ಪೂನಾ,ಅ.17-ಇಲ್ಲಿನ ವಿಶ್ರಾಂತಿವಾಡಿ ಚೌಕ್‍ನಲ್ಲಿ ಪೆಟ್ರೋಲ್ ಟ್ಯಾಂಕರ್ ಒಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂರು ವರ್ಷದ ಅವಳಿ ಸಹೋದರಿಯರು ಸಾವನ್ನಪ್ಪಿ ಅವರ ಪೋಷಕರು ತೀವ್ರವಾಗಿ ಗಾಯಗೊಂಡಿದ್ದಾರೆ. ಪೊಲೀಸರ ಪ್ರಕಾರ, ಸತೀಶ್ ಕುಮಾರ್ ಝಾ (40) ತನ್ನ 3 ವರ್ಷದ ಅವಳಿ ಹೆಣ್ಣುಮಕ್ಕಳು ಮತ್ತು ಹೆಂಡತಿಯೊಂದಿಗೆ ದ್ವಿಚಕ್ರ ವಾಹನದಲ್ಲಿ ವಿಶ್ರಂತಿವಾಡಿ ಚೌಕ್‍ನಲ್ಲಿ ಟ್ರಾಫಿಕ್ ಲೈಟ್‍ನಲ್ಲಿ ನಿಲ್ಲಿಸಿದ್ದಾಗ ಈ ಅಪಘಾತ ಸಂಭವಿಸಿದೆ.
ಸಿಗ್ನಲ್‍ನಲ್ಲಿ ಲೈಟ್ ಹಸಿರು ಬಣ್ಣಕ್ಕೆ ತಿರುಗುತ್ತಿದ್ದಂತೆ ಹಿಂದಿನಿಂದ ಬಂದ ಪೆಟ್ರೋಲ್ ಟ್ಯಾಂಕರ್ ಬೈಕ್‍ಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ನೆಲಕ್ಕೆ ಬಿದ್ದ ಇಬ್ಬರು ಮಕ್ಕಳು ತಕ್ಷಣವೇ ಸಾವನ್ನಪ್ಪಿದ್ದರೆ, ಅವರ ಪೋಷಕರು ಇಬ್ಬರೂ ಗಾಯಗೊಂಡಿದ್ದಾರೆ ಎಂದುಪೊಲೀಸರು ತಿಳಿಸಿದ್ದಾರೆ. ಆ ಪ್ರದೇಶದಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಅಪಘಾತದ ದೃಶ್ಯ ಸೆರೆಯಾಗಿದೆ. ಅಪಘಾತವಾದ ತಕ್ಷಣವೇ ಸ್ಥಳೀಯರು ಅವರನ್ನು ಆಸ್ಪತ್ರೆಗೆ ಸಾಗಿಸುವಲ್ಲಿ ಯಶಸ್ವಿಯಾಗಿದ್ದಾರೆ.
ವಿಶ್ವಸಂಸ್ಥೆಗೆ ಭಾರತದ ರಾಯಭಾರಿಯಾಗಿ ಅರಿಂದಮ್ ಬಾಗ್ಚಿ ನೇಮಕ
ಅಪಘಾತದಲ್ಲಿ ತಾಯಿ ಗಂಭೀರವಾಗಿ ಗಾಯಗೊಂಡಿದ್ದು, ಸಸೂನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ತಂದೆಗೆ ಸಣ್ಣಪುಟ್ಟ ಗಾಯಗಳಾಗಿವೆ. ಅಪಘಾತ ಮಾಡಿದ ಪೆಟ್ರೋಲ್ ಟ್ಯಾಂಕರ್ ಚಾಲಕನನ್ನು ಬಂಧಿಸಲಾಗಿದೆ. ಚೌಕ್‍ನಲ್ಲಿ ಸಿಗ್ನಲ್ ಹಸಿರು ಬಣ್ಣಕ್ಕೆ ತಿರುಗಿದ ತಕ್ಷಣ ಟ್ಯಾಂಕರ್ ಮೋಟಾರ್‍ಸೈಕಲ್‍ಗೆ ಡಿಕ್ಕಿ ಹೊಡೆದಿದೆ. ಟ್ರಕ್‍ನ ಚಾಲಕನನ್ನು ಭಾರತೀಯ ದಂಡ ಸಂಹಿತೆ ಮತ್ತು ಮೋಟಾರು ವಾಹನ ಕಾಯ್ದೆಯ ಸಂಬಂ„ತ ನಿಬಂಧನೆಗಳ ಅಡಿಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.