ಬೇಲೂರು,ಜ.2-ಕೆರೆಯಲ್ಲಿ ಮುಳುಗಿ ಇಬ್ಬರು ಯುವಕರು ಮೃತಪಟ್ಟಿರುವ ಘಟನೆ ಮಲಸಾವರ ಗ್ರಾಮದಲ್ಲಿ ನಡೆದಿದೆ.ತಾಲೂಕಿನ ಮಲಸಾವರ ಗ್ರಾಮದ ಲಕ್ಷ್ಮಿಪುರ ಬಡಾವಣೆಯ ನಿವಾಸಿಗಳಾದ ಅಜಿತ್ (30 ) ಹಾಗೂ ಅಶೋಕ್ (35) ಮೃತಪಟ್ಟವರು.
ಹೊಸ ವರ್ಷದ ಆಚರಣೆಗೆ ಸಲುವಾಗಿ ಇಬ್ಬರು ಲಕ್ಷ್ಮಿಪುರ ಕೆರೆ ಏರಿಯ ಮೇಲೆ ಪಾರ್ಟಿ ಮಾಡಿ ನಂತರ ನೀರಿಗೆ ಬಿದ್ದಿದ್ದಾರೆ ಬೆಳಿಗ್ಗೆಯಾದರೂ ಮನೆಗೆ ಯುವಕರು ಬಾರದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಹುಡುಕಾಟ ನಡೆಸಿದ್ದಾರೆ.
ಈ ವೇಳೆ ಕೆರೆಯ ಏರಿಯ ಮೇಲೆ ವಾಹನ, ಚಪ್ಪಲಿಗಳು ಕಂಡು ಬಂದಿವೆ. ಸಂಶಯಗೊಂಡ ಗ್ರಾಮಸ್ಥರು ಅಗ್ನಿಶಾಮಕ ಹಾಗೂ ಪೊಲೀಸ್ ಠಾಣೆಗೆ ಕರೆ ಮಾಡಿದ್ದಾರೆ.
ಸ್ಥಳಕ್ಕೆ ಬಂದ ಸಿಬ್ಬಂದಿ, ಕೆರೆಯಲ್ಲಿ ಶೋಧಕಾರ್ಯ ನಡೆಸಿದ್ದು, ಇಬ್ಬರ ಮೃತದೇಹಗಳು ಪತ್ತೆಯಾಗಿವೆ. ಈ ಬಗ್ಗೆ ಅರೇಹಳ್ಳಿ ಠಾಣೆಯಲ್ಲಿ ದೂರು ದಾಖಲಾಗಿದ್ದು, ಘಟನೆ ಕುರಿತಂತೆ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.