Saturday, July 20, 2024
Homeಜಿಲ್ಲಾ ಸುದ್ದಿಗಳುರಥದ ಚಕ್ರದಡಿ ಸಿಲುಕಿ ಇಬ್ಬರು ಭಕ್ತರು ಸ್ಥಳದಲ್ಲೇ ಸಾವು

ರಥದ ಚಕ್ರದಡಿ ಸಿಲುಕಿ ಇಬ್ಬರು ಭಕ್ತರು ಸ್ಥಳದಲ್ಲೇ ಸಾವು

ಗದಗ.ಮೇ.19- ರಥದ ಚಕ್ರದಡಿ ಸಿಲುಕಿ ಇಬ್ಬರು ಭಕ್ತರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆಯ ರೋಣ ಪಟ್ಟಣದಲ್ಲಿ ನಡೆದಿದೆ. ಮೃತರನ್ನು ಮಲ್ಲನಗೌಡ ಲಿಂಗನಗೌಡರ (52) ಹಾಗೂ ಮತ್ತೋರ್ವ ಮೃತನ ಹೆಸರು ಹಾಗೂ ವಿಳಾಸವನ್ನು ಪತ್ತೆ ಕಾರ್ಯ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ರೋಣದಲ್ಲಿ ವೀರಭದ್ರೇಶ್ವರ ಸ್ವಾಮಿ ಜಾತ್ರೆಯ ಅಮಗವಾಗಿ ನಡೆದ ರಥೋತ್ಸವದಲ್ಲಿ ಸಾವಿರಾರು ಭಕ್ತರ ಪಾಲ್ಗೊಂಡಿದ್ದಾರು ಈವೇಳೆ ಅಚಾನಕ್ಕಾಗಿ ರೋಣದ ಕೆವಿಜಿ ಬ್ಯಾಂಕ್‌ನಲ್ಲಿ ಪಿಗಿ ಕಲೆಕ್ಟರ್‌ ಆಗಿದ್ದ ಮಲ್ಲನಗೌಡ ಮತ್ತೊಬ್ಬರು ಆಯತಪ್ಪಿ ರಥದ ಚಕ್ರಕ್ಕೆ ಸಿಲುಕಿದ್ದಾರೆ.

ಭಕ್ತನೊಬ್ಬನ ತಲೆ ಮೇಲೆ ರಥದ ಚಕ್ರ ಹರಿದಿದೆ.ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಘಟನೆಯಿಂದಾಗಿ ಸಂಭ್ರಮದ ಜಾತ್ರೆಯಲ್ಲಿ ಮೌನ ಆವರಿಸಿದೆ. ರಥೋತ್ಸವದಲ್ಲಿ ಸಹಸ್ರ ಸಂಖ್ಯೆಯಲ್ಲಿ ಜನರು ಆತಂಕಗೊಂಡಿದ್ದಾರೆ.ರೋಣ ಪೊಲೀಸ್‌‍ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಹಾಗೆಯೇ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದಲ್ಲಿ ಸಿದ್ದಲಿಂಗ ಮುತ್ಯಾನ ಜಾತ್ರಾ ಮಹೋತ್ಸವದ ವೇಳೆಯಲ್ಲಿ ರಥದ ಚಕ್ರಕ್ಕೆ ಸಿಲುಕಿ ಮೂವರು ಮೃತಪಟ್ಟು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದರು.

RELATED ARTICLES

Latest News