ಲತೇಹಾರ್,ಮೇ 24-ಜಾರ್ಖಂಡ್‌ನ ಲತೇಹಾರ್ ಜಿಲ್ಲೆಯಲ್ಲಿ ಇಂದು ಬೆಳಿಗ್ಗೆ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಜೆಜೆಎಂಪಿ ಮುಖ್ಯಸ್ಥ ಪಪ್ಪು ಲೋಹ್ರಾ
ಸೇರಿದಂತೆ ಇಬ್ಬರು ಮಾವೋವಾದಿಗಳು ಸಾವನ್ನಪ್ಪಿದ್ದಾರೆ.
ಲತೇಹಾರ್ ಪೊಲೀಸ್ ಠಾಣೆ ವ್ಯಾಪ್ತಿಯ ಅರಣ್ಯದಲ್ಲಿ ಸಿಆರ್‌ಪಿಎಫ್ ಮತ್ತು ಜಾರ್ಖಂಡ್ ಪೊಲೀಸರು ಜಂಟಿಯಾಗಿ ನಡೆಸಿದ ಕಾರ್ಯಾಚರಣೆಯಲ್ಲಿ ಮಾವೋವಾದಿ ಜನ ಮುಕ್ತಿ ಪರಿಷತ್ (ಜೆಜೆಎಂಪಿ) ಮುಖ್ಯಸ್ಥ ಲೋಹಾ ಮತ್ತು ಅವರ ಸಹಚರ ಪ್ರಭಾತ್ ಗಂಜು ಸಾವನ್ನಪ್ಪಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಮಾವೋವಾದಿಗಳು ಸಾವನ್ನಪ್ಪಿದ್ದಾರೆ. ಪೊಲೀಸರು ಅವರ ಶವಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು
ಪಲಮು ವಲಯ ಡಿಐಜಿ ವೈಎಸ್ ರಮೇಶ್ ತಿಳಿಸಿದ್ದಾರೆ.
ಲೋಹ್ರಾ ಮತ್ತು ಅವರ ಸಹಚರರು ಕಾಡಿನಲ್ಲಿದ್ದಾರೆ ಎಂಬ ಸುಳಿವಿನ ಮೇರೆಗೆ, ಲತೇಹಾರ್ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಕುಮಾರ್ ಗೌರವ್ ನೇತೃತ್ವದ ಭದ್ರತಾ ಸಿಬ್ಬಂದಿ ತಂಡ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ ಎಂದು ಅವರು ಹೇಳಿದರು.
ಮೊದಲು ಮಾವೋವಾದಿಗಳು ಭದ್ರತಾ ಸಿಬ್ಬಂದಿಯನ್ನು ಗುರಿಯಾಗಿಸಿಕೊಂಡು ಗುಂಡು ಹಾರಿಸಿದರು ಎಚ್ಚೆತ್ತ ನಮ್ಮ ತಂಡವು ಪ್ರತಿದಾಳಿ ನಡೆಸಿದೆ ಎಂದು ತಿಳಿಸಿದ್ದಾರೆ.