ಬೆಂಗಳೂರು,ಏ.2-ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಸಲು ಇನ್ನೆರಡು ದಿನ ಮಾತ್ರ ಬಾಕಿ ಉಳಿದಿದ್ದು, ನಿನ್ನೆಯವರೆಗೆ 96 ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆ ಸಲ್ಲಿಸಿದ್ದಾರೆ. ಮಾ.28ರಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಏ.4ರವರೆಗೆ ಉಮೇದುವಾರಿಕೆ ಸಲ್ಲಿಸಲು ಕಾಲಾವಕಾಶವಿದೆ. ಮೊದಲ ದಿನ 114, ನಿನ್ನೆ 55 ನಾಮಪತ್ರಗಳು ಸಲ್ಲಿಕೆಯಾಗಿದ್ದವು.
ನಿನ್ನೆ 49 ಮಂದಿ ನಾಮಪತ್ರ ಸಲ್ಲಿಸಿದ್ದು, ಅದರಲ್ಲಿ ಮೂವರು ಮಹಿಳೆಯರು ಸೇರಿದ್ದಾರೆ. ನಿನ್ನೆಯವರೆಗೆ ಬಿಜೆಪಿ 8, ಕಾಂಗ್ರೆಸ್ 6, ಜೆಡಿಎಸ್ ಒಬ್ಬ ಅಭ್ಯರ್ಥಿ ಮಾತ್ರ ನಾಮಪತ್ರ ಸಲ್ಲಿಸಿದ್ದಾರೆ. ಸಲ್ಲಿಕೆಯಾಗಿರುವ ನಾಮಪತ್ರಗಳಲ್ಲಿ 89 ಪುರುಷ, ಏಳು ಮಹಿಳೆಯರು ನಾಮಪತ್ರ ಸಲ್ಲಿಸಿದ್ದಾರೆ.
ಇಂದು ಮಂಗಳವಾರವಾದ ಕಾರಣ ಪ್ರಮುಖ ರಾಜಕೀಯ ಪಕ್ಷಗಳು ಹಾಗೂ ಸ್ವತಂತ್ರ ಅಭ್ಯರ್ಥಿಗಳು ಉಮೇದುವಾರಿಕೆ ಸಲ್ಲಿಸಲು ಹೆಚ್ಚು ಉತ್ಸಾಹ ತೋರಿಲ್ಲ. ನಾಳೆ ಹಾಗೂ ಗುರುವಾರ ಹೆಚ್ಚಿನ ಸಂಖ್ಯೆಯಲ್ಲಿ ನಾಮಪತ್ರ ಸಲ್ಲಿಸಲಾಗುತ್ತದೆ.