ನ್ಯಾಯಾಂಗ ಅಧಿಕಾರಿಗೆ ಹೈಕೋರ್ಟ್ ನ್ಯಾಯಾಧೀಶರಾಗಿ ಬಡ್ತಿ

Social Share

ನವದೆಹಲಿ, ಫೆ.25- ಮೊದಲ ಬಾರಿಗೆ ಕೇಂದ್ರ ಕಾನೂನು ಕಾರ್ಯದರ್ಶಿಯೊಬ್ಬರು ಹೈಕೋರ್ಟ್‍ನ ನ್ಯಾಯಾಧೀಶರಾಗಿ ನೇಮಕಗೊಂಡಿದ್ದಾರೆ. ಕಾನೂನು ಸಚಿವಾಲಯದ ನ್ಯಾಯಾಂಗ ಇಲಾಖೆಯ ಪ್ರಕಾರ, ಕೇಂದ್ರ ಕಾನೂನು ಕಾರ್ಯದರ್ಶಿ ಅನೂಪ್ ಕುಮಾರ್ ಮೆಂಡಿರಟ್ಟಾ ಅವರಿಗೆ ದೆಹಲಿ ಹೈಕೋರ್ಟ್‍ನ ನ್ಯಾಯಾಧೀಶರಾಗಿ ಬಡ್ತಿ ನೀಡಲಾಗಿದೆ. ನ್ಯಾಯಾಂಗ ಅಧಿಕಾರಿಯ ಹಿರಿತನದ ಆಧಾರದ ಮೇಲೆ ನ್ಯಾಯಾಧೀಶರನ್ನಾಗಿ ನೇಮಿಸಲಾಗಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.
ಇವರ ಹೆಸರನ್ನು ಸುಪ್ರೀಂ ಕೋರ್ಟ್ ಕೊಲಿಜಿಯಂ ಇತ್ತೀಚೆಗೆ ಶಿಫಾರಸು ಮಾಡಿತ್ತು. ಮೆಂಡಿರಟ್ಟಾ ಅವರು ಅಕ್ಟೋಬರ್ 2019 ರಲ್ಲಿ ಕಾನೂನು ಕಾರ್ಯದರ್ಶಿಯಾಗಿ ನೇಮಕವಾಗಿದ್ದರು. ಸೇವೆ ಸಲ್ಲಿಸುತ್ತಿರುವ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರನ್ನು ಕೇಂದ್ರ ಕಾನೂನು ಕಾರ್ಯದರ್ಶಿಯನ್ನಾಗಿ ಮಾಡಿದ್ದು ಕೂಡ ಮೊದಲನೆಯದು ಎಂದು ಹೇಳಲಾಗಿದೆ.
2023ರ ಮಾರ್ಚ್ 30 ರವರೆಗೆ ಅಂದರೆ ಅವರ 60 ವರ್ಷ ವಯಸ್ಸಿನವರೆಗೆ ಗುತ್ತಿಗೆ ಆಧಾರದ ಮೇಲೆ ಕಾನೂನು ಕಾರ್ಯದರ್ಶಿಯಾಗಿ ಕೆಲಸ ಮಾಡುವವರಿದ್ದರು. ಮೆಂಡಿರಟ್ಟಾ ಅವರಲ್ಲದೆ, ಇತರ ಮೂವರು ನ್ಯಾಯಾಂಗ ಅಧಿಕಾರಿಗಳಾದ ನೀನಾ ಬನ್ಸಾಲ್ ಕೃಷ್ಣ, ದಿನೇಶ್ ಕುಮಾರ್ ಶರ್ಮಾ ಮತ್ತು ಸುೀಧಿರ್ ಕುಮಾರ್ ಜೈನ್ ಅವರನ್ನು ದೆಹಲಿ ಹೈಕೋರ್ಟ್‍ನ ನ್ಯಾಯಮೂರ್ತಿಗಳಾಗಿ ಬಡ್ತಿ ನೀಡಲಾಗಿದೆ. ನ್ಯಾಯಾಂಗ ಇಲಾಖೆ ಶುಕ್ರವಾರ ಹೊಸ ನೇಮಕಾತಿಗಳ ಬಗ್ಗೆ ಟ್ವೀಟ್ ಮಾಡಿದೆ.

Articles You Might Like

Share This Article