Sunday, May 12, 2024
Homeರಾಜಕೀಯಕಾಂಗ್ರೆಸ್ ಸೇರ್ಪಡೆಯಾದ ಜೆಡಿಎಸ್‌ನ ಇಬ್ಬರು ಮಾಜಿ ಶಾಸಕರು

ಕಾಂಗ್ರೆಸ್ ಸೇರ್ಪಡೆಯಾದ ಜೆಡಿಎಸ್‌ನ ಇಬ್ಬರು ಮಾಜಿ ಶಾಸಕರು

ಬೆಂಗಳೂರು, ನ.15- ಜೆಡಿಎಸ್ನ ಇಬ್ಬರು ಮಾಜಿ ಶಾಸಕರು ಸೇರಿದಂತೆ ಹಲವು ಮುಖಂಡರು ಇಂದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವ ದಲ್ಲಿ ತುಮಕೂರು ಗ್ರಾಮಾಂತರ ಕ್ಷೇತ್ರದ ಮಾಜಿ ಶಾಸಕರ ಗೌರಿಶಂಕರ, ದಾಸರಹಳ್ಳಿ ಕ್ಷೇತ್ರದ ಮಾಜಿ ಶಾಸಕ ಮಂಜುನಾಥ್ ಅವರು ಪಕ್ಷ ಸೇರಿದ್ದಾರೆ. ಬಿಜೆಪಿ-ಜೆಡಿಎಸ್ ಮೈತ್ರಿಯ ಬಳಿಕ ಈ ಇಬ್ಬರು ಕಾಂಗ್ರೆಸ್ನತ್ತು ಮುಖ ಮಾಡಿದ್ದರು.

ತುಮಕೂರು ಗ್ರಾಮಾಂತರ ಹಾಗೂ ದಾಸರಹಳ್ಳಿಯಲ್ಲಿ ಜೆಡಿಎಸ್-ಬಿಜೆಪಿ ನಡುವೆಯೇ ಪ್ರಬಲ ಪೈಪೊಟಿ ಇತ್ತು. ಆ ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮೂರನೇ ಸ್ಥಾನದಲ್ಲಿತ್ತು. ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿ ಶಾಸಕ ಸುರೇಶ್ ಗೌಡ ಹಾಗೂ ಗೌರಿ ಶಂಕರ ಅವರ ನಡುವೆ ಜಿದ್ದಾಜಿದ್ದಿನ ರಾಜಕೀಯವಿದೆ.

ಕೆಲ ದಿನಗಳ ಹಿಂದೆ ಸುರೇಶ್ಗೌಡರೇ ಕಾಂಗ್ರೆಸ್ನತ್ತ ಮುಖ ಮಾಡಿದ್ದಾರೆ ಎಂಬ ವದಂತಿಗಳಿದ್ದವು. ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಜಿ.ಪರಮೇಶ್ವರ್ ಅವರ ಆಸಕ್ತಿಯಿಂದಾಗಿ ಗೌರಿ ಶಂಕರ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಜಿಲ್ಲೆಯ ಮತ್ತೊಬ್ಬ ಶಾಸಕ ಕೆ.ಎನ್.ರಾಜಣ್ಣ ಅವರು ಗೌರಿ ಶಂಕರ ಅವರ ಸೇರ್ಪಡೆಗೆ ಆಸಕ್ತಿ ಹೊಂದಿಲ್ಲ ಎಂದು ಹೇಳಲಾಗಿದೆ.

ರಾಜಣ್ಣ ಲೋಕಸಭೆ ಚುನಾವಣೆಯಲ್ಲಿ ಸ್ರ್ಪಸಲು ಇಚ್ಚಿಸಿದ್ದಾರೆ. ತಾವು ಲೋಕಸಭೆಗೆ ಹೋದರೆ ತೆರವಾಗುವ ಮಧುಗಿರಿ ಕ್ಷೇತ್ರವನ್ನು ತಮ್ಮ ಪುತ್ರ ರಾಜೇಂದ್ರ ಅವರಿಗೆ ಬಿಟ್ಟು ಕೊಡುವುದು ರಾಜಣ್ಣ ಅವರ ಲೆಕ್ಕಾಚಾರ. ಆದರೆ ಗೌರಿಶಂಕರ ತುಮಕೂರು ಲೋಕಸಭೆ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಕಾಂಗ್ರೆಸ್ನಿಂದ ಮುದ್ದಹನುಮೇಗೌಡರ ನಿರ್ಗಮನದ ಬಳಿಕ ಲೋಕಸಭೆ ಅಭ್ಯರ್ಥಿಯ ಕೊರತೆ ಇದೆ. ಈ ಹಿನ್ನೆಲೆಯಲ್ಲಿ ಗೌರಿ ಶಂಕರರನ್ನು ಸೆಳೆದುಕೊಳ್ಳಲಾಗಿದೆ ಎಂದು ಹೇಳಲಾಗಿದೆ.

