Thursday, December 7, 2023
Homeರಾಷ್ಟ್ರೀಯಭದ್ರತಾ ಪಡೆಗಳ ಎನ್‌ಕೌಂಟರ್‌ನಲ್ಲಿ ಇಬ್ಬರು ಎಲ್‍ಇಟಿ ಉಗ್ರರು ಹತ್ಯೆ

ಭದ್ರತಾ ಪಡೆಗಳ ಎನ್‌ಕೌಂಟರ್‌ನಲ್ಲಿ ಇಬ್ಬರು ಎಲ್‍ಇಟಿ ಉಗ್ರರು ಹತ್ಯೆ

ಶ್ರೀನಗರ, ಅ.10-ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಇಂದು ಮುಂಜಾನೆ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ನಿಷೇಧಿತ ಲಷ್ಕರ್-ಎ-ತೊಯ್ಬಾದ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ. ಜಿಲ್ಲೆಯ ಅಲ್ಶಿಪೋರಾ ಪ್ರದೇಶದಲ್ಲಿ ಉಗ್ರರು ಅಡಗಿರುವ ಬಗ್ಗೆ ಮಾಹಿತಿಯ ನಂತರ ಭದ್ರತಾ ಪಡೆಗಳು ಕಾರ್ಯಾಚರಣೆಯನ್ನು ಪ್ರಾರಂಭಿಸಿದ ನಂತರ ಗುಂಡಿನ ಚಕಮಕಿ ನಡೆದಿದೆ.

ಇದರಲ್ಲಿ ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಲಾಗಿದ್ದು ಕಾರ್ಯಾಚರಣೆ ಮುಂದುವರೆದಿದ್ದು ,ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ ಎಂದು ಕಾಶ್ಮೀರ ವಲಯ ಪೊಲೀಸರು ತಿಳಿಸಿದ್ದಾರೆ.

ಈ ವರ್ಷದ ಆರಂಭದಲ್ಲಿ ಬ್ಯಾಂಕ್ ಗಾರ್ಡ್ ಸಂಜಯ್ ಶರ್ಮಾನನ್ನು ಇದೇ ಎಲ್‍ಇಟಿ ಉಗ್ರರು ಹತ್ಯೆ ಮಾಡಿದ್ದರು ಎಂದು ಹೇಳಿದ್ದಾರೆ. ಹತರಾದ ಭಯೋತ್ಪಾದಕರನ್ನು ಮೋರಿಫತ್ ಮಕ್ಬೂಲ್ ಮತ್ತು ಜಾಜಿಮ್ ಫಾರೂಕ್ ಅಲಿಯಾಸ್ ಅಬ್ರಾರ್ ಎಂದು ಗುರುತಿಸಲಾಗಿದೆ.

ಡೋರ್ ಲಾಕ್ ಒಡೆದು ಚಿನ್ನಾಭರಣ ಲೂಟಿ, ಇಬ್ಬರು ನೇಪಾಳದ ಸೆಕ್ಯೂರಿಟಿ ಗಾರ್ಡ್ ಬಂಧನ

ಕಾಶ್ಮೀರಿ ಪಂಡಿತ್ ಸಂಜಯ್ ಶರ್ಮಾ ಹತ್ಯೆಯಲ್ಲಿ ಭಯೋತ್ಪಾದಕ ಅಬ್ರಾರ್ ಭಾಗಿಯಾಗಿದ್ದಾನೆ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಕಾಶ್ಮೀರ ವಲಯ) ವಿಜಯ್ ಕುಮಾರ್ ತಿಳಿಸಿದ್ದಾರೆ.

RELATED ARTICLES

Latest News