ಶ್ರೀನಗರದಲ್ಲಿ ಎಲ್​ಇಟಿಯ ಇಬ್ಬರು ಹೈಬ್ರಿಡ್ ಉಗ್ರರ ಬಂಧನ

ಶ್ರೀನಗರ, ಮೇ 23 -ನಿಷೇಧಿತ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ (ಎಲ್​ಇಟಿ)ಯ ಇಬ್ಬರು ಸ್ಥಳೀಯ ಉಗ್ರರನ್ನು ಇಂದು ಶ್ರೀನಗರದಲ್ಲಿ ಶಸ್ತ್ರಾಸ್ತ್ರ ಮತ್ತು ಮದ್ದು ಗುಂಡುಗಳೊಂದಿಗೆ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಹೈಬ್ರಿಡ್  ಉಗ್ರಗಾಮಿಗಳು ಎಂದು ಪರಿಗಣಿಸಲಾಗಿದ್ದು ,ಭಯೋತ್ಪಾದಕ ದಾಳಿಯನ್ನು ನಡೆಸಿ ನಂತರ ದಿನನಿತ್ಯದ ಜೀವನ ನಡೆಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಇವರಿಮದ 15 ಪಿಸ್ತೂಲ್  30,300 ರೌಂಡ್ ಗೊಂಡುಗಳು ಮತ್ತು ಸೈಲೆನ್ಸರ್ ಸೇರಿದಂತೆ ಹಲವು ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಕಾಶ್ಮೀರದ ಪೊಲೀಸ್ ಮಹಾನಿರೀಕ್ಷಕ ವಿಜಯ್ ಕುಮಾರ್ ತಿಳಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ತಿಳಿಸಿದರು. ಇದು ಪೊಲೀಸರಿಗೆ ದೊಡ್ಡ ಯಶಸ್ಸು ಎಂದು ಐಜಿಪಿ ಹೇಳಿದ್ದಾರೆ