Sunday, October 13, 2024
Homeರಾಜ್ಯಇಬ್ಬರು ಡ್ರಗ್ ಪೆಡ್ಲರ್‌ಗಳ ಬಂಧನ : 52.78 ಲಕ್ಷ ಮೌಲ್ಯದ ಮಾದಕ ವಶ

ಇಬ್ಬರು ಡ್ರಗ್ ಪೆಡ್ಲರ್‌ಗಳ ಬಂಧನ : 52.78 ಲಕ್ಷ ಮೌಲ್ಯದ ಮಾದಕ ವಶ

ಬೆಂಗಳೂರು,ಡಿ.23- ಹೊಸ ವರ್ಷಾಚರಣೆ ಸಂದರ್ಭದಲ್ಲಿ ಡ್ರಗ್ ಮಾರಾಟ ಮಾಡಲು ಮುಂದಾಗಿದ್ದ ಒಬ್ಬ ವಿದೇಶಿ ಮತ್ತು ಇಬ್ಬರು ಕೇರಳ ಮೂಲದ ಡ್ರಗ್ ಪೆಡ್ಲರ್‍ಗಳ ಸಿಸಿಬಿ ಪೊಲೀಸರು ಬಂಧಿಸಿ 52.78 ಲಕ್ಷ ಮೌಲ್ಯದ ನಿಷೇಧಿತ ಮಾದಕ ವಸ್ತುಗಳು ಮತ್ತು ವಾಹನ ವಶಪಡಿಸಿಕೊಂಡಿದ್ದಾರೆ.

ನಗರದ ಬೇಗೂರು ಮತ್ತು ಕೋರಮಂಗಲ ಪೊಲೀಸ್ ತಾಣಾ ವ್ಯಾಪ್ತಿಗಳಲ್ಲಿ ನಿಷೇಧಿತ ಮಾದಕವಸ್ತುಗಳನ್ನು ಸಂಗ್ರಹಿಸಿ ಮಾರಾಟ ಮಾಡಲು ಸಿದ್ಧತೆ ಮಾಡಿಕೊಂಡಿದ್ದರೆಂಬ ಬಗ್ಗೆ ನಿಖರ ಮಾಹಿತಿ ಪಡೆದ ಸಿಸಿಬಿಯ ಮಾದಕವಸ್ತು ನಿಗ್ರಹ ದಳದ ಅಧಿಕಾರಿ ಹಾಗೂ ಸಿಬ್ಬಂದಿಗಳ ತಂಡ ದಾಳಿ ನಡೆಸಿ ಒಬ್ಬ ವಿದೇಶಿ ಮತ್ತು ಇಬ್ಬರು ಕೇರಳ ಮೂಲದ ಡ್ರಗ್ ಪೆಡ್ಲರ್‍ಗಳನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದೆ.

ಆರೋಪಿಗಳಿಂದ ನಿಷೇಧಿತ ಮಾದಕ ವಸ್ತುಗಳಾದ ಎಂಡಿಎಂಡಿ ಕ್ರಿಸ್ಟಲ್ 8639 ಗ್ರಾಂ,ಎಲ್‍ಎಸ್‍ಡಿ ಸ್ಟ್ರಿಪ್ 100 , ಎಸ್‍ಟೇಸ್‍ಟಿ ಪಿಲ್ಟ್ 253,ಕೊಕೇನ್ 2.5 ಗ್ರಾಂ, 3 ಮೊಬೈಲ್‍ಫೋನ್, ತೂಕದ ಯಂತ್ರ 1, ಹೋಂಡಾ ಆಕ್ಟೀವಾ ದ್ವಿಚಕ್ರ ವಾಹನ ಹಾಗೂ ಮತ್ತಿತರ ವಸ್ತುಗಳನ್ನು ವಶಪಡಿಸಿಕೊಂಡಿದ್ದು, ಇವುಗಳ ಒಟ್ಟು ಮೌಲ್ಯ52,78,000ರೂ.ಗಳೆಂದು ಅಂದಾಜಿಸಲಾಗಿದೆ.

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ : ಬಿಜೆಪಿ

ಆರೋಪಿಗಳ ವಿರುದ್ಧ ಬೇಗೂರು ಮತ್ತು ಕೋರಮಂಗಲ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಿಸಿದ್ದು ತನಿಖೆ ಮುಂದುವರೆದಿದೆ. ಬೇಗೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ದಸ್ತಗಿರಿಯಾಗಿರುವ ವಿದೇಶಿ ಪ್ರಜೆಯು ಸುಮಾರು ಒಂದು ವರ್ಷದ ಹಿಂದೆ ಬ್ಯುಸಿನೆಸ್ ವೀಸಾ ಪಡೆದು ಭಾರತಕ್ಕೆ ಬಂದಿದ್ದು, ಕಳೆದ ಮೂರು ತಿಂಗಳಿನಿಂದ ಬೆಂಗಳೂರಿನಲ್ಲಿ ವಾಸವಾಗಿದ್ದುಕೊಂಡು, ನಗರದಲ್ಲಿ ನೆಲೆಸಿರುವ ಆಫ್ರಿಕಾ ಮೂಲದ ಪ್ರಜೆಗಳಿಂದ ಕಡಿಮೆ ಬೆಲೆಗೆ ನಿಷೇತ ಮಾದಕ ವಸ್ತುಗಳನ್ನು ಖರೀದಿ ಮಾಡಿ ಅವುಗಳನ್ನು ಪರಿಚಯಸ್ಥ ಗಿರಾಕಿಗಳಿಗೆ ಖುದ್ದಾಗಿ ಸರಬರಾಜು ಮಾಡಿ ಅಕ್ರಮ ಹಣ ಸಂಪಾದನೆ ಮಾಡುತ್ತಿದ್ದನೆಂದು ವಿಚಾರಣೆಯಿಂದ ತಿಳಿದುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೋರಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಶಕ್ಕೆ ಪಡೆದಿರುವ ಕೇರಳ ಮೂಲದ ಇಬ್ಬರು ಡ್ರಗ್ ಪೆಡ್ಲರ್‍ಗಳು ಸ್ಥಳೀಯ ಡ್ರಗ್ ಪೆಡ್ಲರ್‍ನಿಂದ ಕಡಿಮೆ ಬೆಲೆಗೆ ನಿಷೇತ ಮಾದಕ ವಸ್ತುಗಳನ್ನು ಖರೀದಿಸಿ, ಪರಿಚಯಸ್ಥ ಗಿರಾಕಿಗಳಿಗೆ ಹೆಚ್ಚಿನ ಬೆಲೆಗೆ ಮಾರಾಟ ಮಾಡಿ ಅಕ್ರಮ ಹಣ ಸಂಪಾದನೆಯಲ್ಲಿ ತೊಡಗಿದ್ದ ಬಗ್ಗೆ ಮಾಹಿತಿಯು ವಿಚಾರಣೆಯಿಂದ ತಿಳಿದುಬಂದಿದೆ.

RELATED ARTICLES

Latest News