ಗಂಗಾನದಿ ಪ್ರವಾಹದಲ್ಲಿ ಕೊಚ್ಚಿಹೋದ ಇಬ್ಬರು ಸಾವು

Social Share

ಡೆಹ್ರಾಡೂನ್, ಅ.30 – ರಿಷಿಕೇಶ ಬಳಿಯ ಗಂಗಾ ನದಿಯ ಪ್ರವಾಹಕ್ಕೆ ರಾಫ್ಟಿಂಗ್‍ಗೆ ಬಂದಿದ್ದ ದೆಹಲಿಯ ಇಬ್ಬರು ವ್ಯಕ್ತಿಗಳು ಕೊಚ್ಚಿ ಹೋಗಿದ್ದಾರೆ. ದೆಹಲಿಯ ಪ್ರಶಾಂತ್ ವಿಹಾರ್ ಪ್ರದೇಶದ ನಿವಾಸಿ ವಂಶ್ ಕೌಶಲ್ ಮತ್ತು ಛತ್ತಪುರ್ ಪ್ರದೇಶದ ಕುಮಾರ್ ಗೌರವ್ ಗಂಗಾ ನದಿಯಲ್ಲಿ ಕೊಚ್ಚಿಹೋಗಿದ್ದು, ಮೃತಪಟ್ಟರುವ ಸಾಧ್ಯತೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.

ನೀಮ್ ಬೀಚ್ ಪ್ರದೇಶದಲ್ಲಿ ರಾಫ್ಟಿಂಗ್ ನಂತರ ಗಂಗಾ ನದಿಗೆ ಇಳಿದಿದ್ದ ಸಂದರ್ಭದಲ್ಲಿ ಬಲವಾದ ಪ್ರವಾಹಕ್ಕೆ ಸಿಲುಕಿ ಕೊಚ್ಚಿಹೋದರು, ಘಟನೆ ಬಗ್ಗೆ ಮಾಹಿತಿ ಪಡೆದ ರಾಜ್ಯ ವಿಪತ್ತು ನಿರ್ವಹಣಾ ಪಡೆ ತಂಡವು ಸ್ಥಳಕ್ಕೆ ಧಾವಿಸಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿತು. ಆದರೆ ಇಬ್ಬರನ್ನು ಪತ್ತೆಹಚ್ಚಲು ಸಾಧ್ಯವಾಗಲಿಲ್ಲ ಎಂದು ಅವರು ಹೇಳಿದರು.

ಮಲ್ಲೇಶ್ವರಂ ಶಾಲಾ ಮಾದರಿ ಇಡೀ ರಾಜ್ಯಕ್ಕೆ ವಿಸ್ತರಣೆ : ಸಿಎಂ

ಘಟನೆ ಬಗ್ಗೆ ಇಬ್ಬರ ಕುಟುಂಬಗಳಿಗೆ ಮಾಹಿತಿ ನೀಡಲಾಗಿದ್ದು, ಹುಡುಕಾಟ ಕಾರ್ಯಾಚರಣೆ ಮುಂದುವರೆದಿದೆ.

Articles You Might Like

Share This Article