆಟಾನ್ಯುಮೊವೈರಸ್ ಡಿಸೆಂಬರ್ ಮಧ್ಯಭಾಗದಲ್ಲಿ ಚೀನಾದ ಉತ್ತರದ ಪ್ರಾಂತ್ಯದಲ್ಲಿ ಕಾಣಿಸಿಕೊಂಡ ಭಯಾನಕ ವೈರಸ್ ಆಗಿದೆ. ಕೋವಿಡ್ ವೈರಸ್ ರೀತಿಯಲ್ಲೇ, ಎಲ್ಲಾ ವಯಸ್ಸಿನವರಿಗೆ ಶ್ವಾಸಕೋಶ ಸಂಬಂಧ ಸಮಸ್ಯೆಯಾಗುವ ಸಾಧ್ಯತೆಯಿದೆ.
ವಿಶೇಷವಾಗಿ ಮಕ್ಕಳಿಗೆ ಅದರಲ್ಲೂ 15ವರ್ಷಕ್ಕಿಂತ ಕಮಿ ವಯಸ್ಸಿನ ಮಕ್ಕಳಿಗೆ ಈ ವೈರಸ್ ಬೇಗ ಹರಡುವ ಸಾಧ್ಯತೆ ಹೆಚ್ಚು. ಇನ್ನು ವಯಸ್ಕರು ಮತ್ತು ರೋಗ ನಿರೋಧಕ ಶಕ್ತಿ ಕಮಿ ಇರುವವರಿಗೆ ಇದು ವೇಗವಾಗಿ ಹರಡಬಹುದು. 2001ರಲ್ಲಿ ಇದನ್ನು ಮೊದಲ ಬಾರಿಗೆ ಡೆನಾರ್ಕ್ ದೇಶದ ಸಂಶೋಧಕರು ಈ ವೈರಸ್ ಅನ್ನು ಪತ್ತೆ ಹಚ್ಚಿದ್ದರು.
ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷದ ಡಿಸೆಂಬರ್ನಲ್ಲಿ ಸಾಮಾನ್ಯ ಶೀತ, ಐಎಲ್ಯ ಮತ್ತು ಸಾರಿ ಪ್ರಕರಣಗಳಲ್ಲಿ ಯಾವುದೇ ಗಮನಾರ್ಹ ಏರಿಕೆ ಇಲ್ಲ ಎಂದು ಆರೋಗ್ಯ ಅಧಿಕಾರಿಗಳು ಹೇಳಿದ್ದಾರೆ.
ಹೆಚ್ಎಂಪಿವಿ ಒಂದು ಉಸಿರಾಟದ ಕಾಯಿಲೆಯಾಗಿದ್ದು, ಚಳಿಗಾಲದಲ್ಲಿ ಶೀತ ಮತ್ತು ಜ್ವರದ ತರಹದ ಲಕ್ಷಣಗಳನ್ನು ಉಂಟು ಮಾಡುತ್ತದೆ, ವಿಶೇಷವಾಗಿ ಮಕ್ಕಳು ಮತ್ತು ವಯಸ್ಸಾದ ವ್ಯಕ್ತಿಗಳ ಮೇಲೆ ಪರಿಣಾಮ ಬೀರುತ್ತದೆ. ರಾಜ್ಯದಲ್ಲಿ ಇದೂವರೆಗೆ ಯಾವುದೇ ಪ್ರಕರಣಗಳು ವರದಿಯಾಗಿಲ್ಲ. ಹೀಗಾಗಿ ಆತಂಕಪಡುವ ಅಗತ್ಯವಿಲ್ಲ. ಯಾವುದೇ ಪರಿಸ್ಥಿತಿ ಎದುರಾದರೂ ಅದನ್ನು ನಿಭಾಯಿಸಲು ರಾಜ್ಯ ಸನ್ನದ್ಧವಾಗಿದೆ ಎಂದು ರಾಜ್ಯದ ಸಮಗ್ರ ರೋಗ ಕಣ್ಗಾವಲು ಕಾರ್ಯಕ್ರಮದ ಯೋಜನಾ ನಿರ್ದೇಶಕ ಡಾ. ಅನ್ಸಾರ್ ಅಹದ್ ಹೇಳಿದ್ದಾರೆ.
