ದೆಹಲಿ ಜಹಾಂಗೀರ್ ಪುರಿ ಗಲಭೆಯಲ್ಲಿ ಕತ್ತಿ ಝಳಪಿಸಿದ್ದ ಕಿಡಿಗೇಡಿ ಅರೆಸ್ಟ್

Spread the love

ನವದೆಹಲಿ, ಏ.28- ವಾಯುವ್ಯ ದೆಹಲಿಯ ಜಹಾಂಗೀರ್‍ಪುರಿ ಪ್ರದೇಶದಲ್ಲಿ ಈ ತಿಂಗಳಲ್ಲಿ ನಡೆದ ಕೋಮು ಘರ್ಷಣೆಗೆ ಸಂಬಂಧಿಸಿದಂತೆ ಇನ್ನೂ ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ಇಬ್ಬರು ಬಾಲಾಪರಾಗಳು ಸೇರಿದಂತೆ ಈ ಪ್ರಕರಣದಲ್ಲಿ ಸುಮಾರು 30 ಮಂದಿಯನ್ನು ಬಂಧಿಸಲಾಗಿದೆ.

ಇಬ್ಬರು ಆರೋಪಿಗಳನ್ನು ಜಹಾಂಗೀರಪುರಿ ನಿವಾಸಿಗಳಾದ ಜಾಫರ್ (34) ಮತ್ತು ಬಾಬುದ್ದೀನ್ ಅಲಿಯಾಸ್ ಬಾಬು (43) ಎಂದು ಗುರುತಿಸಲಾಗಿದೆ. ಪ್ರಕರಣದ ತನಿಖೆ ನಡೆಸುತ್ತಿರುವ ದೆಹಲಿ ಪೊಲೀಸರ ಅಪರಾಧ ವಿಭಾಗದ ಪೊಲೀಸರು ಜಹಾಂಗೀರ್ ಪುರಿಯಿಂದ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಜಾಫರ್ ಮತ್ತು ಬಾಬುದ್ದೀನ್ ಇಬ್ಬರೂ ಗಲಭೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಹಲವು ಸಿಸಿಟಿವಿ ಕ್ಯಾಮೆರಾಗಳು ಮತ್ತು ಮೊಬೈಲ್ ವೀಡಿಯೊಗಳ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಜಾಫರ್ ಕತ್ತಿಯೊಂದಿಗೆ ಜನಸಂದಣಿಯಲ್ಲಿ ತಿರುಗಾಡುತ್ತಿರುವುದು ಕಂಡುಬಂದಿದೆ.

ಬುದ್ದೀನ್ ಹಿಂಸಾಚಾರದ ಸಮಯದಲ್ಲಿ ಗುಂಪನ್ನು ಪ್ರಚೋದಿಸುತ್ತಿರುವುದು ಕಂಡುಬಂದಿದೆ. ಡಿಜಿಟಲ್ ಸಾಕ್ಷ್ಯದ ಆಧಾರದ ಮೇಲೆ ಇಬ್ಬರನ್ನೂ ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.

ಏಪ್ರಿಲ್ 16 ರಂದು ಹನುಮಾನ್ ಜಯಂತಿ ಮೆರವಣಿಗೆಯಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ ಸಂಭವಿಸಿದ್ದು, ಎಂಟು ಪೊಲೀಸ್ ಸಿಬ್ಬಂದಿ ಮತ್ತು ಸ್ಥಳೀಯ ನಿವಾಸಿ ಗಾಯಗೊಂಡಿದ್ದರು. ಪೊಲೀಸರ ಪ್ರಕಾರ ಘರ್ಷಣೆಯಲ್ಲಿ ಕಲ್ಲು ತೂರಾಟ ಮತ್ತು ಬೆಂಕಿ ಹಚ್ಚಲಾಯಿತು, ಕೆಲವು ವಾಹನಗಳಿಗೆ ಬೆಂಕಿ ಹಚ್ಚಲಾಯಿತು. ಪ್ರಕರಣದ ಐವರು ಆರೋಪಿಗಳ ವಿರುದ್ಧ ಪೊಲೀಸರು ಕಠಿಣ ರಾಷ್ಟ್ರೀಯ ಭದ್ರತಾ ಕಾಯ್ದೆಯ ಅಡಿ ಪ್ರಕರಣ ದಾಖಲಿಸಿದ್ದಾರೆ.

Facebook Comments