Thursday, December 5, 2024
Homeಇದೀಗ ಬಂದ ಸುದ್ದಿಭೀಕರ ಅಪಘಾತ: ಸರ್ಕಾರಿ ಪ್ರೌಢಶಾಲೆಯ ಇಬ್ಬರು ಶಿಕ್ಷಕರು ದುರ್ಮರಣ..

ಭೀಕರ ಅಪಘಾತ: ಸರ್ಕಾರಿ ಪ್ರೌಢಶಾಲೆಯ ಇಬ್ಬರು ಶಿಕ್ಷಕರು ದುರ್ಮರಣ..

ಪಾವಗಡ,ಮೇ12- ಚಾಲಕನ ಅತಿ ವೇಗದಿಂದಾಗಿ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಉರುಳಿ ಬಿದ್ದ ಪರಿಣಾಮ ಪ್ರೌಢಶಾಲೆಯ ಮುಖ್ಯ ಶಿಕ್ಷಕರಿಬ್ಬರು ಸಾವನ್ನಪ್ಪಿ, ಇಬ್ಬರು ಗಂಭೀರಾಗಿ ಗಾಯಗೊಂಡಿರುವ ಘಟನೆ ತಾಲೂಕಿನ ಕಣವೆನಹಳ್ಳಿ ಗೇಟ್ ಬಳಿ ತಡರಾತ್ರಿ ನಡೆದಿದೆ.

ಪಾವಗಡ ಪಟ್ಟಣದ ಸರ್ಕಾರಿ ಜೂನಿಯರ್ ಕಾಲೇಜಿನ ಪ್ರೌಢ ಶಾಲಾ ವಿಭಾಗದ ಪ್ರಾಂಶುಪಾಲರಾದ ಓ ಧನಂಜಯ ಹಾಗೂ ಗೌಡಹಟ್ಟಿ ಪ್ರೌಡ ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀ ಕೃಷ್ಣ ಮೃತಪಟ್ಟ ದುದೈರ್ವಿಗಳು. ಶಿಕ್ಷಕರಾದ ನರಸಿಂಹಮೂರ್ತಿ ಹಾಗೂ ವೆಂಕಟಾಚಲಪತಿ ಅವರಿಗೆ ಗಂಭೀರ ಗಾಯಗಳಾಗಿದ್ದು ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

ನಾಲ್ವರು ಶಿಕ್ಷಕರು ಕಳೆದ ರಾತ್ರಿ ತುಮಕೂರಿನಲ್ಲಿ ನಡೆದ ಶಿಕ್ಷಕರೊಬ್ಬರ ಪುತ್ರಿಯ ವಿವಾಹ ಆರತಕ್ಷತೆ ಮುಗಿಸಿಕೊಂಡು ಒಂದೆ ಕಾರಿನಲ್ಲಿ ಪಾವಗಡಕ್ಕೆ ವಾಪಸ್ ತೆರಳುತ್ತಿದ್ದಾಗ ತಡರಾತ್ರಿ 2.30ರ ಸಮಯದಲ್ಲಿ ಕಣವೆನಹಳ್ಳಿ ಗೇಟ್ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದಿದ್ದು ಕಾರಿನ ಕೆಳಗೆ ಸಿಲುಕಿ ಇಬ್ಬರು ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಸುದ್ದಿ ತಿಳಿಯುತ್ತಿದ್ದಂತೆ ಪಾವಗಡ ಪಟ್ಟಣ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈ ಗೊಂಡಿದ್ದಾರೆ. ಚಾಲಕ ನಿದ್ರೆಗೆ ಜಾರಿದ್ದರಿಂದ ಈ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ. ಕಾರು ಪಲ್ಟಿಹೊಡೆದ ರಭಸಕ್ಕೆ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.

ಆಕ್ರಂಧನ: ಕುಟುಂಬಕ್ಕೆ ಆಧಾರವಾಗಿದ್ದವರನ್ನು ಕಳೆದುಕೊಂಡ ಕುಟುಂಬ ಸದಸ್ಯರ ಆಕ್ರಂಧನ ಮುಗಿಲು ಮುಟ್ಟಿತ್ತು. ಜೊತೆಗೆ ತಾಲೂಕಿನ ಎಲ್ಲಾ ಶಾಲೆಗಳ ಶಿಕ್ಷಕರು ಸಹದ್ಯೋಗಿಗಳು ಕಂಬನಿ ಮಿಡಿದಿದ್ದು ದುಃಖ ಭರಿಸುವ ಶಕ್ತಿಯನ್ನು ಕುಟುಂಬದ ಸದಸ್ಯರಿಗೆ ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸಿದ್ದಾರೆ.

RELATED ARTICLES

Latest News