Sunday, September 8, 2024
Homeಜಿಲ್ಲಾ ಸುದ್ದಿಗಳು | District Newsಮರಕ್ಕೆ ಕಾರು ಡಿಕ್ಕಿಯಾಗಿ ಇಬ್ಬರು ಯುವಕರ ದುರ್ಮರಣ

ಮರಕ್ಕೆ ಕಾರು ಡಿಕ್ಕಿಯಾಗಿ ಇಬ್ಬರು ಯುವಕರ ದುರ್ಮರಣ

ಹಾವೇರಿ, ಜು.13- ಅತಿ ವೇಗದಿಂದಾಗಿ ಕಾರು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಮೃತಪಟ್ಟಿರುವ ಘಟನೆ ಶಿಗ್ಗಾಂವಿ ಪೊಲೀಸ್‌‍ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಮೃತಪಟ್ಟವರನ್ನು ಸವಣೂರಿನ ನೀಲಪ್ಪ ಮೂಲಿಮನಿ(23) ಮತ್ತು ಸುದೀಪ್‌ ಕೋಟಿ(24) ಮೃತಪಟ್ಟವರು.

ಘಟನೆಯಲ್ಲಿ 5 ಮಂದಿ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.ಏಳು ಮಂದಿ ಕಾರಿನಲ್ಲಿ ಹೋಗುತ್ತಿದ್ದಾಗ ಹಾವೇರಿ ಜಿಲ್ಲೆಯ ಶಿಗ್ಗಾಂವಿ ಪಟ್ಟಣದ ಬಳಿ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ ಇಬ್ಬರ ಮೃತದೇಹಗಳನ್ನು ಕಾರಿನಿಂದ ಹೊರ ತೆಗೆದು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ರವಾನಿಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

RELATED ARTICLES

Latest News