ಉಗ್ರರ ಗುಂಡಿನ ದಾಳಿ : ಸೈನಿಕರಿಗೆ ಗಂಭೀರ ಗಾಯ

0
966

ಶ್ರೀನಗರ,ಅ.3- ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ ಇಬ್ಬರು ಸೈನಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಮ್ಮು-ಕಾಶ್ಮೀರದ ರಜೋರಿ ಜಿಲ್ಲೆಯಲ್ಲಿ ಸಂಭವಿಸಿದೆ. ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಅವಿತುಕೊಂಡಿದ್ದ ಉಗ್ರರನ್ನು ಸದೆಬಡಿಯಲು ಮುಂದಾದಾಗ ಗುಂಡಿನ ಚಕಮಕಿಯಲ್ಲಿ ಇಬ್ಬರು ಸೈನಿಕರು ತೀವ್ರವಾಗಿ ಗಾಯಗೊಂಡಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಯೋಧರು ಅರಣ್ಯದಲ್ಲಿ ಅವಿತಿದ್ದ ಉಗ್ರರಿಗೆ ಶರಣಾಗುವಂತೆ ಸೂಚಿಸಿದರು.

2 ತಿಂಗಳಲ್ಲಿ 4 ಸಾವಿರ ಎಕರೆ ಅರಣ್ಯ ಹೆಚ್ಚಳ : ಸಚಿವ ಈಶ್ವರ್‌ ಖಂಡ್ರೆ

ಸೇನಾಪಡೆ ಮತ್ತು ಜಮ್ಮು-ಕಾಶ್ಮೀರ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯ ವೇಳೆ ಉಗ್ರರು ಗುಂಡಿನ ದಾಳಿ ನಡೆಸಿದಾಗ ಭಾರತೀಯ ಸೇನಾಪಡೆಗೆ ಸೇರಿದ ಇಬ್ಬರು ಯೋಧರಿಗೆ ಗಾಯವಾಗಿದೆ.

ರಜೋರಿ ಜಿಲ್ಲೆಯ ಬ್ರೋಹ್ ಅಂಡ್ ಸೂಮ್, ಕಲ್ಕೋಟೆ ಪ್ರದೇಶದಲ್ಲಿ ಉಗ್ರರು ಅವಿತುಕೊಂಡು ಸೇನಾಪಡೆಗಳನ್ನು ಗುರಿಯಾಗಿಟ್ಟುಕೊಂಡು ದಾಳಿ ನಡೆಸುವ ಹೊಂಚು ರೂಪಿಸಿದ್ದರು. ಮೂಲಗಳ ಪ್ರಕಾರ ಈ ಪ್ರದೇಶದಲ್ಲಿ ಇಬ್ಬರಿಂದ ಮೂವರು ಉಗ್ರರು ಸಕ್ರಿಯರಾಗಿದ್ದು, ಅವರನ್ನು ಹಿಮ್ಮೆಟ್ಟಿಸಲು ಸೇನಾಪಡೆ ಕಾರ್ಯಾಚರಣೆಯನ್ನುಮುಂದುವರೆಸಿದೆ.