ಬೆಂಗಳೂರು,ಜ.28- ಕಿತ್ತೂರು ಕರ್ನಾಟಕವನ್ನು ಗುರಿಯಾಗಿಟ್ಟುಕೊಂಡು ಚುನಾವಣಾ ಚಾಣುಕ್ಯ, ಕೇಂದ್ರ ಗೃಹಸಚಿವ ಅಮಿತ್ ಷಾ ಅವರು ಇಂದು ನಡೆಸಿದ ರೋಡ್ ಶೋ ಹಾಗೂ ಪ್ರತ್ಯೇಕ ಸಭೆಗಳು ಕಾರ್ಯಕರ್ತರಲ್ಲಿ ಹೊಸ ಸಂಚಲನ ಸೃಷ್ಟಿಸಿದೆ.
ಕಳೆದ ರಾತ್ರಿ ದೆಹಲಿಯಿಂದ ವಿಶೇಷ ವಿಮಾನದಲ್ಲಿ ಬೆಳಗಾವಿಗೆ ಆಗಮಿಸಿದ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಬಳಿಕ ಪಕ್ಷದ ಅಧಿಕೃತ ಕಾರ್ಯಕ್ರಮಗಳಲ್ಲಿ ಭಾಗಿಯಾದರು. ಬೆಳಗಾವಿ, ಧಾರವಾಡ, ಹಾವೇರಿ, ಗದಗ ಸೇರಿದಂತೆ ಕಿತ್ತೂರು ಕರ್ನಾಟಕದ ಸುಮಾರು 35ಕ್ಕೂ ಹೆಚ್ಚು ವಿಧಾನಸಭಾ ಕ್ಷೇತ್ರಗಳನ್ನು ಗುರಿಯಾಗಿಟ್ಟುಕೊಂಡು ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಗರಿಷ್ಠ ಸ್ಥಾನ ಗೆಲ್ಲಲು ರಣತಂತ್ರ ರೂಪಿಸಿದರು.
ಬೆಳಗ್ಗೆ ಬೆಳಗಾವಿಯ ಖಾಸಗಿ ಹೋಟೆಲ್‍ನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಜೊತೆ ಪಕ್ಷದ ಸ್ಥಿತಿಗತಿ ಕುರಿತಂತೆ ಅಭಿಪ್ರಾಯ ಪಡೆದ ಅವರು, ಮೊದಲು ಬಣ ಬಡಿದಾಟಕ್ಕೆ ಕಡಿವಾಣ ಹಾಕಲು ಸೂಚನೆ ನೀಡಿದರು.
ಭಾರತ್ ಜೋಡೋ ಯಾತ್ರೆಗೆ ಸೂಕ್ತ ಭದ್ರತೆ ಒದಗಿಸಲು ಖರ್ಗೆ ಆಗ್ರಹ
ಮಾಜಿ ಸಚಿವರಾದ ರಮೇಶ್ ಜಾರಕಿಹೊಳಿ, ಲಕ್ಷ್ಮಣ್ ಸವದಿ, ಬಾಲಚಂದ್ರ ಜಾರಕಿಹೊಳಿ ಅವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಬೆಳಗಾವಿಯ ಒಟ್ಟು 18 ಕ್ಷೇತ್ರಗಳ ಪೈಕಿ ಕನಿಷ್ಟ 15 ಕ್ಷೇತ್ರಗಳನ್ನಾದರೂ ಬಿಜೆಪಿ ಗೆಲ್ಲಲೇಬೇಕೆಂದು ತಾಕೀತು ಮಾಡಿದರು.
ಆ ಬಣ, ಈ ಬಣ ಎನ್ನದೆ ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಬೇಕು. ಟಿಕೆಟ್ ಹಂಚಿಕೆಯನ್ನು ಕೇಂದ್ರ ಸಮಿತಿ ಮಾಡುತ್ತದೆ. ಯಾರಿಗೆ ಟಿಕೆಟ್ ಕೊಟ್ಟರೂ ಒಮ್ಮತದಿಂದ ಪಕ್ಷದ ಗೆಲುವಿಗೆ ಶ್ರಮಿಸಲು ಎಲ್ಲರಿಗೂ ಸೂಚಿಸಬೇಕೆಂದು ಮುಖ್ಯಮಂತ್ರಿ ಬೊಮ್ಮಾಯಿಗೆ ಸೂಚನೆ ನೀಡಿದರು.
ಖಾಸಗಿ ಹೋಟೆಲ್‍ನಲ್ಲಿ ಸ್ಥಳೀಯ ನಾಯಕರ ಜೊತೆ ಸಭೆ ನಡೆಸಿ ಬಳಿಕ ಅಕೃತ ಕಾರ್ಯಕ್ರಮದಲ್ಲಿ ಭಾಗಿಯಾದ ಬಳಿಕ ಧಾರವಾಡ ಜಿಲ್ಲೆ ಕುಂದಗೋಳದಲ್ಲಿ ಭರ್ಜರಿ ರೋಡ್ ಶೋ ನಡೆಸಿದರು. ನಗರದ ಪ್ರಮುಖ ಪಟ್ಟಣಗಳಲ್ಲಿ ರೋಡ್ ಶೋ ನಡೆಸಿದ್ದರಿಂದ ಒಂದು ರೀತಿಯ ಹಬ್ಬದ ವಾತಾವರಣ ಉಂಟಾಗಿ ಕಾರ್ಯಕರ್ತರಲ್ಲಿ ಹುಮ್ಮಸ್ಸು ಇಮ್ಮಡಿಗೊಂಡಿತು. ಕೇವಲ ಕುಂದಗೋಳವಲ್ಲದೆ ಅಕ್ಕಪಕ್ಕದ ಸಾವಿರಾರು ಸಂಖ್ಯೆಯ ಕಾರ್ಯಕರ್ತರು ಕೂಡ ಭಾಗಿಯಾಗಿದ್ದರು.
