Thursday, September 19, 2024
Homeಬೆಂಗಳೂರುಸೆಂಟ್ರಿಂಗ್ ಕುಸಿದು ಇಬ್ಬರು ಕಾರ್ಮಿಕರು ಮೃತಪಟ್ಟ ಪ್ರಕರಣ, ಎಫ್ಐಆರ್ ದಾಖಲು

ಸೆಂಟ್ರಿಂಗ್ ಕುಸಿದು ಇಬ್ಬರು ಕಾರ್ಮಿಕರು ಮೃತಪಟ್ಟ ಪ್ರಕರಣ, ಎಫ್ಐಆರ್ ದಾಖಲು

ಬೆಂಗಳೂರು, ಆ.11- ಖಾಸಗಿ ಕಂಪೆನಿಯ ನಿರ್ಮಾಣ ಹಂತದ ಕಟ್ಟಡದಲ್ಲಿ ಸೆಂಟ್ರಿಂಗ್ ಕುಸಿದು ಇಬ್ಬರು ಕಾರ್ಮಿಕರು ಮೃತಪಟ್ಟು ಒಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬಗ್ಗೆ ಪೀಣ್ಯ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಕಟ್ಟಡದ ಮಾಲೀಕರು, ಗುತ್ತಿಗೆದಾರರು, ಮ್ಯಾನೇಜರ್, ಎಂಜಿನಿಯರ್ ಹಾಗೂ ಇನ್ನಿತರರ ಮೇಲೆ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.ಪೀಣ್ಯದ ಎನ್ಟಿಟಿಎಫ್ ವೃತ್ತದ ಬಳಿ ನಿರ್ಮಾಣ ಹಂತದ ಕಟ್ಟಡದ 5ನೇ ಮಹಡಿಗೆ ಸೆಂಟ್ರಿಂಗ್ ಹಾಕುವ ಸಂದರ್ಭದಲ್ಲಿ ನಿನ್ನೆ ಮಧ್ಯಾಹ್ನ ಸೆಂಟ್ರಿಂಗ್ ಕುಸಿದ ಪರಿಣಾಮ ಇಬ್ಬರು ಮೃತಪಟ್ಟಿದ್ದಾರೆ. ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸುದ್ದಿ ತಿಳಿದ ಪೀಣ್ಯ ಠಾಣೆ ಪೊಲೀಸರು ಸ್ಥಳಕ್ಕೆ ದಾವಿಸಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡು ಯಾವ ಹಂತದಲ್ಲಿ ಕಾಮಗಾರಿಯಲ್ಲಿ ನಿರ್ಲಕ್ಷ್ಯತೆ ಮಾಡಲಾಗಿದೆ ಎಂಬುವುದರ ಬಗ್ಗೆ ತನಿಖೆ ಕೈಗೊಂಡಿದ್ದಾರೆ.

RELATED ARTICLES

Latest News