ಕರ್ನಾಟಕದಲ್ಲಿ ಜಾರಿಯಾಗುತ್ತಾ ಏಕರೂಪ ನಾಗರಿಕ ಸಂಹಿತೆ..?

Social Share

ಬೆಂಗಳೂರು,ಜ.2- ವಿಧಾನಸಭೆ ಚುನಾವಣೆ ಸನಿಹವಾಗುತ್ತಿದ್ದಂತೆ ರಾಜಕೀಯ ಅಜೆಂಡಾಗಳು ಮುನ್ನಲೆಗೆ ಬರುತ್ತಿವೆ. ಅದರಲ್ಲೂ ಏಕರೂಪ ನಾಗರಿಕ ಸಂಹಿತೆಯನ್ನು ರಾಜ್ಯದಲ್ಲಿ ಜಾರಿಗೊಳಿಸಲಾಗುತ್ತಾ ಎಂಬ ಪ್ರಶ್ನೆ ಉದ್ಭವಾಗಿದೆ.

ಬಿಜೆಪಿಯ ಶಾಸಕರೇ ಈ ಪ್ರಶ್ನೆ ಮುಂದುಟ್ಟಿದ್ದಾರೆ. ಆದರೆ ಕಾನೂನು ಇಲಾಖೆಯ ಮೌನ ಕುತೂಹಲ ಕೆರಳಿಸಿದೆ.
ರಾಜ್ಯದಲ್ಲಿ ಏಕರೂಪ ನಾಗರೀಕ ಸಂಹಿತೆಯನ್ನು ಜಾರಿಗೆ ತರಲು ಉದ್ದೇಶಿಸಲಾಗಿದೆಯೇ? ಇದರ ಸಾಧಕ-ಬಾಧಕಗಳ ಬಗ್ಗೆ ಅಧ್ಯಯನ ನಡೆಸಲಾಗಿದೆಯೇ? ಈ ನಿಟ್ಟಿನಲ್ಲಿ ಕೈಗೊಂಡ ಕ್ರಮಗಳೇನು? ಸಮಿತಿ ರಚನೆ ಮಾಡಲಾಗಿದೆಯಾ?

ರಚನೆ ಮಾಡಿದ್ದಲ್ಲಿ ಸಮಿತಿ ಸದಸ್ಯರ ವಿವರ ನೀಡುವಂತೆ ಕೋರಲಾಗಿದೆ. ಶಾಸಕ ಕೆ.ಜಿ ಬೋಪಯ್ಯ ಕಾನೂನು ಇಲಾಖೆಗೆ ಈ ಪ್ರಶ್ನೆಯನ್ನು ಕೇಳಿದ್ದರು. ಆದರೆ ಇಲಾಖೆ ಯಾವುದೇ ಉತ್ತರ ನೀಡಿಲ್ಲ. ಸರ್ಕಾರದ ಈ ನಿಲುವು ಸಹಜವಾಗಿ ಕುತೂಹಲ ಕೆರಳಿಸಿದೆ.

ಕಾರಾಗೃಹದ ಮೇಲೆ ಬಂದೂಕುಧಾರಿಗಳಿಂದ ದಾಳಿ, 14 ಮಂದಿ ಸಾವು, 24 ಕೈದಿಗಳು ಪರಾರಿ

ರಾಜ್ಯದಲ್ಲೂ ಏಕರೂಪ ನಾಗರಿಕ ಸಂಹಿತೆ ಜಾರಿಗೆ ತರುವ ಬಗ್ಗೆ ಗಂಭೀರ ಚಿಂತನೆ ನಡೆಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶಿವಮೊಗ್ಗದಲ್ಲಿ ಹೇಳಿದ್ದರು. ಆದರೆ ಈ ಬಗ್ಗೆ ಸರ್ಕಾರ ಯಾವುದೇ ಹೆಜ್ಜೆ ಇಟ್ಟಿಲ್ಲ.

