Sunday, April 28, 2024
Homeಬೆಂಗಳೂರುಬೈಕ್‌ನಲ್ಲಿ ಸಾಗಿಸುತ್ತಿದ್ದ ದಾಖಲೆಗಳಿಲ್ಲದ 25 ಲಕ್ಷ ರೂ. ವಶ

ಬೈಕ್‌ನಲ್ಲಿ ಸಾಗಿಸುತ್ತಿದ್ದ ದಾಖಲೆಗಳಿಲ್ಲದ 25 ಲಕ್ಷ ರೂ. ವಶ

ಬೆಂಗಳೂರು, ಮಾ.27- ಯಾವುದೇ ದಾಖಲೆಗಳಿಲ್ಲದೇ ದ್ವಿಚಕ್ರ ವಾಹನದಲ್ಲಿ ಸಾಗಿ ಸುತ್ತಿದ್ದ 25 ಲಕ್ಷ ಹಣವನ್ನು ಚುನಾವಣಾ ಅಧಿಕಾರಿಗಳು ಹಾಗೂ ಸಿಸಿಬಿ ಪೊಲೀಸರು ವಶಪಡಿಸಿಕೊಂಡಿದ್ದಾರೆ.ಹಲಸೂರು ಗೇಟ್ ಪೊಲೀಸ್ ಠಾಣಾ ವ್ಯಾಪ್ತಿಯ ಧರ್ಮರಾಯಸ್ವಾಮಿ ದೇವಸ್ಥಾನದ ಬಳಿ ನಿನ್ನೆ ಸಂಜೆ ವ್ಯಕ್ತಿಯೊಬ್ಬರು ದ್ವಿಚಕ್ರ ವಾಹನದಲ್ಲಿ 2 ಬ್ಯಾಗ್ಗಳಲ್ಲಿ 25 ಲಕ್ಷ ಹಣವನ್ನು ಸಾಗಿಸುತ್ತಿದ್ದ ಮಾಹಿತಿ ಚುನಾವಣಾಧಿಕಾರಿಗಳಿಗೆ ಲಭಿಸಿದೆ.

ತಕ್ಷಣ ಸಿಸಿಬಿ ಪೊಲೀಸರೊಂದಿಗೆ ಚುನಾವಣಾಧಿಕಾರಿಗಳು ದಾಳಿ ಮಾಡಿ ಬ್ಯಾಗ್ಗಳನ್ನು ಪರಿಶೀಲಿಸಿದಾಗ ಅದರಲ್ಲಿ 25 ಲಕ್ಷ ರೂ. ಹಣ ಇರುವುದು ಕಂಡುಬಂದಿದೆ. ದ್ವಿಚಕ್ರ ವಾಹನ ಸವಾರ ಈ ಹಣಕ್ಕೆ ಯಾವುದೇ ದಾಖಲೆ ನೀಡದ ಕಾರಣ ಹಣವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಈ ಹಣದ ಮೂಲದ ಬಗ್ಗೆ ಐಟಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದು, ಈ ಹಣ ಎಲ್ಲಿಂದ ಬಂತು, ಯಾರಿಗೆ ಸೇರಿದ್ದು, ಎಲ್ಲಿಗೆ ತೆಗೆದುಕೊಂಡು ಹೋಗಲಾಗುತ್ತಿತ್ತು ಎಂಬ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ.ಈ ಹಣ ವ್ಯಾಪಾರಿಯೊಬ್ಬರಿಗೆ ಸೇರಿದ್ದಾಗಿದೆ ಎಂಬುವುದು ಗೊತ್ತಾಗಿದ್ದು ತನಿಖೆ ಮುಂದುವರೆದಿದೆ. ಈ ಬಗ್ಗೆ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES

Latest News