ಶಿವಮೊಗ್ಗ,ಆ.3- ವಿಚಾರಣಾಧೀನ ಕೈದಿಯೊಬ್ಬ ನೇಣು ಬಿಗಿದುಕೊಂಡು ಆತಹತ್ಯೆ ಮಾಡಿಕೊಂಡಿರುವ ಘಟನೆ ಇಲ್ಲಿನ ಕೇಂದ್ರ ಕಾರಾಗೃಹದಲ್ಲಿ ನಡೆದಿದೆ. ಬಸವರಾಜ್(38) ಎಂಬ ಕೈದಿ ಜೈಲಿನ ಶರಾವತಿ ವಾರ್ಡ್‌ನ ಕೊಠಡಿ ಸಂಖ್ಯೆ 42ರಲ್ಲಿ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾನೆ.
ಘಟನೆ ಬಗ್ಗೆ ಮಾಹಿತಿ ತಿಳಿದ ಕೂಡಲೇ ಜೈಲಾಧಿಕಾರಿಗಳು ಸ್ಥಳಕ್ಕೆ ಧಾವಿಸಿ ಮೃತದೇಹವನ್ನು ಶಿವಮೊಗ್ಗ ಸರ್ಕಾರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮುಂದಿನ ತನಿಖೆ ಆರಂಭಿಸಿದ್ದಾರೆ. ಜೈಲಿನ ಭದ್ರತೆಯ ನಡುವೆಯೂ ಈ ಘಟನೆ ನಡೆದಿರುವುದು ಹಲವು ಚರ್ಚೆಗಳನ್ನು ಹುಟ್ಟು ಹಾಕಿದೆ.
ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ನಿವಾಸಿಯಾಗಿದ್ದ ಬಸವರಾಜ್ ಬಳ್ಳಾರಿ ಗಣಿಯಲ್ಲಿ ಲಾರಿ ಚಾಲಕನಾಗಿ ಕಾರ್ಯ ನಿರ್ವಹಿಸುತ್ತಿದ್ದ. ಶಿಕಾರಿಪುರ ಪಟ್ಟಣದ ಸೊಸೈಟಿ ಕೇರಿಯಲ್ಲಿ ಜೂ.11ರಂದು ತನ್ನ ಪತ್ನಿ ಮಂಜುಳಾ ಕೊಲೆ ಆರೋಪದ ಮೇಲೆ ಬಂಧನಕ್ಕೊಳಗಾಗಿ ಜೂ.13ರಂದು ಕಾರಾಗೃಹಕ್ಕೆ ಕಳುಹಿಸಲಾಗಿತ್ತು. ವಿಚಾರಣೆಗೊಳಗಾಗಿದ್ದ ಈತ ತೀವ್ರ ಮಾನಸಿಕ ಒತ್ತಡದಲ್ಲಿದ್ದ ಎಂದು ತಿಳಿದುಬಂದಿದೆ.
- 37ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಕೊಹ್ಲಿ
- ವರ್ಜೀನಿಯಾ ಲೆಫ್ಟಿನೆಂಟ್ ಗವರ್ನರ್ ಆದ ಭಾರತೀಯ ಮಹಿಳೆ
- ಬೆಂಗಳೂರಿನ ಇಂದಿನ ಕ್ರೈಂ ಸುದ್ದಿಗಳು
- ಬೆಂಗಳೂರಲ್ಲಿ ಹಾಡಹಗಲೇ ಮನೆಗೆ ನುಗ್ಗಿ ಮಹಿಳೆಯನ್ನು ಕೊಂದು ಮಾಂಗಲ್ಯ ಸರ ದೋಚಿದ ದುಷ್ಕರ್ಮಿಗಳು
- ನವೆಂಬರ್ ಕ್ರಾಂತಿಯ ಚರ್ಚೆ ಬೆನ್ನಲ್ಲೇ ಸಿದ್ದು ಬಲ ಪ್ರದರ್ಶನಕ್ಕೆ ಅಹಿಂದ ಸಮಾವೇಶ
