ಬೆಂಗಳೂರು,ಜ.19-ಕೊರೊನಾ ಮೂರನೆ ಅಲೆ ಮಕ್ಕಳಿಗೆ ಹೆಮ್ಮಾರಿಯಾಗಲಿದೆ ಎಂಬ ತಜ್ಞರ ಎಚ್ಚರಿಕೆ ಬೆನ್ನಲ್ಲೆ ಮಹಾಮಾರಿಗೆ ಇಬ್ಬರು ಮಕ್ಕಳು ಬಲಿಯಾಗಿದ್ದಾರೆ.ಮೈಸೂರು ಹಾಗೂ ಚಿತ್ರದುರ್ಗದಲ್ಲಿ ಜ್ವರ ಮತ್ತು ಕೆಮ್ಮಿನಿಂದ ಬಳಲುತ್ತಿದ್ದ 13 ಹಾಗೂ 16 ವರ್ಷದ ಇಬ್ಬರು ಬಾಲಕಿಯರು ಸಾವನ್ನಪ್ಪಿದ್ದಾರೆ.
ಚಿತ್ರದುರ್ಗದ ಬಾಲಕಿಗೆ ಮೊದಲು ಜ್ವರ, ಕೆಮ್ಮು ಕಾಣಿಸಿಕೊಂಡಿತ್ತು. ತಕ್ಷಣ ಆಕೆಯನ್ನು ಜ.12ರಂದು ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.ಕಳೆದ ಆರು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಾಲಕಿ ನಿನ್ನೆ ಸಾವನ್ನಪ್ಪಿದ್ದಾಳೆ ಎಂದು ಆರೋಗ್ಯ ಇಲಾಖೆ ಅಕಾರಿಗಳು ತಿಳಿಸಿದ್ದಾರೆ.
ಅದೇ ರೀತಿ ಮೈಸೂರಿನಲ್ಲಿ ಜ್ವರದಿಂದ ಬಳಲುತ್ತಿದ್ದ 16 ವರ್ಷದ ಬಾಲಕಿಯನ್ನು ಖಾಸಗೀ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಕೆಯು ಕೊರೊನಾ ಮಹಾಮಾರಿಗೆ ಬಲಿಯಾಗಿದ್ದಾಳೆ.ಇದರೊಂದಿಗೆ ರಾಜ್ಯದಲ್ಲಿ ಕೊರೊನಾ ಮೂರನೆ ಅಲೆ ಆರಂಭದಲ್ಲೆ ಇಬ್ಬರು ಮಕ್ಕಳು ಬಲಿಯಾಗಿದ್ದಾರೆ.