ಸಮಾಜದಲ್ಲಿ ಸುಧಾರಣೆ ತರುವ ಪ್ರಯತ್ನಗಳು ನಡೆಯುತ್ತಿವೆ. ಏಕರೂಪ ನಾಗರಿಕ ಸಂಹಿತೆ ಜಾರಿಯೂ ಇದರಲ್ಲಿ ಒಂದಾಗಿದೆ. ಈ ಬಗ್ಗೆ ರಾಜ್ಯದಲ್ಲೂ ಗಂಭೀರ ಚರ್ಚೆ ನಡೆದಿದೆ ಎಂದಿದ್ದರು ಬೊಮ್ಮಾಯಿ.

ಈ ನಡುವೆ ಏಕರೂಪ ನಾಗರೀಕ ಸಂಹಿತೆಯ ಬಗ್ಗೆ ಸಾಕಷ್ಟು ಪರ ಹಾಗೂ ವಿರೋಧ ಚರ್ಚೆಗಳು ನಡೆಯುತ್ತಿವೆ. ರಾಜ್ಯಸಭೆಯಲ್ಲಿ ಬಿಜೆಪಿ ಸಂಸದರೊಬ್ಬರು ಮಂಡಿಸಿದ ಏಕರೂಪ ನಾಗರಿಕ ಸಂಹಿತೆಯ ಖಾಸಗಿ ಮಸೂದೆ ಭಾರೀ ಗದ್ದಲ, ವಾಗ್ದಾಳಿ ಕೋಲಾಹಲ ಸೃಷ್ಟಿಸಿತ್ತು.

ಕಳೆದ ವರ್ಷ ಜುಲೈನಲ್ಲೇ ರಾಜ್ಯದಲ್ಲಿ BF.7 ವೈರಸ್ ಪತ್ತೆಯಾಗಿತ್ತು..!

ರಾಜ್ಯ ಸಭೆಯಲ್ಲಿ ಪ್ರತಿಪಕ್ಷ ಸದಸ್ಯರು ಏಕರೂಪ ನಾಗರೀಕ ಸಂಹಿತೆ ಮಸೂದೆಗೆ ಆಕ್ಷೇಪಿಸಿದ್ದರು. ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿರುವ ಮಸೂದೆ ಹಿಂದಕ್ಕೆ ಪಡೆಯುವಂತೆ ಒತ್ತಾಯಿಸಿದ್ದರು. ಏಕರೂಪ ನಾಗರಿಕ ಸಂಹಿತೆ ದೇಶದ ವೈವಿಧ್ಯತೆಗೆ ಭಂಗ ತರಲಿದೆ. ಜಾತ್ಯತೀತ ತತ್ವಕ್ಕೆ ವಿರುದ್ಧವಾಗಿದೆ ಎಂಬುದು ಕಾಂಗ್ರೆಸ್ ಸೇರಿದಂತೆ ಜಾತ್ಯತೀತ ಪಕ್ಷಗಳ ನಿಲುವಾಗಿದೆ.

ಇನ್ನು ಕರ್ನಾಟಕದಲ್ಲಿ ಈಗಾಗಲೇ ಗೋಹತ್ಯೆ ನಿಷೇಧ ಕಾಯ್ದೆ, ಮತಾಂತರ ನಿಷೇಧ ಕಾಯ್ದೆಗಳನ್ನು ಜಾರಿಗೊಳಿಸಲಾಗಿದೆ. ಇದೀಗ ಚುನಾವಣೆಯ ಹಿನ್ನೆಲೆಯಲ್ಲಿ ಏಕರೂಪ ನಾಗರೀಕ ಸಂಹಿತೆಯನ್ನು ಜಾರಿಗೊಳಿಸಲಾಗುತ್ತದೆ ? ಎಂಬುದು ಕುತೂಹಲ ಕೆರಳಿಸಿದೆ.

Uniform Civil Code, assembly election, BJP,

Articles You Might Like

Share This Article