ಪರಮೇಶ್ವರ್ ಮತ್ತು ರಾಜಣ್ಣ ಅವರ ನಡುವಿನ ಅಸಹನೆಗಳು ಇತ್ತೀಚೆಗೆ ತಗ್ಗಿದಂತೆ ಕಂಡು ಬಂದಿದ್ದವು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಣದಲ್ಲಿ ಆಪ್ತರಾಗಿರುವ ರಾಜಣ್ಣ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಮುಜುಗರವಾಗುವಂತಹ ಹೇಳಿಕೆ ನೀಡಲಾರಂಭಿಸಿದರು.

ಅಮೆರಿಕ-ಚೀನಾ ಮಾತುಕತೆ ಮೇಲೆ ಭಾರತ ಕಣ್ಣು

ಒಂದೆಡೆ ಸಿದ್ದರಾಮಯ್ಯ ಅವರೇ ಐದು ವರ್ಷ ಮುಖ್ಯಮಂತ್ರಿ ಯಾಗಿರುತ್ತಾರೆ ಎಂದು ಹೇಳಿದರೆ, ಮತ್ತೊಂದೆಡೆ ಜಾತಿವಾರು ಮೂರು ಉಪಮುಖ್ಯಮಂತ್ರಿಗಳನ್ನು ನೇಮಿಸಬೇಕು ಎಂದು ಹೈಕಮಾಂಡ್ ಅನ್ನು ಆಗ್ರಹಿಸಿದರು. ಮುಂದಿನ ಅವಗೆ ಪರಮೇಶ್ವರ್ ಮುಖ್ಯಮಂತ್ರಿಯಾಗಬೇಕು ಎಂದು ಹೇಳುವ ಮೂಲಕ ಚರ್ಚೆಗೆ ಗ್ರಾಸವಾಗಿದ್ದರು.

ಈ ಎಲ್ಲಾ ರಾಜಕೀಯ ಪ್ರೇರಿತ ಹೇಳಿಕೆಗಳ ಹಿಂದೆ ಲೋಕಸಭೆ ಚುನಾವಣೆಯಲ್ಲಿ ಸ್ರ್ಪಸುವ ಇರಾದೆ ಅಡಗಿತ್ತು ಎಂದು ಹೇಳಲಾಗುತ್ತಿದೆ. ಅದಕ್ಕೆ ಎಳ್ಳು ನೀರು ಬಿಡುವಂತೆ ಪರಮೇಶ್ವರ್ ಜೆಡಿಎಸ್ನಿಂದ ಗೌರಿಶಂಕರ ಅವರನ್ನು ಎರವಲು ಮಾಡಿಕೊಳ್ಳುತ್ತಿರುವುದು ಇಬ್ಬರ ನಡುವೆ ಮತ್ತೆ ಮುಸುಕಿನ ಗುದ್ದಾಟಕ್ಕೆ ಕಾರಣವಾಗಬಹುದೇ ಎಂಬ ಅನುಮಾನಗಳಿವೆ. ಇತ್ತ ಬೆಂಗಳೂರಿನ ದಾಸರಹಳ್ಳಿ ಕ್ಷೇತ್ರದಲ್ಲಿ ಬಿಜೆಪಿಯ ಮುನಿರಾಜು ಅವರ ವಿರುದ್ಧ ಹಣಾ ಹಣಿ ರಾಜಕೀಯ ನಡೆಸಿ ಒಮ್ಮೆ ಶಾಸಕರಾಗಿದ್ದರು. ಜೆಡಿಎಸ್-ಬಿಜೆಪಿ ಸೇರುತ್ತಿದ್ದಂತೆ ಅವರು ಕಾಂಗ್ರೆಸ್ನತ್ತ ಮುಖ ಮಾಡಿದ್ದಾರೆ.

RELATED ARTICLES

Latest News