ವೈರಸ್ ಹೇಗೆ ಹರಡುತ್ತದೆ ?:
ಕೆಮು, ಶೀತ, ಸೀನು ಈ ವೈರಸ್ ಅಟ್ಯಾಕ್ ಮಾಡಲು ಮೂಲ ಕಾರಣವಾಗಿರುತ್ತದೆ. ಇದರ ಜೊತೆಗೆ, ಕಲುಷಿತ ನೀರು ಸೇವನೆ, ಕಲುಷಿತ ವಾತಾವರಣದಿಂದಲೂ ಈ ವೈರಸ್ ಹರಡುತ್ತದೆ.
ತಡೆಯುವುದು ಹೇಗೆ?:
*ಜನಸಂದಣಿ ಜಾಸ್ತಿ ಇರುವ ಜಾಗದಲ್ಲಿ ಮಾಸ್ಕ್ ಬಳಸುವುದನ್ನು ಕಡ್ಡಾಯ ಮಾಡುವುದು.
*ಯಾವುದೇ ಆಹಾರ ಸೇವಿಸುವ ಮುನ್ನ ಸೋಪಿನಿಂದ ಚೆನ್ನಾಗಿ ಕೈಯನ್ನು ತೊಳೆಯುವುದು.
*ಕೈ ತೊಳೆಯದೇ ಬಾಯಿ, ಕಣ್ಣು, ಮೂಗನ್ನು ಮುಟ್ಟದೇ ಇರುವುದು.
*ಈ ವೈರಸ್ ಹರಡಿದವರನ್ನು ಸಂಪರ್ಕಿಸದೇ ಇರುವುದು.
*ಸೋಂಕಿತ ವ್ಯಕ್ತಿಗಳು ಬಳಸಿದ ಪ್ಲೇಟ್, ಕಪ್ ಮತ್ತು ಇತರ ಪಾತ್ರೆಗಳನ್ನು ಹಂಚಿಕೊಳ್ಳದೇ ಇರುವುದು.
*ಸೋಂಕಿತರು ಸೀನುವಾಗ ಅಥವಾ ಕೆಮುವಾಗ ಇತರರಿಗೆ ಹರಡದಂತೆ ಎಚ್ಚರಿಕೆ ವಹಿಸುವುದು.
ಚಿಕಿತ್ಸೆ ಏನು?:
ಈ ವೈರಸ್ ದಾಳಿಗೆ ನಿರ್ದಿಷ್ಟ ಚಿಕಿತ್ಸೆಯ ಮಾಹಿತಿಯನ್ನು ವಿಶ್ವ ಆರೋಗ್ಯ ಸಂಸ್ಥೆಯಾಗಲಿ, ಭಾರತದ ಆರೋಗ್ಯ ಇಲಾಖೆಯು ಇನ್ನೂ ಸೂಚಿಸಿಲ್ಲ. ಇದಕ್ಕೆ ಸಂಬಂಧ ಪಟ್ಟ, ಯಾವುದೇ ಮೆಡಿಸಿನ್ ತೆಗೆದುಕೊಳ್ಳುವ ಮುನ್ನ ವೈದ್ಯರ ಜೊತೆ ಚರ್ಚಿಸಿ, ಲಸಿಕೆ ತೆಗೆದುಕೊಳ್ಳುವುದು ಸೂಕ್ತ.
ಸೋಂಕಿನ ಲಕ್ಷಣಗಳು:
*ಚೀನಾ ದೇಶದ ಸಿಡಿಸಿ ಪ್ರಕಾರ ಈ ವೈರಸಿನ ಪ್ರಮುಖ ರೋಗ ಲಕ್ಷಣಗಳು ಎಂದರೆ, ಉಬ್ಬಸ, ಮೂಗು ಕಟ್ಟುವುದು, ಕೆಮು, ಜ್ವರ.
*ಉಸಿರಾಟದ ತೊಂದರೆ ಎದುರಾಗಬಹುದು ಮತ್ತು ಇದು ಗಂಭೀರವಾದರೆ ನ್ಯೂಮೋನಿಯಾಗೆ ತಿರುಗುವ ಸಾಧ್ಯತೆಯಿದೆ.
*ಅಸ್ತಮಾ ಮುಂತಾದ ಉಸಿರಾಟಕ್ಕೆ ಸಂಬಂಧಿಸಿದ ಕಾಯಿಲೆಯಿಂದ ಬಳಲುವವರಿಗೆ ಹೆಚ್ಚಿನ ಸಮಸ್ಯೆ ಆಗಲಿದೆ.
*ರೋಗದ ತೀವ್ರತೆಯ ಆಧಾರದ ಮೇಲೆ ಇದು ಎಷ್ಟು ದಿನದ ವರೆಗೆ ಇರಲಿದೆ ಎನ್ನುವುದು ಗೊತ್ತಾಗಲಿದೆ.