Wednesday, April 30, 2025
Homeರಾಜ್ಯಮೇ 4ರಂದು ಯುಜಿನೀಟ್‌ ಪರೀಕ್ಷೆ : ರಾಜ್ಯದಲ್ಲಿ 381 ಪರೀಕ್ಷಾ ಕೇಂದ್ರ

ಮೇ 4ರಂದು ಯುಜಿನೀಟ್‌ ಪರೀಕ್ಷೆ : ರಾಜ್ಯದಲ್ಲಿ 381 ಪರೀಕ್ಷಾ ಕೇಂದ್ರ

UGENEET exam on May 4: 381 exam centers in the state

ಬೆಂಗಳೂರು, ಏ. 30-ರಾಷ್ಟ್ರದಾದ್ಯಂತ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ ವತಿಯಿಂದ 2025ರ ಯುಜಿನೀಟ್‌ ಪರೀಕ್ಷೆಯು ಮೇ 4 ರಂದು ನಡೆಯಲಿದೆ. ಅಂದು ಮಧ್ಯಾಹ್ನ 2 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ರಾಜ್ಯದಾದ್ಯಂತ ಒಟ್ಟು 381 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, 1,49,000 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ. ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1.30 ಗಂಟೆಯವರೆಗೆ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಹಾಜರಾಗಲು ಅವಕಾಶವಿರುತ್ತದೆ ಎಂದು ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ತಿಳಿಸಿದೆ.

ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಪ್ರವೇಶ ಪತ್ರದೊಂದಿಗೆ ಕಾಲೇಜಿನಿಂದ ನೀಡಿರುವ ಗುರುತಿನಚೀಟಿ, ಆಧಾರ್‌ ಕಾರ್ಡ್‌, ಪಾನ್‌ ಕಾರ್ಡ್‌, ಡಿ.ಎಲ್‌‍, ಮತದಾರರ ಗುರುತಿನಚೀಟಿ ಅಥವಾ ಇತರೆ ಯಾವುದಾದರೂ ಅಂಗೀಕೃತ ಗುರುತಿನ ಟೀಟಿ ಜೊತೆ, ಒಂದು ಪೋಸ್ಟ್‌ ಕಾರ್ಡ್‌ ಮತ್ತು ಎರಡು ಪಾಸ್‌‍ ಪೋರ್ಟ್‌ ಅಳತೆಯ ಫೋಟೋಗಳನ್ನು ಕಡ್ಡಾಯವಾಗಿ ತೆಗೆದುಕೊಂಡು ಹಾಜರಾಗಬೇಕು ಹೇಳಿದೆ.

ಅಂದು ಬೆಳಿಗ್ಗೆ 11 ಗಂಟೆಯಿಂದ ಎನ್‌ಟಿಎ ವತಿಯಿಂದ ನೇಮಿಸಿರುವ ಏಜೆನ್ಸಿಗಳಿಂದ ಸಂಬಂಧಪಟ್ಟ ನೋಂದಣಿ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗುವುದು ಹಾಗೂ ನಿಯೋಜಿತ ಪೊಲೀಸ್‌‍ ಸಿಬ್ಬಂದಿಯಿಂದ ವಿದ್ಯಾರ್ಥಿಗಳ ಸುರಕ್ಷತಾ ತಪಾಸಣೆಯನ್ನು ನಡೆಸಲಾಗುವುದು.
ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಬಯೋಮೆಟ್ರಿಕ್‌ ಹಾಜರಾತಿ ಕಡ್ಡಾಯವಾಗಿದ್ದು, ವಿದ್ಯಾರ್ಥಿಗಳು ಪ್ರವೇಶ ಪತ್ರದಲ್ಲಿ ನೀಡಲಾಗಿರುವ ಸೂಚನೆಗಳನ್ವಯ ಮಾರ್ಗಸೂಚಿಯನ್ನು ಪಾಲಿಸಬೇಕು.

ವಿದ್ಯಾರ್ಥಿಗಳು ಪೂರ್ಣ ತೋಳಿರುವ ಮೇಲಂಗಿ, ದೊಡ್ಡ ಬಟನ್‌ ಗಳಿರುವ ಅಂಗಿ, ಪ್ಯಾಂಟ್‌, ಶೂ, ಸಾಕ್‌್ಸ, ಎತ್ತರದ ಚಪ್ಪಲಿಗಳು, ಕಿವಿಯೋಲೆ, ಬಳೆ, ಸರ, ಕಾಲ್ಗೆಜ್ಜೆ, ಮೂಗುತಿ, ಜಡೆ ಕ್ಲಿಪ್‌ ಹಾಗೂ ಇತರ ಯಾವುದೇ ಲೋಹದ ಉಪಕರಣಗಳನ್ನು ಧರಿಸುವಂತಿಲ್ಲ ಹಾಗೂ ಯಾವುದೇ ರೀತಿಯ ಎಲೆಕ್ಟ್ರಾನಿಕ್‌ ಉಪಕರಣಗಳನ್ನು ತರುವಂತಿಲ್ಲ ಮತ್ತು ಧರಿಸುವಂತಿಲ್ಲ ಸ್ಪಷ್ಟಪಡಿಸಿದೆ.

