ನವದೆಹಲಿ,ಫೆ.1- ಈ ಬಾರಿಯ ಬಜೆಟ್‍ನಲ್ಲಿ ಕೃಷಿ ಹಾಗೂ ಮೀನುಗಾರಿಕೆ ಪ್ರೋತ್ಸಾಹಕ್ಕಾಗಿ ಹಲವಾರು ಕ್ರಮಗಳನ್ನು ಕೈಗೊಂಡಿರುವ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮ ಅವರು ಯುವ ಉದ್ಯಮಿಗಳಿಂದ ಕೃಷಿ-ಸ್ಟಾರ್ಟ್ ಅಪ್‍ಗಳನ್ನು ಉತ್ತೇಜಿಸಲು ‘ಕೃಷಿ ವೇಗವರ್ಧಕ ನಿಧಿ’ ಸ್ಥಾಪಿಸಲಾಗುವುದು ಎಂದು ಘೋಷಿಸಿದ್ದಾರೆ,
ಮಾತ್ರವಲ್ಲ, ಪಶುಸಂಗೋಪನೆ, ಹೈನುಗಾರಿಕೆ ಮತ್ತು ಮೀನುಗಾರಿಕೆಗೆ ಒತ್ತು ನೀಡಿ ಕೃಷಿ ಸಾಲದ ಗುರಿಯನ್ನು 20 ಲಕ್ಷ ಕೋಟಿಗೆ ಹೆಚ್ಚಿಸಲಾಗುವುದು ಎಂದು ಹೇಳುವ ಮೂಲಕ ಅನ್ನದಾತರ ಓಲೈಕೆಗೆ ಮುಂದಾಗಿದ್ಧಾರೆ.
ರೈತರಿಗೆ ಸಹಾಯ ಮಾಡಲು ಸರ್ಕಾರವು ಬೃಹತ್ ವಿಕೇಂದ್ರೀಕೃತ ಶೇಖರಣಾ ಸಾಮಥ್ರ್ಯವನ್ನು ಸ್ಥಾಪಿಸಲು ಮುಂದಾಗಿದೆ. ಮುಂದಿನ 3 ವರ್ಷಗಳಲ್ಲಿ ಒಂದು ಕೋಟಿ ರೈತರಿಗೆ ನೈಸರ್ಗಿಕ ಕೃಷಿಯನ್ನು ಅಳವಡಿಸಿಕೊಳ್ಳಲು ನೆರವು ನೀಡಲಾಗುವುದು. 10,000 ಜೈವಿಕ ಇನ್‍ಪುಟ್ ಸಂಪನ್ಮೂಲ ಕೇಂದ್ರಗಳನ್ನು ಸಹ ಸ್ಥಾಪಿಸಲಾಗುವುದು ಎಂದು ಅವರು ತಮ್ಮ ಬಜೆಟ್ ಭಾಷಣದಲ್ಲಿ ಹೇಳಿದ್ದಾರೆ.
ಬಜೆಟ್‍ನಲ್ಲಿ ಕರ್ನಾಟಕಕ್ಕೆ ಗುಡ್ ನ್ಯೂಸ್ : ಭದ್ರ ಮೇಲ್ದಂಡೆ ಯೋಜನೆಗೆ 5300 ಕೋಟಿ
ಭಾರತೀಯ ರಾಗಿ ಸಂಶೋಧನಾ ಸಂಸ್ಥೆಯನ್ನು ಶ್ರೇಷ್ಠತೆಯ ಕೇಂದ್ರವಾಗಿ ಬೆಂಬಲಿಸಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಸಂಸತ್ತಿನಲ್ಲಿ ಘೋಷಿಸಿದರು. ಕೃಷಿ ಸಾಲದ ವೆಚ್ಚ ಮತ್ತು ಅಗ್ರಿ ಕ್ರೆಡಿಟ್ ಸೊಸೈಟಿಗಳ ಡಿಜಿಟಲೀಕರಣವು ಆರ್ಥಿಕ ಬೆಳವಣಿಗೆಗೆ ಕ್ರೆಡಿಟ್ ಪ್ರವೇಶವು ಪ್ರಮುಖವಾಗಿದೆ ಎಂದು ಪುರುಚ್ಚರಿಸಿದ್ದಾರೆ.
Union Budget 2023, Announces, Rs 20 Lakh Crore, Credit, Target , Agriculture,