ಕೀವ್,ಡಿ.21-ಉಕ್ರೇನ್ ರಾಜಧಾನಿ ಕೀವ್ ನಗರದ ಮೇಲೆ ರಷ್ಯಾ ತೀವ್ರತರ ದಾಳಿ ಮುಂದುವರೆಸಿರುವ ಸಂದರ್ಭದಲ್ಲಿ ಉಕ್ರೇನ್ ಅಧ್ಯಕ್ಷ ವ್ಲಾದಿಮಿರ್ ಝೆಲೆನ್ಸ್ಕಿ ಅವರು ಅಮೆರಿಕಾ ಅಧ್ಯಕ್ಷ ಜೋ ಬೈಡೆನ್ ಅವರನ್ನು ಭೇಟಿಯಾಗಲು ತೀರ್ಮಾನಿಸಿದ್ದಾರೆ.
ಕಳೆದ ಫೆಬ್ರವರಿಯಿಂದಲೇ ರಷ್ಯಾ ಉಕ್ರೇನ್ ಮೇಲೆ ನಿರಂತರ ದಾಳಿ ನಡೆಸುತ್ತಲೆ ಬಂದಿದೆ. ಆದರೆ, ಇದುವರೆಗೂ ವಿದೇಶ ಪ್ರವಾಸ ಕೈಗೊಳ್ಳದ ಅಧ್ಯಕ್ಷರು ಇದೇ ಮೊದಲ ಬಾರಿಗೆ ಅಮೆರಿಕ ಪ್ರವಾಸ ಕೈಗೊಳ್ಳಲಿದ್ದರೆ ಎಂದು ಉನ್ನತ ಮೂಲಗಳು ಖಚಿತಪಡಿಸಿವೆ.
ಉಭಯ ನಾಯಕರು ಶ್ವೇತಭವನದಲ್ಲಿ ಭೇಟಿಯಾಗುವ ನಿರೀಕ್ಷೆಯಿದೆ. ಝೆಲೆನ್ಸ್ಕಿಯವರ ಭೇಟಿಯ ನಂತರ ಅಮೆರಿಕ ಕೈವ್ ಸರ್ಕಾರಕ್ಕೆ ಪೇಟ್ರಿಯಾಟ್ ಕ್ಷಿಪಣಿಗಳನ್ನು ಕಳುಹಿಸಲು ಸಮ್ಮತಿಸುವ ಸಾಧ್ಯತೆಗಳಿವೆ ಎನ್ನಲಾಗಿದೆ.
ಕ್ಯಾಲಿಫೋರ್ನಿಯಾದಲ್ಲಿ ಪ್ರಬಲ ಭೂಕಂಪ, ಧರೆಗುರುಳಿದ ಮನೆಗಳು
ರಷ್ಯಾ ದಾಳಿಯನ್ನು ಸಮರ್ಥವಾಗಿ ನಿಭಾಯಿಸಲು ಅಮೆರಿಕ ಉಕ್ರೇನ್ಗೆ ಸಕಲ ನೆರವು ನೀಡುವುದಾಗಿ ಘೋಷಿಸುತ್ತಲೆ ಬಂದಿದೆ. ಹೀಗಾಗಿ ತುರ್ತು ಪರಿಸ್ಥಿತಿಯಲ್ಲಿ ದೊಡ್ಡಣ್ಣನ ಕೃಪೆ ಬಯಸಿ ಅವರು ಅಮೆರಿಕ ಪ್ರವಾಸ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ನಿಯಮ ಪಾಲಿಸಿ, ಇಲ್ಲವೆ ಯಾತ್ರೆ ನಿಲ್ಲಿಸಿ : ಕೇಂದ್ರ ಸರ್ಕಾರ ಎಚ್ಚರಿಕೆ
ಆದರೆ, ಇದುವರೆಗೂ ಯಾರು ಝೇಲೆನ್ಸ್ಕಿ ಅಮೆರಿಕ ಪ್ರವಾಸ ಕೈಗೊಂಡಿರುವುದನ್ನು ಖಚತಪಡಿಸಿಲ್ಲ. ಒಂದು ಮೂಲಗಳ ಪ್ರಕಾರ ಈಗಾಗಲೇ ಅವರು ಅಮೆರಿಕಾ ತಲುಪಿದ್ದಾರೆ ಎಂದು ವರದಿಯಾಗಿದೆ.
#Ukraine, #Zelensky, #planning, #visit, #US, #Wednesday,