Thursday, December 5, 2024
Homeರಾಜ್ಯಮರಕ್ಕೆ ಕಾರು ಡಿಕ್ಕಿ ಹೊಡೆದು ವೈದ್ಯರು ಹಾಗೂ ಒಬ್ಬ ವಕೀಲ ಸ್ಥಳದಲ್ಲೇ ಸಾವು

ಮರಕ್ಕೆ ಕಾರು ಡಿಕ್ಕಿ ಹೊಡೆದು ವೈದ್ಯರು ಹಾಗೂ ಒಬ್ಬ ವಕೀಲ ಸ್ಥಳದಲ್ಲೇ ಸಾವು

Two doctors, a lawyer killed in road mishap near Karnataka’s Ballari

ಬಳ್ಳಾರಿ,ಡಿ.1-ಮರಕ್ಕೆ ಕಾರು ಡಿಕ್ಕಿ ಹೊಡೆದು ಇಲ್ಲಿನ ಬಿಮ್ಸೌ ಆಸ್ಪತ್ರೆಯ ಇಬ್ಬರು ವೈದ್ಯರು ಹಾಗೂ ವಕೀಲರೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಆಂಧ್ರಪ್ರದೇಶದ ಅನಂತಪುರ ಜಿಲ್ಲೆ ವಿಡಪನಕಲ್‌ ಇಂದು ಮುಂಜಾನೆ ಸಂಭವಿಸಿದೆ.

ಬಳ್ಳಾರಿಯ ನಿವಾಸಿ ಡಾ.ಗೋವಿಂದರಾಜುಲು, ಡಾ.ಯೋಗೇಶ್‌ ಮತ್ತು ವಕೀಲ ವೆಂಕಟನಾಯ್ಡು (55) ಮೃತ ದುರ್ದೈವಿಗಳು. ಕಾರಿನಲ್ಲಿದ್ದ ಮತ್ತೊಬ್ಬ ಖಾಸಗಿ ಆಸ್ಪತ್ರೆ ವೈದ್ಯ ಅಮರೇಗೌಡ ಪಾಟೀಲ್‌ ಅವರು ಕೂಡ ತೀವ್ರವಾಗಿ ಗಾಯಗೊಂಡಿದ್ದು ಅವರ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿದೇಶಿ ಪ್ರವಾಸಕ್ಕೆ ತೆರಳಿದ್ದ ಇವರು ಕಳೆದ ರಾತ್ರಿ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿ ನಂತರ ಅನಂತಪುರ ಮಾರ್ಗವಾಗಿ ಕಾರಿನಲ್ಲಿ ಬಳ್ಳಾರಿಗೆ ವಾಪಸಾಗುತ್ತಿದ್ದ ವೇಳೆ ಮುಂಜಾನೆ 5.30ರ ಸಂದರ್ಭದಲ್ಲಿ ಅಪಘಾತ ನಡೆದಿದೆ.

ಬೆಳಗಿನ ಜಾವ ನಿದ್ದೆ ಮಂಪರಿನಲ್ಲಿ ರಸ್ತೆ ಪಕ್ಕದ ಮರಕ್ಕೆ ಕಾರು ಡಿಕ್ಕಿಯಾಗಿದೆ ಅಪಘಾತದ ರಭಸಕ್ಕೆ ವಾಹನ ಸಂಪೂರ್ಣ ನಜ್ಜುಗುಜಾಗಿದೆ.ಅಪಘಾತ ನಂತರ ಸ್ಥಳೀಯರು ಕಾರಿನಲ್ಲಿದ್ದವರ ರಕ್ಷಣೆಗೆ ಮುಂದಾದರು ಕೂಡ ಅವರ ದೇಹಗಳು ವಾಹನದಲ್ಲಿ ಸಿಲುಕಿತ್ತು.ಪೊಲೀಸರು ಸ್ಥಳಕ್ಕೆ ದಾವಿಸಿ ಪರಿಶೀಲನೆ ನಂತರ ಶವಗಳನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ ಬೆಳಿಗ್ಗೆ 6.30ಕ್ಕೆ ಬಳ್ಳಾರಿ ಪೊಲೀಸರಿಗೆ ಈ ಬಗ್ಗೆ ಮಾಹಿತಿ ನೀಡಿದ್ದಾರೆ.

RELATED ARTICLES

Latest News