ಬಿಜಾಪುರ, ಮೇ 29- ಬಿಜಾಪುರ ಜಿಲ್ಲೆಯಲ್ಲಿ ಭದ್ರತಾ ಸಿಬ್ಬಂದಿಯೊಂದಿಗೆ ಬುಧವಾರ ನಡೆದ ಎನ್ಕೌಂಟರ್‌ನಲ್ಲಿ ಇಬ್ಬರು ನಕ್ಸಲೀಯರು ಹತರಾಗಿದ್ದಾರೆ. ಭದ್ರತಾ ಸಿಬ್ಬಂದಿಯ ತಂಡವು ನಕ್ಸಲ್ ವಿರೋಧಿ ಕಾರ್ಯಾಚರಣೆಗೆ ಹೊರಟಿದ್ದಾಗ ಮದ್ದೇಡ್ ಪೊಲೀಸ್ ಠಾಣೆ ವ್ಯಾಪ್ತಿಯ ಅರಣ್ಯದಲ್ಲಿ ಗುಂಡಿನ ಚಕಮಕಿ ನಡೆದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಗುಂಡಿನ ಚಕಮಕಿ ನಿಂತ ಬಳಿಕ ಇಬ್ಬರು ನಕ್ಸಲೀಯರ ಮೃತದೇಹಗಳು ಮತ್ತು ಶಸಾಸಗಳನ್ನು ಸ್ಥಳದಿಂದ ವಶಪಡಿಸಿಕೊಳ್ಳಲಾಗಿದೆ. ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ. ಈ ಘಟನೆಯೊಂದಿಗೆ, ರಾಜ್ಯದಲ್ಲಿ ಭದ್ರತಾ ಪಡೆಗಳೊಂದಿಗಿನ ಪ್ರತ್ಯೇಕ ಎನ್ಕೌಂಟರ್‌ಗಳಲ್ಲಿ ಈ ವರ್ಷ ಇದುವರೆಗೆ 118 ನಕ್ಸಲೀಯರು ಹತರಾಗಿದ್ದಾರೆ.
ಮೇ 23 ರಂದು ನಾರಾಯಣಪುರ-ಬಿಜಾಪುರ ಅಂತರ ಜಿಲ್ಲಾ ಗಡಿಯಲ್ಲಿರುವ ಅರಣ್ಯದಲ್ಲಿ ಭದ್ರತಾ ಸಿಬ್ಬಂದಿಯೊಂದಿಗೆ ನಡೆದ ಎನ್ಕೌಂಟರ್‌ನಲ್ಲಿ ಏಳು ನಕ್ಸಲೀಯರು ಹತರಾಗಿದ್ದರು.ಮೇ 10 ರಂದು ಬಿಜಾಪುರ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್ಕೌಂಟರ್‌ನಲ್ಲಿ 12 ನಕ್ಸಲೀಯರು ಹತರಾಗಿದ್ದರು.
ಏಪ್ರಿಲ್ 30 ರಂದು ನಾರಾಯಣಪುರ ಮತ್ತು ಕಂಕೇರ್ ಜಿಲ್ಲೆಗಳ ಗಡಿಯಲ್ಲಿರುವ ಅರಣ್ಯದಲ್ಲಿ ಭದ್ರತಾ ಸಿಬ್ಬಂದಿಯೊಂದಿಗೆ ನಡೆದ ಎನ್ಕೌಂಟರ್‌ನಲ್ಲಿ ಮೂವರು ಮಹಿಳೆಯರು ಸೇರಿದಂತೆ ಹತ್ತು ನಕ್ಸಲೀಯರು ಕೊಲ್ಲಲ್ಪಟ್ಟಿದ್ದರು. ಅದಕ್ಕೂ ಮೊದಲು, ಏಪ್ರಿಲ್ 16 ರಂದು ರಾಜ್ಯದ ಕಂಕೇರ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್ಕೌಂಟರ್‌ನಲ್ಲಿ 29 ನಕ್ಸಲೀಯರನ್ನು ಹೊಡೆದುರುಳಿಸಲಾಗಿತ್ತು.