ಉಡುಪಿ,ಅ.15- ಸಮುದ್ರದಲ್ಲಿ ಈಜಲು ಹೋಗಿ ಮೂವರು ಅಪ್ರಾಪ್ತ ಬಾಲಕರು ಮುಳುಗಿ ಸಾವನ್ನಪ್ಪಿರುವ ಘಟನೆ ಬೈಂದೂರು ತಾಲ್ಲೂಕಿನ ಕಿರಿಮಂಜೇಶ್ವರ ಗ್ರಾಮದ ಬಳಿ ನಡೆದಿದೆ. ಮೃತರನ್ನು ಸಂಕೇತ್ (16), ಸೂರಜ್ (15) ಮತ್ತು ಆಶಿಶ್ (14) ಎಂದು ಗುರುತಿಸಲಾಗಿದೆ.
ಕಿರಿಮಂಜೇಶ್ವರ ಗ್ರಾಮದ ಬಳಿಯ ಕೊಡೇರಿ ಹೊಸಹಿತ್ಲುವಿನ ಕರಾವಳಿಯಲ್ಲಿ ಈ ಘಟನೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.ನಾಲ್ವರು ಅಪ್ರಾಪ್ತ ಬಾಲಕರು ಆಟವಾಡುತ್ತಾ ಸಮುದ್ರದಲ್ಲಿ ಈಜಾಡುವಾಗ ಮುಳುಗಿದ್ದಾರೆ. ಹೊರಗೆ ಬರಲು ಪ್ರಯತ್ನಿಸಿದರು ಸಾಧ್ಯವಾಗಲಿಲ್ಲ ಆದರೆ ಒಬ್ಬ ಈಜಿ ದಡ
ಸೇರಿದ ನಂತರ ಪೊಲೀಸರಿಗೆ ಮಾಹಿತಿ ಸಿಕ್ಕಿದೆ.
ಕಾರ್ಯಾಚರಣೆ ನಡೆಸಿ ಮೂರು ಬಾಲಕರ ಶವಗಳನ್ನುಪತ್ತೆಹಚ್ಚಿದ್ದೇವೆ ಒಬ್ಬ ಅಸ್ವಸ್ಥ ಗೊಂಡಿದ್ದು ಆಸ್ಪತ್ರೆಗೆ ದಾಖಲಿಸಿಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.ಸ್ಥಳೀಯ ಪೊಲೀಸರು ಘಟನೆ ಕುರಿತು ಮಾಹಿತಿ ಕಲೆ ಹಾಕುತ್ತಿದ್ದಾರೆ,ಮೃತರ ಕುಟುಂಬಗಳಿಗೆ ಮಾಹಿತಿ ನೀಡಲಾಗಿದೆ. ದುರಂತಕ್ಕೆ ಕಾರಣವೇನು ಎಂಬುದನ್ನು ಖಚಿತಪಡಿಸಿಕೊಳ್ಳಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.