ಬೆಂಗಳೂರು,ಆ.7- ರಾತ್ರಿ ವೇಳೆಯಲ್ಲಿ ದ್ವಿಚಕ್ರ ವಾಹನಗಳ ಹ್ಯಾಂಡ್‍ಲಾಕ್ ಮುರಿದು ಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಜ್ಞಾನಭಾರತಿ ಠಾಣೆ ಪೊಲೀಸರು ಬಂಧಿಸಿ 5.95 ಲಕ್ಷ ರೂ. ಮೌಲ್ಯದ 6 ಬೈಕ್‍ಗಳು ಹಾಗು ನಾಲ್ಕು ಚಕ್ರದ ಒಂದು ವಾಹನ ವಶಪಡಿಸಿಕೊಂಡಿದ್ದಾರೆ.
ಚಿಕ್ಕಬಳ್ಳಾಪುರ, ಬಾಗೇಪಲ್ಲಿ ತಾಲ್ಲೂಕಿನ ಪ್ರಸನ್ನಕುಮಾರ್ ಅಲಿಯಾಸ್ ಗಬ್ಬರ್(26) ಮತ್ತು ಬೆಂಗಳೂರಿನ ಉತ್ತರಹಳ್ಳಿಯ ಭರತ್ ಅಲಿಯಾಸ್ ಕರಿಭರತ ಅಲಿಯಾಸ್ ಕಳ್ಳಭರತ(20) ಬಂತರು. ಜ್ಞಾನಭಾರತಿ ವ್ಯಾಪ್ತಿ ಹಾಗೂ ನಗರದ ವಿವಿಧ ಪೊಲೀಸ್ ಠಾಣೆ ವ್ಯಾಪ್ತಿಗಳಲ್ಲಿ ದ್ವಿಚಕ್ರ ವಾಹನಗಳ ಕಳ್ಳತನವಾಗಿದ್ದ ಬಗ್ಗೆ ಹಲವು ದೂರುಗಳು ದಾಖಲಾಗಿದ್ದವು.
ಪಶ್ಚಿಮ ವಿಭಾಗದ ಡಿಸಿಪಿ ಲಕ್ಷ್ಮಣ್. ಬಿ ನಿಂಬರಗಿ, ಕೆಂಗೇರಿ ಗೇಟ್ ಉಪವಿಭಾಗದ ಎಸಿಪಿ ಕೋದಂಡರಾಮ ಮಾರ್ಗದರ್ಶನದಲ್ಲಿ ಇನ್‍ಸ್ಪೆಕ್ಟರ್ ಮಂಜುನಾಥ್ ಅವರನ್ನೊಳ ಗೊಂಡ ತಂಡ ಕಾರ್ಯಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದೆ.
ಆರೋಪಿಗಳ ಬಂಧನದಿಂದ ಜ್ಞಾನಭಾರತಿ ಠಾಣೆಯ ಒಂದು ಪ್ರಕರಣ, ಮಾಗಡಿ 2, ಬಂಡೆಪಾಳ್ಯ, ಕೋಡಿಗೆಹಳ್ಳಿ ಹಾಗೂ ಬಿಡದಿ ಪೊಲೀಸ್ ಠಾಣೆಯ ತಲಾ ಒಂದು ಪ್ರಕರಣಗಳು ಪತ್ತೆಯಾಗಿವೆ.