ಆಣೆ ಮಾಡಲು ಹೋಗಿ ನೀರು ಪಾಲಾದ ಯುವಕರು

Social Share

ಹಾಸನ, ನ.4- ಕೆರೆಯಲ್ಲಿ ಮುಳುಗಿ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ತಾಲೂಕಿನ ತೇಜೂರು ಗ್ರಾಮದಲ್ಲಿ ನಡೆದಿದೆ.ಚಂದ್ರು (35), ಆನಂದ್ (30) ಮೃತಪಟ್ಟವರು.

ವ್ಯವಹಾರದ ವಿಚಾರವಾಗಿ ಇಬ್ಬರ ನಡುವೆ ವೈಮನಸ್ಸು ಉಂಟಾಗಿದ್ದು, ಕಳೆದ ರಾತ್ರಿ ಗಂಗೆ ಮೇಲೆ ಆಣೆ ಮಾಡಲು ಕೆರೆ ಬಳಿಗೆ ಹೋಗಿದ್ದಾರೆ. ಈ ವೇಳೆ ಕಾಲು ಜಾರಿ ಬಿದ್ದು ಇಬ್ಬರೂ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

BREAKING : ಆಸ್ಪತ್ರೆಗಳಲ್ಲಿ ತುರ್ತು ಚಿಕಿತ್ಸೆ ನೀಡಲು ದಾಖಲೆ ಕೇಳುವಂತಿಲ್ಲ

ಕೆರೆಯಲ್ಲಿ ಶವಗಳು ತೇಲುತ್ತಿರುವುದನ್ನು ಗಮನಿಸಿದ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಗ್ರಾಮಾಂತರ ಠಾಣೆ ಪೊಲೀಸರು ಅಗ್ನಿ ಶಾಮಕ ದಳದ ಸಿಬ್ಬಂದಿಗೆ ಮಾಹಿತಿ ನೀಡಿ ಶವಗಳನ್ನು ಹೊರತೆಗೆದು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Articles You Might Like

Share This Article