ಪ್ರವೇಶಾತಿ ನೋಂದಣಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿಕೊಂಡ ವಿದ್ಯಾರ್ಥಿಗಳು ತಮ ನೋಂದಣಿ ಸಂಖ್ಯೆ ಇರುವ ಕೊಠಡಿಗೆ ನೇರವಾಗಿ ತೆರಳತಕ್ಕದ್ದು. ಮಧ್ಯಾಹ್ನ 2 ರಿಂದ ಸಂಜೆ 5 ಗಂಟೆಯವರೆಗೆ ಪರೀಕ್ಷೆಯು ನಡೆಯಲಿದ್ದು, ಪರೀಕ್ಷಾ ಅವಧಿಯಲ್ಲಿ ಪ್ರತಿ ಗಂಟೆಗೊಂದು ಬಾರಿ ಬೆಲ್‌ ಮೂಲಕ ಸೂಚನೆ ನೀಡಲಾಗುವುದು.

ಪರೀಕ್ಷಾ ಕೇಂದ್ರಗಳಿಗೆ ನಿರಂತರ ವಿದ್ಯುತ್‌ ವ್ಯವಸ್ಥೆ, ಆರೋಗ್ಯ ಸಿಬ್ಬಂದಿ ಹಾಗೂ ತುರ್ತು ಸೇವೆಗಳ ನಿಯೋಜನೆ, ಪರೀಕ್ಷಾ ಕೇಂದ್ರಗಳ ಸ್ವಚ್ಛತೆ ಮತ್ತು ಪರೀಕ್ಷೆಗೆ ಹಾಜರಾಗುವ ದಿವ್ಯಾಂಗರು /ವಿಶೇಷ ಚೇತನ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಮಿಲ್‌ ಚೇರ್‌ ವ್ಯವಸ್ಥೆ ಹಾಗೂ ತುರ್ತು ಆಗ್ನಿ ಶಾಮಕ ವ್ಯವಸ್ಥೆಯನ್ನು ಜಿಲ್ಲಾಡಳಿತದ ವತಿಯಿಂದ ಮಾಡಲಾಗುತ್ತದೆ ಎಂದು ತಿಳಿಸಿದೆ.

ಎನ್‌ಟಿಎ ವತಿಯಿಂದ ಪರೀಕ್ಷಾ ಕೇಂದ್ರಕ್ಕೆ ಜಾಮರ್‌ ಅಳವಡಿಕೆ ಮತ್ತು ಫ್ರಿಸ್ಕಿಂಗ್‌ ಮಾಡಲು ಏಜೆನ್ಸಿ ನೇಮಿಸಿದ್ದು, ಈ ಬಗ್ಗೆ ಪರೀಕ್ಷಾ ಕೇಂದ್ರದ ಮುಖ್ಯಸ್ವರು ಖಚಿತಪಡಿಸಿಕೊಳ್ಳಬೇಕು. ಪ್ರತಿ ಪರೀಕ್ಷಾ ಕೇಂದ್ರದಲ್ಲಿ ಪೊಲೀಸ್‌‍ ಸಿಬ್ಬಂದಿಯು ಪರೀಕ್ಷೆಗೆ ಹಾಜರಾಗಲಿರುವ ವಿದ್ಯಾರ್ಥಿಗಳನ್ನು ಸೂಕ್ತ ತಪಾಸಣೆಗೆ ಒಳಪಡಿಸುವರು. ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ನಿಷೇಧಾಜ್ಞೆ ಜಾರಿಗೆ ಕ್ರಮವಹಿಸಲಾಗಿದ್ದು, ಪರೀಕ್ಷಾ ಕೇಂದ್ರಗಳಿಗೆ ನಿಯೋಜಿತ ಅಧಿಕಾರಿ/ಸಿಬ್ಬಂದಿಯನ್ನು ಹೊರತುಪಡಿಸಿ, ಇತರೆ ಯಾವುದೇ ಸಾರ್ವಜನಿಕರಿಗೆ ಪ್ರವೇಶವಿರುವುದಿಲ್ಲ ಎಂದು ಪ್ರಕಟಣೆ ತಿಳಿಸಿದೆ.

RELATED ARTICLES

Latest News