ಯುಪಿಯಲ್ಲಿ ಇಂದಿನಿಂದ ನಡೆಯಲಿದೆ ಮಾನ್ಯತೆ ಪಡೆಯದ ಮದರಸಾಗಳ ಸಮೀಕ್ಷೆ

Social Share

ಲಕ್ನೋ, ಸೆ.1 (ಪಿಟಿಐ) – ಉತ್ತರ ಪ್ರದೇಶ ಸರ್ಕಾರವು ರಾಜ್ಯದಲ್ಲಿನ ಮಾನ್ಯತೆ ಪಡೆಯದ ಮದರಸಾಗಳ ಸಮೀಕ್ಷೆಯನ್ನು ನಡೆಸಲಿದ್ದು, ಶಿಕ್ಷಕರ ಸಂಖ್ಯೆ, ಪಠ್ಯಕ್ರಮ ಮತ್ತು ಅಲ್ಲಿ ಲಭ್ಯವಿರುವ ಮೂಲ ಸೌಕರ್ಯಗಳ ಬಗ್ಗೆ ಮಾಹಿತಿ ಸಂಗ್ರಹಿಸಲಿದೆ.

ಮದರಸಾಗಳಲ್ಲಿ ವಿದ್ಯಾರ್ಥಿಗಳಿಗೆ ಮೂಲ ಸೌಕರ್ಯಗಳ ಲಭ್ಯತೆಗೆ ಸಂಬಂಸಿದಂತೆ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಗತ್ಯಕ್ಕೆ ಅನುಗುಣವಾಗಿ ರಾಜ್ಯ ಸರ್ಕಾರ ಸಮೀಕ್ಷೆ ನಡೆಸಲಿದೆ ಎಂದು ಅಲ್ಪಸಂಖ್ಯಾತ ವ್ಯವಹಾರಗಳ ರಾಜ್ಯ ಸಚಿವ ಡ್ಯಾನಿಶ್ ಆಜಾದ್ ಅನ್ಸಾರಿ ಹೇಳಿದ್ದಾರೆ.

ಸದ್ಯದಲ್ಲೇ ಸಮೀಕ್ಷೆ ಆರಂಭವಾಗಲಿದೆ ಎಂದು ಸಚಿವ ಅನ್ಸಾರಿ ಅವರು ಪಿಟಿಐಗೆ ತಿಳಿಸಿದರು.ಸಮೀಕ್ಷೆಯ ಸಮಯದಲ್ಲಿ, ಮದರಸಾದ ಹೆಸರು ಮತ್ತು ಅದನ್ನು ನಿರ್ವಹಿಸುವ ಸಂಸ್ಥೆ, ಅದು ಖಾಸಗಿ ಅಥವಾ ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿದೆಯೇ, ಅಲ್ಲಿ ಓದುತ್ತಿರುವ ವಿದ್ಯಾರ್ಥಿಗಳ ಸಂಖ್ಯೆ ಮತ್ತು ಕುಡಿಯುವ ನೀರು, ಶೌಚಾಲಯ, ಪೀಠೋಪಕರಣಗಳು ಮತ್ತು ವಿದ್ಯುತ್ ಸರಬರಾಜು ಸೌಲಭ್ಯಗಳ ಬಗ್ಗೆ ಮಾಹಿತಿಯನ್ನು ಸಂಗ್ರಹಿಸಲಾಗುತ್ತದೆ.

ಮದರಸಾದಲ್ಲಿರುವ ಶಿಕ್ಷಕರ ಸಂಖ್ಯೆ, ಅದರ ಪಠ್ಯಕ್ರಮ, ಆದಾಯದ ಮೂಲ ಮತ್ತು ಯಾವುದೇ ಸರ್ಕಾರೇತರ ಸಂಸ್ಥೆಯೊಂದಿಗೆ ಅದರ ಸಂಬಂಧದ ಬಗ್ಗೆ ಮಾಹಿತಿಯನ್ನು ಸಂಗ್ರಹಿಸಲಾಗುವುದು ಎಂದು ಅವರು ಹೇಳಿದರು.ಈ ಸಮೀಕ್ಷೆಯ ನಂತರ ರಾಜ್ಯ ಸರ್ಕಾರ ಹೊಸ ಮದರಸಾಗಳನ್ನು ಗುರುತಿಸುವ ಪ್ರಕ್ರಿಯೆಯನ್ನು ಪ್ರಾರಂಭಿಸುತ್ತದೆಯೇ ಎಂಬ ಪ್ರಶ್ನೆಗೆ, ಪ್ರಸ್ತುತ ಮಾನ್ಯತೆ ಇಲ್ಲದ ಮದರಸಾಗಳ ಬಗ್ಗೆ ಮಾತ್ರ ಮಾಹಿತಿ ಸಂಗ್ರಹಿಸುವುದು ಸರ್ಕಾರದ ಉದ್ದೇಶವಾಗಿದೆ ಎಂದು ಸಚಿವರು ಹೇಳಿದರು.

