Monday, July 14, 2025
Homeಬೆಂಗಳೂರುಬೆಂಗಳೂರಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಇಬ್ಬರ ದುರ್ಮರಣ

ಬೆಂಗಳೂರಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಇಬ್ಬರ ದುರ್ಮರಣ

Two people die in two separate accidents in Bengaluru

ಬೆಂಗಳೂರು,ಜೂ.19– ರಾತ್ರಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಮಹಿಳೆ ಸೇರಿದಂತೆ ಇಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ.ಮಹಿಳೆ ಸಾವು-ಕೆಲಸದ ನಿಮಿತ್ತ ದ್ವಿಚಕ್ರ ವಾಹನದಲ್ಲಿ ಹೊರಗೆ ಹೋಗಿದ್ದ ತಿರುಮಶೆಟ್ಟಿ ಹಳ್ಳಿ ನಿವಾಸಿ ತ್ರಿವೇಣಿ (40) ಎಂಬುವವರು ರಾತ್ರಿ ಮನೆಗೆ ಹಿಂದಿರುಗುತ್ತಿದ್ದಾಗ ಗುಟ್ಟಹಳ್ಳಿ ಬಳಿ ವೇಗವಾಗಿ ಬಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಸುದ್ದಿ ತಿಳಿದು ತಿರುಮಶೆಟ್ಟಿ ಹಳ್ಳಿ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ, ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮಕೈಗೊಂಡಿದ್ದಾರೆ.ಪಾದಚಾರಿ ಸಾವು- ಮತ್ತೊಂದು ಪ್ರಕರಣದಲ್ಲಿ ಪಾದಚಾರಿ ಭರತ್‌ (25)ಎಂಬುವವರಿಗೆ ಯಾವುದೋ ವಾಹನ ಡಿಕ್ಕಿ ಹೊಡೆದ ಪರಿಣಾಮ ಅವರು ಮೃತಪಟ್ಟಿದ್ದಾರೆ.

ಖಾಸಗಿ ಕಂಪನಿಯ ಉದ್ಯೋಗಿಯಾಗಿದ್ದ ಭರತ್‌ ಅವರು ಕೆಲಸ ಮುಗಿಸಿಕೊಂಡು ರಾತ್ರಿ ಚಂದಾಪುರದ ತಮ ಮನೆಗೆ ನಡೆದು ಹೋಗುತ್ತಿದ್ದಾಗ ಯಾವುದೋ ವಾಹನ ಡಿಕ್ಕಿ ಹೊಡೆದಿದ್ದು, ಚಾಲಕ ವಾಹನ ನಿಲ್ಲಿಸದೇ ಚಾಲನೆ ಮಾಡಿಕೊಂಡು ಹೋಗಿದ್ದಾನೆ.

ಡಿಕ್ಕಿಯ ರಭಸಕ್ಕೆ ಭರತ್‌ ಅವರು ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸುದ್ದಿ ತಿಳಿದು ಸೂರ್ಯಸಿಟಿ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ, ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡು ಅಪಘಾತ ಮಾಡಿರುವ ವಾಹನ ಹಾಗೂ ಚಾಲಕನಿಗಾಗಿ ಶೋಧ ಕೈಗೊಂಡಿದ್ದಾರೆ.

RELATED ARTICLES

Latest News