ಹ್ಯಾಂಡ್ ಲಾಕ್ ಮುರಿದು ದ್ವಿಚಕ್ರ ವಾಹನ ಕಳ್ಳತನ : ಆರೋಪಿ ಸೆರೆ

Social Share

ಬೆಂಗಳೂರು, ಅ.29- ಮನೆಗಳ ಮುಂದೆ ನಿಲ್ಲಿಸಿದಂತಹ ದ್ವಿ ಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಆರೋಪಿಯೊಬ್ಬನನ್ನು ವಿವೇಕನಗರ ಠಾಣೆ ಪೊಲೀಸರು ಬಂಧಿಸಿ ಸುಮಾರು 7 ಲಕ್ಷ ರೂ. ಬೆಲೆ ಬಾಳುವ 13 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.

ನಗರದ ಮಂಗಮ್ಮನ ಪಾಳ್ಯದ ನಿವಾಸಿ ಯಾಸಿನ್ ಪಾಷಾ(19) ಬಂಧಿತ ಆರೋಪಿ. ಈತ ತನ್ನ ಸಹಚರನೊಂದಿಗೆ ಹಗಲು ಮತ್ತು ರಾತ್ರಿ ವೇಳೆಯಲ್ಲಿ ಮನೆಗಳ ಮುಂದೆ ನಿಲ್ಲಿಸಿರುವ ವಾಹನಗಳ ಲಾಕ್ ಮುರಿದು ಕಳ್ಳತನ ಮಾಡುತ್ತಿದ್ದುದ್ದಾಗಿ ವಿಚಾರಣೆ ವೇಳೆ ಆರೋಪಿ ತಿಳಿಸಿದ್ದಾನೆ.

ಎಂದಿನಂತೆ ವಿದ್ಯಾರ್ಥಿಯೊಬ್ಬ ಕಾಲೇಜ್ ಮುಗಿಸಿಕೊಂಡು ಬಂದು ತನ್ನ ಹೋಂಡಾ ಡಿಯೋ ದ್ವಿಚಕ್ರ ವಾಹನವನ್ನು ಮನೆಯ ಮುಂಭಾಗ ಪಾರ್ಕ್ ಮಾಡಿ, ಮರು ದಿವಸ ನೋಡಿದಾಗ ದ್ವಿಚಕ್ರ ವಾಹನ ಕಳ್ಳತನವಾಗಿರುವುದು ಕಂಡು ಬಂದಿದೆ.

ವಂದೇ ಭಾರತ್ ರೈಲಿಗೆ ಮತ್ತೆ ದನ ಡಿಕ್ಕಿ, 20 ನಿಮಿಷ ಪ್ರಯಾಣ ವಿಳಂಬ

ಈ ಬಗ್ಗೆ ವಿವೇಕನಗರ ಠಾಣೆಗೆ ವಿದ್ಯಾರ್ಥಿ ತಂದೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ಪೊಲೀಸರು ಆರೋಪಿ ಬಗ್ಗೆ ಮಾಹಿತಿ ಸಂಗ್ರಹಿಸಿ ಆತನನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ.

ಈ ಹಿಂದೆ ಅಶೋಕನಗರ, ಸಂಪಂಗಿರಾಮನಗರ, ವಿವೇಕನಗರ, ಬನಶಂಕರಿ, ಹಲಸೂರು ಇನ್ನೂ ಮುಂತಾದ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ದ್ವಿಚಕ್ರ ವಾಹನಗಳನ್ನು ಕಳ್ಳತನ ಮಾಡಿರುವುದಾಗಿ ತನ್ನ ಸ್ವ-ಇಚ್ಛಾ ಹೇಳಿಕೆಯಲ್ಲಿ ತಿಳಿಸಿದ್ದು, ಆರೋಪಿಯು ಈ ಹಿಂದೆ ಜೆ.ಪಿ. ನಗರ ಪೊಲೀಸ್ ಠಾಣೆಯ ದರೋಡೆ ಪ್ರಕರಣದಲ್ಲಿ ಆರೋಪಿತನಾಗಿ ನ್ಯಾಯಾಲಯದ ಜಾಮೀನಿನ ಮೇಲೆ ಬಿಡುಗಡೆ ಹೊಂದಿದ್ದು ಹೊರ ಬಂದ ನಂತರವೂ ಮತ್ತೆ ಕೃತ್ಯವೆಸಗಿರುವ ಬಗ್ಗೆ ತನಿಖೆಯಿಂದ ತಿಳಿದು ಬಂದಿರುತ್ತದೆ.

ಅಪ್ಪು ಸಾಧನೆ ಪಠ್ಯವಾಗಲಿ : ಅಭಿಮಾನಿಗಳ ಆಗ್ರಹ

ಆರೋಪಿಯು ನೀಡಿದ ಮಾಹಿತಿ ಮೇರೆಗೆ ವಿವಿಧ ಪೊಲೀಸ್ ಠಾಣಾ ಸರಹದ್ದಿನಲ್ಲಿ ಕಳವು ಮಾಡಲಾಗಿದ್ದ ಒಟ್ಟು 13 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ವಿವೇಕನಗರ ಪೊಲೀಸ್ ಠಾಣೆಯ 4 ಪ್ರಕರಣಗಳು, ಎಸ್.ಆರ್.ನಗರ, ಅಶೋಕನಗರ, ಹಲಸೂರು, ಕೆ.ಜಿ.ಹಳ್ಳಿ, ಸುಬ್ರಮಣ್ಯಪುರ, ಬನಶಂಕರಿ, ಯಶವಂತಪುರ, ಬೇಗೂರು ಪೊಲೀಸ್ ಠಾಣೆಯ ತಲಾ 1 ಪ್ರಕರಣ ಸೇರಿದಂತೆ ಒಟ್ಟು 13 ಪ್ರಕರಣಗಳು ಪತ್ತೆಯಾಗಿರುತ್ತವೆ.

ಈ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಮತ್ತೊಬ್ಬ ಆರೋಪಿ ಬಂಧನಕ್ಕೆ ಪೊಲೀಸರು ಶೋಧ ನಡೆಸುತ್ತಿದ್ದಾರೆ.
ಬೆಂಗಳೂರು ನಗರ ಕೇಂದ್ರ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಶ್ರೀನಿವಾಸ್ ಗೌಡ ಮಾರ್ಗದರ್ಶನದಲ್ಲಿ, ಕಬ್ಬನ್‍ಪಾರ್ಕ್ ಉಪ ವಿಭಾಗದ ಸಹಾಯಕ ಪೊಲೀಸ ಆಯುಕ್ತರು ರಾಜೇಂದ್ರ ಡಿ.ಎಸ್ ನೇತೃತ್ವದಲ್ಲಿ ವಿವೇಕನಗರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‍ಪೆಕ್ಟರ್ ಕೆ.ಕಾಂತರಾಜ್ ಅವರ ತಂಡ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿ ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ.

Articles You Might Like

Share This Article