Sunday, October 13, 2024
Homeರಾಷ್ಟ್ರೀಯ | Nationalರಜಪೂತ ಕರ್ಣಿ ಸೇನೆ ಅಧ್ಯಕ್ಷರ ಹತ್ಯೆ : ಇಬ್ಬರು ಪೊಲೀಸರ ಅಮಾನತು

ರಜಪೂತ ಕರ್ಣಿ ಸೇನೆ ಅಧ್ಯಕ್ಷರ ಹತ್ಯೆ : ಇಬ್ಬರು ಪೊಲೀಸರ ಅಮಾನತು

ಜೈಪುರ,ಡಿ.7- ರಾಷ್ಟ್ರೀಯ ರಜಪೂತ ಕರ್ಣಿ ಸೇನೆಯ ರಾಷ್ಟ್ರೀಯ ಅಧ್ಯಕ್ಷ ಸುಖದೇವ್ ಸಿಂಗ್ ಗೊಗಮೆಡಿ ಅವರ ಹತ್ಯೆಘಟನೆಗೆ ಸಂಬಂಧಿಸಿದಂತೆ ಇಬ್ಬರು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ಶ್ಯಾಮ್ ನಗರ ಪೊಲೀಸ್ ಠಾಣೆಯ ಎಸ್‍ಎಚ್‍ಒ ಮತ್ತು ಬೀಟ್ ಕಾನ್‍ಸ್ಟೆಬಲ್ ಅನ್ನು ಅಮಾನತುಗೊಳಿಸಿ ಪೊಲೀಸ್ ಕಮಿಷನರ್ ಆದೇಶ ಹೊರಡಿಸಿದ್ದಾರೆ.

ಸುಖದೇವ್ ಸಿಂಗ್ ಗೊಗಮೆಡಿ ಹತ್ಯೆಗೆ ಸಂಬಂಧಿಸಿದಂತೆ ನಿರ್ಲಕ್ಷ್ಯ ತೋರಿದ ಶ್ಯಾಮ್ ನಗರ ಪೊಲೀಸ್ ಠಾಣೆಯ ಎಸ್‍ಎಚ್‍ಒ ಮತ್ತು ಬೀಟ್ ಕಾನ್‍ಸ್ಟೆಬಲ್ ಅವರನ್ನು ಅಮಾನತುಗೊಳಿಸಲಾಗಿದೆ. 72 ಗಂಟೆಗಳಲ್ಲಿ ಆರೋಪಿಗಳನ್ನು ಬಂಧಿಸಲಾಗುವುದು ಎಂದು ಆಯುಕ್ತರು ಭರವಸೆ ನೀಡಿದರು.

ಉತ್ತರಭಾರತ-ನೇಪಾಳದಲ್ಲಿ ಭೂಕಂಪನಗಳು ಸಾಮಾನ್ಯವಂತೆ

ಇಂದು ಜೈಪುರದ ರಜಪೂತ ಸಭಾ ಭವನದಲ್ಲಿ ಕರ್ಣಿ ಸೇನಾ ಮುಖ್ಯಸ್ಥರ ಪಾರ್ಥಿವ ಶರೀರವನ್ನು ಸಾರ್ವಜನಿಕ ದರ್ಶನಕ್ಕೆ ಇಟ್ಟು. ಮಧ್ಯಾಹ್ನ 2 ಗಂಟೆ ಸುಮಾರಿಗೆ ಅವರ ಸ್ವಗ್ರಾಮ ಗೊಗಮೇಡಿಯಲ್ಲಿ ಅವರ ಅಂತಿಮ ಸಂಸ್ಕಾರ ನೆರವೇರಿಸಲಾಯಿತು.

ಅವರ ಅಂತ್ಯಕ್ರಿಯೆಯ ದಿನದಂದು ಅಹಿತಕರ ಘಟನೆಗಳನ್ನು ತಪ್ಪಿಸಲು ಜೈಪುರ ಮತ್ತು ರಾಜಸ್ಥಾನದ ಇತರ ಭಾಗಗಳಲ್ಲಿ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಯನ್ನು ನಿಯೋಜಿಸಲಾಗಿದೆ. ನಗರದ ಕೆಲವು ಸೂಕ್ಷ್ಮ ಸ್ಥಳಗಳಲ್ಲಿ ಕೇಂದ್ರ ಸಶಸ್ತ್ರ ಪೊಲೀಸ್ ಪಡೆ ಮತ್ತು ಕ್ಷಿಪ್ರ ಕಾರ್ಯಾಚರಣೆ ಪಡೆ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

RELATED ARTICLES

Latest News