ಮುಂಬೈ, ಅ. 18 (ಪಿಟಿಐ) ಜೂನಿಯರ್ ವಿದ್ಯಾರ್ಥಿಗಳಿಗೆ ರ‍್ಯಾಗಿಂಗ್ ಮಾಡಿದ ಆರೋಪದ ಮೇಲೆ ಅನುದಾನಿತ ಸರ್ಕಾರಿ ವೈದ್ಯಕೀಯ ಕಾಲೇಜಿನ ಎಂಬಿಬಿಎಸ್‌ನ ದ್ವಿತೀಯ ವರ್ಷದ ಇಬ್ಬರು ವಿದ್ಯಾರ್ಥಿಗಳನ್ನು ಹಾಸ್ಟೆಲ್‌ನಿಂದ ಒಂದು ವರ್ಷದವರೆಗೆ ಅಮಾನತುಗೊಳಿಸಲಾಗಿದೆ.
ಮೊದಲ ವರ್ಷದ ವಿದ್ಯಾರ್ಥಿಗಳ ತರಗತಿಗಳು ಪ್ರಾರಂಭವಾದ ನಂತರ ದಕ್ಷಿಣ ಮುಂಬೈನ ವೈದ್ಯಕೀಯ ಕಾಲೇಜು ಕ್ಯಾಂಪಸ್‌ನಲ್ಲಿರುವ ಹಾಸ್ಟೆಲ್‌ನಲ್ಲಿ ಈ ವಾರ ಈ ಘಟನೆ ನಡೆದಿದೆ ಎಂದು ಕಾಲೇಜಿನ ಆಡಳಿತ ಮಂಡಳಿ ತಿಳಿಸಿದೆ.
ಕುಡಿದ ಅಮಲಿನಲ್ಲಿದ್ದ ಆರೋಪಿ ವಿದ್ಯಾರ್ಥಿಗಳು ಫ್ರೆಶರ್‌ಗೆ ನತ್ಯ ಮಾಡಲು ಕೇಳಿದ್ದರು ಅದಕ್ಕೆ ನಿರಾಕರಿಸಿದಾಗ ಅವರ ಮೇಲೆ ದಬ್ಬಾಳಿಕೆ ಮಾಡಿದ್ದರು. ಈ ಘಟನೆಯನ್ನು ವೈದ್ಯಕೀಯ ಕಾಲೇಜಿನ ರ‍್ಯಾಗಿಂಗ್ ವಿರೋಧಿ ಸಮಿತಿಯ ಗಮನಕ್ಕೆ ತರಲಾಯಿತು, ನಂತರ ಇಬ್ಬರು ವಿದ್ಯಾರ್ಥಿಗಳನ್ನು ಅವರ ಹಾಸ್ಟೆಲ್‌ನಿಂದ ಒಂದು ವರ್ಷದವರೆಗೆ ಅಮಾನತುಗೊಳಿಸಲು ನಿರ್ಧರಿಸಲಾಯಿತು ಎಂದು ಅವರು ಹೇಳಿದರು