ನೈಜೀರಿಯಾ ದೇಶದ ಇಬ್ಬರು ಡ್ರಗ್ ಪೆಡ್ಲರ್‌ಗಳ ಬಂಧನ

Social Share

ಬೆಂಗಳೂರು,ನ.10- ಡ್ರಗ್ ಪೆಡ್ಲ0ಗ್‍ನಲ್ಲಿ ತೊಡಗಿದ್ದ ನೈಜೀರಿಯಾ ದೇಶದ ಇಬ್ಬರು ಡ್ರಗ್ ಪೆಡ್ಲರ್‍ಗಳನ್ನು ಸಿಸಿಬಿ ಪೊಲೀಸರು ಬಂಧಿಸಿ ಸುಮಾರು 25 ಲಕ್ಷ ರೂ. ಬೆಲೆ ಬಾಳುವ ಎಂ.ಡಿ.ಎಂ.ಎ ಕ್ರಿಸ್ಟೆಲ್, ಎಕ್ಸ್‍ಟಸಿ ಪಿಲ್ಸ್‍ಗಳು, ಎಲ್.ಎಸ್.ಡಿ ಸ್ಟ್ರಿಪ್ಸ್ ಇತ್ಯಾದಿ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ನಗರದ ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿ ಮತ್ತು ಸಿಬ್ಬಂದಿಗಳ ತಂಡವು ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಾರ್ಯಾಚರಣೆಯನ್ನು ನಡೆಸಿ ನೈಜೀರಿಯಾ ದೇಶದ ಇಬ್ಬರು ಡ್ರಗ್ ಪೆಡ್ಲರ್‍ಗಳನ್ನು ಬಂಧಿಸಿ 47 ಗ್ರಾಂ ತೂಕದ ಎಂ.ಡಿ.ಎಂ.ಎ ಕ್ರಿಸ್ಟೆಲ್, 0.25 ಗ್ರಾಂ ತೂಕದ ಎಲ್.ಎಸ್.ಡಿ ಸ್ಟ್ರಿಪ್ಸ್‍ಗಳು, 21 ಗ್ರಾಂ ತೂಕದ ಎಂ.ಡಿ.ಎಂ.ಎ ಎಕ್ಸ್‍ಟಸಿ ಪಿಲ್ಸ್‍ಗಳು, 2 ಕೆಜಿ ತೂಕದ ಗಾಂಜ, 3 ಮೊಬೈಲ್ ಫೋನ್‍ಗಳು, 2 ಲ್ಯಾಪ್‍ಟಾಪ್‍ಗಳು, 4500 ರೂ. ನಗದು ಕೃತ್ಯಕ್ಕೆ ಬಳಸಿದ್ದ ಒಂದು ದ್ವಿಚಕ್ರ ವಾಹನ ಮತ್ತು ಇತರೆ ವಸ್ತುಗಳನ್ನು ವಶಪಡಿಸಿಕೊಂಡಿದೆ.

ಬೆಂಗಳೂರಿಗರೇ ನಾಳೆ ರಸ್ತೆಗಿಳಿಯುವ ಮುನ್ನ ಇಲ್ಲಿ ಗಮನಿಸಿ

ಆರೋಪಿಗಳು ಸುಮಾರು ಆರು ವರ್ಷಗಳ ಹಿಂದೆ ವಿದ್ಯಾರ್ಥಿ ಮತ್ತು ಬ್ಯುಸಿನೆಸ್ ವೀಸಾ ಪಡೆದು ಬೆಂಗಳೂರಿಗೆ ಬಂದಿದ್ದು, ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದರು.

ಕಡಿಮೆ ಸಮಯದಲ್ಲಿ ಹೆಚ್ಚಿನ ಹಣ ಗಳಿಸುವ ಉದ್ದೇಶದಿಂದ ಪರಿಚಯಸ್ಥ ಗಿರಾಕಿಗಳಿಗೆ, ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳನ್ನು ಮಾರಾಟ ಮಾಡಿ ಅಕ್ರಮ ಹಣ ಸಂಪಾದನೆಯಲ್ಲಿ ತೊಡಗಿರುವುದು ಪ್ರಾಥಮಿಕ ವಿಚಾರಣೆಯಿಂದ ತಿಳಿದುಬಂದಿದೆ.

ಮುರುಘಾ ಮಠದ ಮಾಜಿ ಆಡಳಿತಾಧಿಕಾರಿ ಬಸವರಾಜನ್ ಅರೆಸ್ಟ್

ಆರೋಪಿಗಳು ಮಾದಕ ವಸ್ತುಗಳ ಮಾರಾಟ, ಸಾಗಾಟ ಮಾಡಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿರುವುದರಿಂದ ಇವರ ವಿರುದ್ದ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಎನ್.ಡಿ.ಪಿ.ಎಸ್. ಕಾಯ್ದೆ ಮತ್ತು ವಿದೇಶಿಯರ ಕಾಯ್ದೆ ರೀತ್ಯಾ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ಮುಂದುವರೆದಿದೆ.

Articles You Might Like

Share This Article