ಪ್ರಸ್ತುತ ಉತ್ತರ ಪ್ರದೇಶದಲ್ಲಿ ಒಟ್ಟು 16,461 ಮದರಸಾಗಳಿದ್ದು, ಈ ಪೈಕಿ 560ಕ್ಕೆ ಸರ್ಕಾರದ ಅನುದಾನ ನೀಡಿರುವುದು ಗಮನಾರ್ಹ. ರಾಜ್ಯದಲ್ಲಿ ಕಳೆದ ಆರು ವರ್ಷಗಳಿಂದ ಹೊಸ ಮದರಸಾಗಳು ಅನುದಾನದ ಪಟ್ಟಿಯಲ್ಲಿ ಸೇರ್ಪಡೆಯಾಗಿಲ್ಲ.

ಮದರಸಾಗಳಲ್ಲಿ ವಿವಾದಿತ ವ್ಯವಸ್ಥಾಪನಾ ಸಮಿತಿ ಅಥವಾ ಸಮಿತಿಯ ಯಾವುದೇ ಸದಸ್ಯರು ಗೈರುಹಾಜರಾದರೆ, ಮದರಸಾ ಪ್ರಾಂಶುಪಾಲರು ಮತ್ತು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಕಾರಿಗಳು ಮೃತ ಅವಲಂಬಿತ ಕೋಟಾದಿಂದ ನೇಮಕಾತಿಗಳನ್ನು ಮಾಡಲು ಸಾಧ್ಯವಾಗುತ್ತದೆ ಎಂದು ಸಚಿವರು ಹೇಳಿದರು.

ಈ ಹಿಂದೆ ವ್ಯವಸ್ಥಾಪನಾ ಸಮಿತಿಯಲ್ಲಿ ಯಾವುದೇ ಸಮಸ್ಯೆ ಎದುರಾದರೆ ಮೃತರ ಅವಲಂಬಿತರಿಗೆ ಕೆಲಸ ಸಿಗದೇ ತೊಂದರೆ ಅನುಭವಿಸಬೇಕಾಗಿತ್ತು.ಅನುದಾನಿತ ಮದರಸಾಗಳ ಶಿಕ್ಷಕರು ಮತ್ತು ಬೋಧಕೇತರ ಸಿಬ್ಬಂದಿಯ ಅರ್ಜಿಯನ್ನು ಆಧರಿಸಿ, ಅವರನ್ನು ಈಗ ಸಂಬಂಧಪಟ್ಟ ಮದರಸಾಗಳ ವ್ಯವಸ್ಥಾಪಕರ ಒಪ್ಪಿಗೆ ಮತ್ತು ರಾಜ್ಯ ಮದ್ರಸಾ ಶಿಕ್ಷಣ ಮಂಡಳಿಯ ರಿಜಿಸ್ಟ್ರಾರ್ನ ಅನುಮೋದನೆಯೊಂದಿಗೆ ವರ್ಗಾಯಿಸಬಹುದು ಎಂದು ಅನ್ಸಾರಿ ಹೇಳಿದರು.

ಮದರಸಾಗಳಲ್ಲಿ ಕೆಲಸ ಮಾಡುವ ಮಹಿಳಾ ಉದ್ಯೋಗಿಗಳಿಗೂ ನಿಯಮಾನುಸಾರ ಹೆರಿಗೆ ರಜೆ ಮತ್ತು ಮಕ್ಕಳ ಆರೈಕೆ ರಜೆ ಸಿಗಲಿದೆ ಎಂದರು.ಏತನ್ಮಧ್ಯೆ, ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಮದರಿಸ್ ಅರೇಬಿಯಾ ದಿವಾನ್ ಸಾಹೇಬ್ ಜಮಾನï, ರಾಜ್ಯ ಸರ್ಕಾರದ ಈ ನಿರ್ಧಾರಗಳನ್ನು ಸ್ವಾಗತಿಸಿದ್ದಾರೆ.

Articles You Might Like

Share This Article