ಕೋಲ್ಕತ್ತಾ,ಮಾ.6- ವರ್ಷಾಂತ್ಯದಲ್ಲಿ ಮೂರು ರಾಜ್ಯಗಳ ವಿಧಾನಸಭೆ ಮತ್ತು ಮುಂದಿನ ವರ್ಷ ಲೋಕಸಭೆ ಚುನಾವಣೆ ನಡೆಯುವ ಹಿನ್ನೆಲೆಯಲ್ಲಿ ಸಮಾಜವಾದಿ ಪಕ್ಷ ಮಾರ್ಚ್ 18 ರಿಂದ ಕೋಲ್ಕತ್ತಾದಲ್ಲಿ ಎರಡು ದಿನಗಳ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯನ್ನು ಆಯೋಜಿಸಿದೆ.
ಸಭೆಯ ಕುರಿತು ಮಾಹಿತಿ ನೀಡಿರುವ ಉಪಾಧ್ಯಕ್ಷ ಕಿರಣ್ಮಯ್ ನಂದಾ, ಮುಂದಿನ ಚುನಾವಣೆಯ ಪಕ್ಷದ ನೀತಿಗಳು ಮತ್ತು ಕಾರ್ಯತಂತ್ರಗಳ ಕುರಿತು ಚರ್ಚೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.
11 ವರ್ಷಗಳ ಹಿಂದೆ ಸಮಾಜವಾದಿ ಪಕ್ಷದ ಸಂಸ್ಥಾಪಕ, ದಿವಂಗತ ಮುಲಾಯಂ ಸಿಂಗ್ ಯಾದವ್ ಅವರು ಪೂರ್ವ ಮಹಾನಗರದಲ್ಲಿ ರಾಷ್ಟ್ರೀಯ ಕಾರ್ಯಕಾರಣಿ ನಡೆಸಿದ್ದರು. ಪಕ್ಷದ ಹಾಲಿ ಅಧ್ಯಕ್ಷ ಅಖಿಲೇಶ್ ಯಾದವ್ ಮಾರ್ಚ್ 17 ರಂದು ಕೋಲ್ಕತ್ತಾಗೆ ಬರುತ್ತಾರೆ ಮತ್ತು ಇಲ್ಲಿ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಬಿಗ್‍ಬಿ ಪಕ್ಕೆಲುಬು ಮುರಿತ, ಪ್ರಾಣಾಪಾಯದಿಂದ ಪಾರು
ಮಾರ್ಚ್ 18 ರಿಂದ ಎರಡು ದಿನಗಳ ರಾಷ್ಟ್ರೀಯ ಕಾರ್ಯಕಾರಿಣಿ ನಡೆಯಲಿದೆ. ಈ ವರ್ಷದ ಕೊನೆಯಲ್ಲಿ ಛತ್ತೀಸ್‍ಢ, ರಾಜಸ್ಥಾನ ಮತ್ತು ಮಧ್ಯಪ್ರದೇಶದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆ ಮತ್ತು ನಂತರ 2024ರ ಲೋಕಸಭೆ ಚುನಾವಣೆಗೆ ಪಕ್ಷದ ಕಾರ್ಯತಂತ್ರಗಳ ಕುರಿತು ಚರ್ಚಿಸುತ್ತೇವೆ ಎಂದು ನಂದಾ ತಿಳಿಸಿದ್ದಾರೆ.
ಅಖಿಲೇಶ್ ಮತ್ತು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಡುವೆ ಭೇಟಿಯಾಗುವ ಸಾಧ್ಯತೆ ಬಗ್ಗೆ ಇನ್ನೂ ನಿರ್ಧಾರವಾಗಿಲ್ಲ. ಮಮತಾ ಬ್ಯಾನರ್ಜಿ ಅವರು ಊರಿನಲ್ಲಿದ್ದರೆ ನಿಸ್ಸಂಶಯವಾಗಿ ಇಬ್ಬರೂ ನಾಯಕರು ಭೇಟಿಯಾಗುತ್ತಾರೆ ಎಂದು ಹೇಳಿದರು.
2021 ರ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಅಖಿಲೇಶ್ ಯಾದವ್ ಅವರು ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿಗೆ ತಮ್ಮ ಬೆಂಬಲ ಘೋಷಿಸಿದರು. 2022 ರ ಉತ್ತರ ಪ್ರದೇಶ ಚುನಾವಣೆಯ ಸಮಯದಲ್ಲಿ ಮಮತಾ ಬ್ಯಾನರ್ಜಿ ಅಖಿಲೇಶ್ ಪರವಾಗಿ ಪ್ರಚಾರ ಮಾಡುವ ಮೂಲಕ ಪ್ರತಿಕ್ರಿಯಿಸಿದರು ಎಂದು ಹೇಳಿದರು.
ಹಿಂದೆ ಪಶ್ಚಿಮ ಬಂಗಾಳದ ಎಡರಂಗದ ಸರ್ಕಾರದಲ್ಲಿ ಸಚಿವರಾಗಿ ಕೆಲಸ ಮಾಡಿದ್ದ ನಂದಾ, 2010 ರಲ್ಲಿ ತಮ್ಮ ಪಶ್ಚಿಮ ಬಂಗಾಳ ಸಮಾಜವಾದಿ ಪಕ್ಷವನ್ನು ಸಮಾಜವಾದಿ ಪಕ್ಷದೊಂದಿಗೆ ವಿಲೀನಗೊಳಿಸಿದ್ದರು.
ತ್ರಿಪುರಾದಲ್ಲಿ ಬಿಜೆಪಿ ಗೂಂಡಾಗಳಿಂದ 668 ಹಿಂಸಾಚಾರ ಪ್ರಕರಣ : ಸಿಪಿಐ
ಸಮಾಜವಾದಿ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಕೋಲ್ಕತ್ತಾದಲ್ಲಿ ನಡೆಯುತ್ತಿರುವುದು ಇದೇ ಮೊದಲಲ್ಲ. 2012 ಸೇರಿದಂತೆ ಐದು ಬಾರಿ ಇಲ್ಲಿ ನಡೆದಿತ್ತು. ನಮ್ಮ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಉತ್ತರ ಪ್ರದೇಶ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ನಡೆಯುತ್ತಿದೆ ಎಂದು ಅವರು ಹೇಳಿದರು.
Two-day, national, executive, Samajwadi Party, Calcutta,