ಹೆಬ್ಬಾಳದ ಇಬ್ಬರು ಕಾಲೇಜು ವಿದ್ಯಾರ್ಥಿಗಳು ನೀರು ಪಾಲು

ಮೈಸೂರು, ಡಿ.10- ತಲಕಾಡು ಬಳಿಯ ನಿಸರ್ಗ ಧಾಮಕ್ಕೆ ತೆರಳಿದ್ದ ವಿದ್ಯಾರ್ಥಿಗಳ ಪೈಕಿ ಇಬ್ಬರು ಕಾವೇರಿ ನದಿಯಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ತಲಕಾಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತಪಟ್ಟ ವಿದ್ಯಾರ್ಥಿಗಳನ್ನು ಆಲ್ಫ್ರೆಡ್ ವಿಜಯ್ ಮತ್ತು ಹೇಮಂತ್ ಎಂದು ಗುರುತಿಸಲಾಗಿದೆ. ಬೆಂಗಳೂರಿನ ಹೆಬ್ಬಾಳ ಬಳಿಯ ಕಾಲೇಜಿನಿಂದ 50 ವಿದ್ಯಾರ್ಥಿಗಳು ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ತಲಕಾಡು ಬಳಿಯ ನಿಸರ್ಗಧಾಮಕ್ಕೆ ಪ್ರವಾಸಕ್ಕೆ ತೆರಳಿದ್ದರು.

ಈ ಸಂದರ್ಭದಲ್ಲಿ ಸಮೀಪದ ಕಾವೇರಿ ನದಿಯಲ್ಲಿ ಈಜಲು 5 ಮಂದಿ ಹೋಗಿದ್ದಾಗ ಇಬ್ಬರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಉಸಿರುಗಟ್ಟಿ ಮೃತಪಟ್ಟಿದ್ದಾರೆ. ಸುದ್ದಿ ತಿಳಿದ ತಲಕಾಡು ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಒಬ್ಬನ ಶವವನ್ನು ಪತ್ತೆ ಹಚ್ಚಿದ್ದು , ಮತ್ತೊಂದು ಶವಕ್ಕಾಗಿ ಶೋಧ ಮುಂದುವರೆಸಿದ್ದಾರೆ.