ಇನ್ನು ಕಾರ್ಯಕರ್ತರನ್ನು ಹುರಿದುಂಬಿಸುವ ಜೊತೆಗೆ ಜನರನ್ನು ಸೆಳೆಯಲು ಸಂಜೆ ಬೆಳಗಾವಿಯ ಕಿತ್ತೂರು ಕ್ಷೇತ್ರದ ವೀರ ಸೋಮೇಶ್ವರ ರಂಭಾಪುರಿ ಕಲ್ಯಾಣ ಮಂಟಪ ಮೈದಾನದಲ್ಲಿ ನಡೆದ ಜನಸಂಕಲ್ಪ ಸಮಾವೇಶದಲ್ಲಿ ಅಮಿತ್ ಷಾ ಭಾಗಿಯಾದರು.
ಕುಂದಗೋಳದ ನಂತರ ಎಂ.ಕೆ.ಹುಬ್ಬಳ್ಳಿಯಲ್ಲೂ ಸಹ ರೋಡ್ ಶೋ ನಡೆಸಿದ್ದು, ಸಮಾವೇಶದಲ್ಲಿ ಸಾವಿರಾರು ಜನ ಭಾಗಿಯಾಗಿದ್ದರು. ಕುಂದಗೋಳದಲ್ಲಿ ನಡೆದ ಬಿಜೆಪಿಯ ವಿಜಯ ಸಂಕಲ್ಪ ಅಭಿಯಾನದಲ್ಲಿ ಭಾಗಿಯಾದ ಬಳಿಕ ನಗರದ ಶಂಬುಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ ಸಲಿಸಿದರು.
ವಾರ್ಡ್ ನಂ. 7ರ ಮತಗಟ್ಟೆ ಸಂಖ್ಯೆ 50ರಲ್ಲಿ ವಾಲ್ ಪೇಂಟಿಂಗ್ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಇದಕ್ಕೂ ಮುನ್ನ ಅಮಿತ್ ಷಾ ಅವರು ಬೆಳಗ್ಗೆ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾದರು.
ಬಿಹಾರದಲ್ಲಿ ಸರಸ್ವತಿ ಮೆರವಣಿಗೆಯಲ್ಲಿ ಗುಂಡಿನ ದಾಳಿ, ಒಬ್ಬ ಸಾವು
ಕೆಎಲ್‍ಇ ಸಂಸ್ಥೆ ಕಾರ್ಯಕ್ರಮದ ಬಳಿಕ ಅಮಿತ್ ಶಾ, ಧಾರವಾಡ ವಿಶ್ವವಿದ್ಯಾಲಯಕ್ಕೆ ಆಗಮಿಸಿ, ವಿವಿ ಒಳಗೆ ನಿರ್ಮಾಣವಾಗುತ್ತಿರುವ ರಾಷ್ಟ್ರೀಯ ವಿಧಿವಿಜ್ಞಾನ ವಿಶ್ವವಿದ್ಯಾಲಯ ಕ್ಯಾಂಪಸ್‍ಗೆ ಶಂಕುಸ್ಥಾಪನೆ ನೆರವೇರಿಸಿದರು.
ದಕ್ಷಿಣ ಭಾರತದ ಮೊದಲ ವಿಶ್ವವಿದ್ಯಾಲಯ ನಿರ್ಮಾಣಕ್ಕೆ ಅಡಿಗಲ್ಲು ಹಾಕಿದ್ದು, ಕರ್ನಾಟಕ ವಿವಿ, ಕೃಷಿ ಮತ್ತು ಕಾನೂನು ವಿವಿ ಕ್ಯಾಂಪಸ್‍ನಲ್ಲೇ ಇದಕ್ಕಾಗಿ 42 ಎಕರೆ ಜಾಗವನ್ನೂ ಒದಗಿಸಲಾಗಿದೆ. ಆ ಮೂಲಕ ಯುವ ಮತದಾರರನ್ನು ಸೆಳೆಯುವ 2ನೇ ಯೋಜನೆ ಬಿಜೆಪಿಯದ್ದಾಗಿದೆ.
ಈ ಹಿಂದೆ ಅಮಿತ್ ಷಾ ಅವರು, ಡಿಸೆಂಬರ್ 30 ಮತ್ತು 31ರಂದು ಮಂಡ್ಯ ಜಿಲ್ಲೆ ಮತ್ತು ಬೆಂಗಳೂರಿಗೆ ಭೇಟಿ ನೀಡಿದ್ದರು. ರಾಜ್ಯದಲ್ಲಿ ಮತ್ತೆ ಅಕಾರ ಹಿಡಿಯುವ ಹಂಬಲದಲ್ಲಿರುವ ಬಿಜೆಪಿ ರಣತಂತ್ರಗಳನ್ನು ಹೂಡಿದ್ದು, ಪಕ್ಷದ ರಾಷ್ಟ್ರೀಯ ನಾಯಕರು ಉತ್ತರ ಕರ್ನಾಟಕವನ್ನು ಗುರಿಯಾಗಿಸಿಕೊಂಡು ಸತತವಾಗಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ರಾಜ್ಯಕ್ಕೆ ಪ್ರಧಾನಿ ನರೇಂದ್ರಮೋದಿ ಸೇರಿದಂತೆ ಬಿಜೆಪಿಯ ಘಟಾನುಘಟಿ ನಾಯಕರು ಆಗಮಿಸುತ್ತಿದ್ದಾರೆ.
Union Home, Minister, Amit Shah, Belagavi, Hubballi,