Thursday, February 27, 2025
Homeಜಿಲ್ಲಾ ಸುದ್ದಿಗಳು | District Newsಹಾಸನ / Hassanಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಲಾರಿಗೆ ಬೈಕ್ ಡಿಕ್ಕಿಯಾಗಿ ಸಂಬಂಧಿಕರಿಬ್ಬರ ಸಾವು

ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಲಾರಿಗೆ ಬೈಕ್ ಡಿಕ್ಕಿಯಾಗಿ ಸಂಬಂಧಿಕರಿಬ್ಬರ ಸಾವು

Two relatives die in bike-lorry collision on Bangalore-Mangalore highway

ಬೆಂಗಳೂರು, ಫೆ.27- ಬೆಂಗಳೂರು-ಮಂಗಳೂರು ಹೆದ್ದಾರಿಯ ಸಕಲೇಶಪುರ ಪಟ್ಟಣದ ಬಳಿ ರಾತ್ರಿ ಸಂಭವಿಸಿದ ಅಪಘಾತದಲ್ಲಿ ಸಂಬಂಧಿಕರಿಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ.

ಹಿರಿಯೂರು ಕೊಡಿಗೆ ನಿವಾಸಿಗಳಾದ ಆಕಾಶ್ (22) ಮತ್ತು ಶಂಕರ್ (32) ಮೃತಪಟ್ಟ ಬೈಕ್ ಸವಾರರು. ಇವರಿಬ್ಬರು ಸಂಬಂಧಿಕರಾಗಿದ್ದು, ಶಿವರಾತ್ರಿ ಪ್ರಯುಕ್ತ ರಾತ್ರಿ ಜಾತ್ರೆ ಮುಗಿಸಿ 10.30ರ ಸುಮಾರಿನಲ್ಲಿ ವಾಪಾಸ್ ಬೈಕ್‌ನಲ್ಲಿ ಊರಿಗೆ ಹಿಂದಿರುಗುತ್ತಿದ್ದರು.

ಹಾಸನ ಜಿಲ್ಲೆ ಸಕಲೇಶಪುರ ಪಟ್ಟಣದ ಹೊಸ ಬಸ್ ನಿಲ್ದಾಣದ ಸಮೀಪ ಬೆಂಗಳೂರು- ಮಂಗಳೂರು ಹೆದ್ದಾರಿಯಲ್ಲಿ ಬೈಕ್‌ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರೂ ಸವಾರರೂ ಗಂಭೀರ ಗಾಯಗೊಂಡಿದ್ದು, ಆಕಾಶ ಸ್ಥಳದಲ್ಲೇ ಮೃತಪಟ್ಟರೆ, ಶಂಕರ್ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.

ಸುದ್ದಿ ತಿಳಿದು ಸಕಲೇಶಪುರ ಟೌನ್ ಠಾಣೆ ಪೊಲೀಸರು ಸ್ಥಳಕ್ಕೆ ದಾವಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

RELATED ARTICLES

Latest News