ಉಕ್ರೇನಲ್ಲಿರುವ ವಿದ್ಯಾರ್ಥಿಗಳ ರಕ್ಷಣೆಗೆ ಅಗತ್ಯ ಕ್ರಮ : ಬಾಲಚಂದ್ರ ಜಾರಕಿಹೊಳಿ

Social Share

ಮೂಡಲಗಿ,ಫೆ.26- ಯುದ್ಧ ಸನ್ನಿವೇಶ ನಿರ್ಮಾಣ ವಾಗಿರುವ ಉಕ್ರೇನ್‍ನಲ್ಲಿ ಮೂಡಲಗಿ ತಾಲೂಕಿನ ಇಬ್ಬರು ವಿದ್ಯಾರ್ಥಿನಿಯರು ಸೇರಿದಂತೆ ಬೆಳಗಾವಿ ಜಿಲ್ಲಾಯ ಏಳು ವಿದ್ಯಾರ್ಥಿಗಳು ಸಿಕ್ಕಿಹಾಕಿಕೊಂಡಿದ್ದಾರೆ. ಅವರನ್ನು ಸುರಕ್ಷಿತವಾಗಿ ಕರೆತರಲು ಸಕಲ ವ್ಯವಸ್ಥೆ ಮಾಡುವಂತೆ ಈಗಾಗಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಲ್ಲಿ ಮನವಿ ಮಾಡಿದ್ದು, ಅವರು ಕೂಡ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಯುದ್ಧ ರಾಷ್ಟ್ರದಲ್ಲಿ ವಿದ್ಯಾರ್ಥಿಗಳು ಸಿಕ್ಕಿಹಾಕಿಕೊಂಡಿರುವುದರಿಂದ ವಿದ್ಯಾರ್ಥಿಗಳ ಪೋಷಕರು ಆತಂಕಗೊಂಡಿದ್ದಾರೆ. ಅದರಂತೆಯೇ ಮೂಡಲಗಿ ತಾಲೂಕಿನ ಹಳ್ಳೂರ ಗ್ರಾಮದ ಪ್ರೀತಿ ಚಬ್ಬಿ ಮತ್ತು ಪ್ರಿಯಾ ಚಬ್ಬಿ ಇಬ್ಬರು ವಿದ್ಯಾರ್ಥಿನಿಯರು ವೈದ್ಯಕೀಯ ಕೋರ್ಸ್‍ಗೆಂದು ಉಕ್ರೇನ್‍ಗೆ ತೆರಳಿದ್ದರು. ಈಗ ಅವರು ಅಪಾಯದ ಪರಿಸ್ಥಿತಿಯಲ್ಲಿ ಅವರನ್ನು ಸುರಕ್ಷಿತವಾಗಿ ಕರೆತರಲು ಸಿಎಂಗೆ ಮನವಿ ಮಾಡಿದ್ದೇನೆ ಎಂದು ತಿಳಿಸಿದರು.
ಇದರ ನಡುವೆ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿಗಳು ಕೂಡ ಇವರಿಬ್ಬರ ಪೋಷಕರೊಂದಿಗೆ ಸದಾ ಸಂಪರ್ಕದಲ್ಲಿದ್ದಾರೆ. ಮಾತ್ರವಲ್ಲ ಮುಖ್ಯಮಂತ್ರಿಗಳ ಜತೆಗೆ ನಾವು ಕೂಡ ಇವರಿಬ್ಬರ ಜತೆಗೆ ರಾಜ್ಯದ ಎಲ್ಲ ವಿದ್ಯಾರ್ಥಿಗಳು ಸುರಕ್ಷಿತವಾಗಿ ನಮ್ಮ ನಾಡಿಗೆ ಕರೆತರುವ ನಿಟ್ಟಿನಲ್ಲಿ ಸತತ ಸಂಪರ್ಕದಲ್ಲಿದ್ದೇನೆ. ಹೀಗಾಗಿ ಉಕ್ರೇನ್‍ನಲ್ಲಿ ಸಿಕ್ಕಿಹಾಕಿಕೊಂಡಿರುವ ವಿದ್ಯಾರ್ಥಿಗಳು ಮತ್ತು ಅವರ ಪೋಷಕರು ಯಾವುದೇ ರೀತಿಯ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ ಎಂದು ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದ್ದಾರೆ.

Articles You Might Like

Share This Article