Saturday, May 4, 2024
Homeಬೆಂಗಳೂರುಬೆಂಗಳೂರಲ್ಲಿ ತೆಲಂಗಾಣ ಮೂಲದ ಇಬ್ಬರು ಬಂಧನ, 80 ಲಕ್ಷ ಮೌಲ್ಯದ ಕೊಕೇನ್ ವಶ

ಬೆಂಗಳೂರಲ್ಲಿ ತೆಲಂಗಾಣ ಮೂಲದ ಇಬ್ಬರು ಬಂಧನ, 80 ಲಕ್ಷ ಮೌಲ್ಯದ ಕೊಕೇನ್ ವಶ

ಬೆಂಗಳೂರು, ಏ.5- ನಿಷೇಧಿತ ಮಾದಕ ವಸ್ತು ಕೊಕೇನ್ ಅನ್ನು ಮಾರಾಟ ಮಾಡುತ್ತಿದ್ದ ತೆಲಂಗಾಣ ಮೂಲದ ಇಬ್ಬರನ್ನು ದೇವನಹಳ್ಳಿ ಠಾಣೆ ಪೊಲೀಸರು ಬಂಧಿಸಿ 80 ಲಕ್ಷ ರೂ ಮೌಲ್ಯ 850 ಗ್ರಾಂ ಕೊಕೇನ್ಅನ್ನು ವಶಪಡಿಸಿಕೊಂಡಿದ್ದಾರೆ. ಸಾರ್ವಜನಿಕರಿಗೆ ಮಾದಕ ವಸ್ತು ಕೊಕೇನ್ ಮಾರಾಟ ಮಾಡುತ್ತಿದ್ದ ರಾಮುಗೌಡ (38), ಅಬೂಬಕರ್ ಖುರೇಶಿ (34) ನನ್ನು ಬಂಧಿಸಿ 80 ಲಕ್ಷ ಬೆಲೆ ಬಾಳುವ 850 ಗ್ರಾಂ ಕೊಕೇನ್ ವಶಪಡಿಸಿಕೊಂಡಿದ್ದಾರೆ.

ಏ.1 ರಂದು ಠಾಣಾ ಸಿಬ್ಬಂದಿ ಗಸ್ತಿನಲ್ಲಿರುವಾಗ ಖಚಿತ ಮಾಹಿತಿ ಮೇರೆಗೆ ಪ್ರಸನ್ನಹಳ್ಳಿ ರಸ್ತೆಯಲ್ಲಿ ಕಾರ್ಯಾಚರಣೆ ಕೈಗೊಂಡು ಇಬ್ಬರನ್ನು ಬಂಧಿಸಿ 80 ಲಕ್ಷ ಮೌಲ್ಯದ 850 ಗ್ರಾ ಕೊಕೇನ್, ಎರಡು ಮೊಬೈಲ್ ಫೋನ್ಗಳು, ಒಂದು ಎಲೆಕ್ಟ್ರಾನಿಕ್ ತೂಕದ ಯಂತ್ರ, ಒಂದು ಬ್ಯಾಗ್ ಹಾಗೂ 85 ಪ್ಲಾಸ್ಟಿಕ್ ಜಿಪ್ ಕವರ್ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಕೊಕೇನ್ನನ್ನು ಸರಬರಾಜು ಮಾಡುತ್ತಿದ್ದ ವ್ಯಕ್ತಿಯನ್ನು ವಶಕ್ಕೆ ಪಡೆಯುವ ಸಲುವಾಗಿ ತನಿಖೆ ಮುಂದುವರೆದಿದೆ. ಈಶಾನ್ಯ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಲಕ್ಷ್ಮೀಪ್ರಸಾದ್ ಮಾರ್ಗದರ್ಶನದಲ್ಲಿ, ದೇವನಹಳ್ಳಿ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತ ನವೀನ್ಕುಮಾರ ನೇತೃತ್ವದಲ್ಲಿ, ಇನ್ಸ್ಪೆಕ್ಟರ್ ಹಾಗೂ ಸಿಬ್ಬಂದಿ ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾಗಿರುತ್ತಾರೆ.

6.50 ಕೋಟಿ ಕೊಕೇನ್ ವಶ:
ನಿಷೇಧಿತ ಮಾದಕ ವಸ್ತು ಕೊಕೇನ್ ಮಾರಾಟ ಮಾಡುತ್ತಿದ್ದ ಕೀನ್ಯಾ ದೇಶದ ಪೆಡ್ಲರ್ ಕೈಲಿಕ್ತಾ ಜಾಬ್ ಕೌಮೇರು (36) ಎಂಬಾತನನ್ನು ಸಿ.ಕೆ. ಅಚ್ಚುಕಟ್ಟು ಠಾಣೆ ಪೊಲೀಸರು ಬಂಧಿಸಿ 6.50 ಲಕ್ಷ ಬೆಲೆ ಬಾಳುವ 81 ಗ್ರಾಂ ಕೊಕೇನ್ ವಶ ಪಡಿಸಿಕೊಂಡಿದ್ದಾರೆ.

ಏ.1 ರಂದು ತ್ಯಾಗರಾಜನಗರದ ಬಿಬಿಎಂಪಿ ಆಟದ ಮೈದಾನದಲ್ಲಿ ನಿಷೇದಿತ ಮಾದಕ ವಸ್ತುವಾದ ಕೊಕೇನ್ನನ್ನು ವಿದೇಶಿ ಪ್ರಜೆ ಯುವಕರಿಗೆ ಮತ್ತು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಪೊಲೀಸರಿಗೆ ಮಾಹಿತಿ ದೊರೆತಿದೆ.

ಪ್ರಕರಣ ದಾಖಲಿಸಿಕೊಂಡು ಸ್ಥಳಕ್ಕೆ ಹೋಗಿ ವಿದೇಶಿ ವ್ಯಕ್ತಿಯನ್ನು ವಶಕ್ಕೆ ಪಡೆದುಕೊಂಡು ವಿಚಾರಣೆಗೆ ಒಳಪಡಿಸಿ, ಕೊಕೆನ್ ಜಪ್ತಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಅರೋಪಿಯನ್ನು ಕೇಂದ್ರ ಕಾರಾಗೃಹಕ್ಕೆ ಕಳುಹಿಸಿದೆ.

RELATED ARTICLES

Latest News